India vs England | ಟೀಂ ಇಂಡಿಯಾಕ್ಕೆ ಆಘಾತ, ಇಂಜುರಿಯಿಂದ ಚೇತರಿಸಿಕೊಳ್ಳದ ಜಡೇಜಾ ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಔಟ್..!
India vs England: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಸೋತ ನಂತರ, ಭಾರತ ತಂಡಕ್ಕೆ ಮತ್ತೊಂದು ಶಾಕಿಂಗ್ ಸುದ್ದಿ ಎದುರಾಗಿದೆ. ಟೀಂ ಇಂಡಿಯಾ ಆಲ್‌ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ಸಂಪೂರ್ಣ ಸರಣಿಯಿಂದ ಹೊರಗುಳಿಯಲ್ಲಿದ್ದಾರೆ.
ಚೆನ್ನೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಸೋತ ನಂತರ, ಭಾರತ ತಂಡಕ್ಕೆ ಮತ್ತೊಂದು ಶಾಕಿಂಗ್ ಸುದ್ದಿ ಎದುರಾಗಿದೆ. ಟೀಂ ಇಂಡಿಯಾ ಆಲ್‌ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ಸಂಪೂರ್ಣ ಸರಣಿಯಿಂದ ಹೊರಗುಳಿಯಲ್ಲಿದ್ದಾರೆ ಎಂದು ಮೂಲಗಳ ಪ್ರಕಾರ ವರದಿಯಾಗಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಗಾಯಗೊಂಡಿದ್ದ ಜಡೇಜಾ, ಅಹಮದಾಬಾದ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಫಿಟ್ ಆಗುವ ನಿರೀಕ್ಷೆಯಿತ್ತು. ಈ ಕಾರಣಕ್ಕಾಗಿ, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿಯೂ (National Cricket Academy) ಅವರ ಫಿಟ್ನೆಸ್ ಅನ್ನು ಮೇಲ್ವಿಚಾರಣೆ ಮಾಡಲಾಗುತ್ತಿತ್ತು. ಆದರೆ ಈಗ ಅವರು ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಮರಳುವ ಸಾಧ್ಯತೆ ಸಂಪೂರ್ಣವಾಗಿ ಕೊನೆಗೊಂಡಿದೆ.
ಸಿಡ್ನಿ ಟೆಸ್ಟ್‌ನಲ್ಲಿ ಹೆಬ್ಬೆರಳಿನ ಇಂಜುರಿಗೆ ಒಳಗಾಗಿದ್ದರು.. ಆಸ್ಟ್ರೇಲಿಯಾ ಪ್ರವಾಸದಲ್ಲಿ, ರವೀಂದ್ರ ಜಡೇಜಾ ಅವರು ಸಿಡ್ನಿ ಟೆಸ್ಟ್‌ನಲ್ಲಿ ಹೆಬ್ಬೆರಳಿನ ಇಂಜುರಿಗೆ ಒಳಗಾಗಿದ್ದರು. ನಂತರ ಅವರನ್ನು ಬ್ರಿಸ್ಬೇನ್ ಟೆಸ್ಟ್‌ನಿಂದ ಕೈಬಿಡಲಾಯಿತು. ಈಗ ಮೂಲಗಳ ವರದಿಯ ಪ್ರಕಾರ, ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಿಂದ ಜಡೇಜಾ ಸಂಪೂರ್ಣವಾಗಿ ಹೊರಗುಳಿಯಲ್ಲಿದ್ದಾರೆ. ಚೆನ್ನೈನಲ್ಲಿ 2016 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಗೆಲುವಿನಲ್ಲಿ ಜಡೇಜಾ ಪ್ರಮುಖ ಪಾತ್ರ ವಹಿಸಿದ್ದರು.ಆ ಪಂದ್ಯದಲ್ಲಿ ಜಡೇಜಾ ಒಟ್ಟು ಹತ್ತು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದರಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಮೂರು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಏಳು ವಿಕೆಟ್ ಸೇರಿದೆ. ಅಷ್ಟೇ ಅಲ್ಲ, ಮೊದಲ ಇನ್ನಿಂಗ್ಸ್‌ನಲ್ಲಿ ಜಡೇಜಾ ಅದ್ಭುತ ಅರ್ಧಶತಕವನ್ನೂ ಗಳಿಸಿದ್ದರು.
ಶಹಬಾಜ್ ನದೀಮ್ ಆಯ್ಕೆಗೆ ಮಾಜಿ ಕ್ರಿಕೆಟಿಗರ ವಿರೋಧ.. ಚೆನ್ನೈನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ 227 ರನ್‌ಗಳಿಂದ ಸೋಲನುಭವಿಸಿತು. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಆರಿಸಿದ್ದ ಆಟಗಾರರ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿದ್ದಾವೆ. ಸ್ಪಿನ್ನರ್ ಕುಲದೀಪ್ ಯಾದವ್ ಅವರ ಸ್ಥಾನದಲ್ಲಿ ಶಹಬಾಜ್ ನದೀಮ್‌ಗೆ ಅವಕಾಶ ನೀಡಿದ್ದನ್ನು ಹಲವಾರು ಮಾಜಿ ಕ್ರಿಕೆಟಿಗರು ವಿರೋಧಿಸಿದ್ದರು. ನದೀಮ್ ಕೂಡ ಈ ಅವಕಾಶವನ್ನು ಬಳಸಿಕೊಳ್ಳಲು ಸಾಧ್ಯವಾಗಲಿಲ್ಲ. 59 ಓವರ್‌ಗಳಲ್ಲಿ 233 ರನ್ ನೀಡಿದ ನದೀಮ್, ಕೇವಲ ನಾಲ್ಕು ವಿಕೆಟ್‌ಗಳನ್ನು ಪಡೆದರು. ಜೊತೆಗೆ ಮೊದಲ ಟೆಸ್ಟ್‌ನಲ್ಲಿ ಬರೊಬ್ಬರಿ 9 ನೋಬಾಲ್ಗಳನ್ನು ಎಸೆದರು.
ರವೀಂದ್ರ ಜಡೇಜಾ ಭಾರತ ತಂಡಕ್ಕಾಗಿ 51 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 36.18 ಸರಾಸರಿಯಲ್ಲಿ 1954 ರನ್ ಗಳಿಸಿದ್ದಾರೆ. ಅವರ ಹೆಸರಲ್ಲಿ 1 ಶತಕ ಮತ್ತು 15 ಅರ್ಧ ಶತಕಗಳಿವೆ. ಈ ಸ್ವರೂಪದಲ್ಲಿ ಜಡೇಜಾ 220 ವಿಕೆಟ್‌ಗಳನ್ನು ಕೂಡ ಪಡೆದಿದ್ದಾರೆ.
India vs England Test Series | ಈ ಸರಣಿಯಲ್ಲೂ ನಿರ್ಣಾಯಕರಾಗುತ್ತಾರಾ ಎಡಗೈ ಸ್ಪಿನ್ನರ್ಗಳು