AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಇಂದು ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ! ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗ ಹೀಗಿರಬಹುದು?

India vs England: ಮೊದಲ ಮೂರು ಪಂದ್ಯಗಳಲ್ಲಿ ರಾಹುಲ್​, ಎರಡು ಪಂದ್ಯಗಳಲ್ಲಿ ಶೂನ್ಯ ಗಳಿಸಿದ್ದಾರೆ. ಆದರೆ ಕ್ಯಾಪ್ಟನ್ ಕೊಹ್ಲಿ ರಾಹುಲ್ ಅವರನ್ನು ತೀವ್ರವಾಗಿ ಸಮರ್ಥಿಸಿಕೊಂಡಿದ್ದಾರೆ.

India vs England: ಇಂದು ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ! ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗ ಹೀಗಿರಬಹುದು?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Mar 18, 2021 | 1:42 PM

Share

ಅಹಮದಾಬಾದ್​: ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇಂದು ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ತಯಾರಿ ನಡೆಸುತ್ತಿದೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ 20 ಸರಣಿಯ ಮೂರು ಪಂದ್ಯಗಳು ಈಗಾಗಲೇ ಮುಗಿದಿವೆ. ಇದರಲ್ಲಿ ಟೀಮ್ ಇಂಡಿಯಾ 1-2ರಿಂದ ಸರಣಿಯಲ್ಲಿ ಹಿನ್ನೆಡೆ ಅನುಭವಿಸಿದೆ. ಮೊದಲ ಪಂದ್ಯವನ್ನು ಇಂಗ್ಲೆಂಡ್ ಎಂಟು ವಿಕೆಟ್‌ಗಳಿಂದ ಗೆದ್ದರೆ, ಟೀಮ್ ಇಂಡಿಯಾ ಎರಡನೇ ಪಂದ್ಯದಲ್ಲಿ ಏಳು ವಿಕೆಟ್‌ಗಳಿಂದ ಜಯಗಳಿಸಿತು. ಇದರ ನಂತರ, ಮೂರನೇ ಟಿ 20 ಪಂದ್ಯದಲ್ಲಿ ಇಂಗ್ಲೆಂಡ್ ಮತ್ತೊಮ್ಮೆ ಜಯಗಳಿಸಿತು. ಈ ಮೂರು ಪಂದ್ಯಗಳಲ್ಲಿ ಭಾರತ ತಂಡದ ಆಡುವ ಹನ್ನೊಂದರ ಬಳಗವನ್ನು ಪ್ರತಿ ಪಂದ್ಯಗಳಲ್ಲೂ ಬದಲಾವಣೆ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಟಿ20 ಪಂದ್ಯಕ್ಕೆ ಯಾವೆಲ್ಲಾ ಬದಲಾವಣೆ ಮಾಡಲಿದ್ದಾರೆ ಎಂಬುದರ ಬಗ್ಗೆ ಎಲ್ಲರ ದೃಷ್ಟಿ ನೆಟ್ಟಿದೆ.

ಕೆ.ಎಲ್ ರಾಹುಲ್ ಅವರ ಕಳಪೆ ಫಾರ್ಮ್ ಈ ಸಮಯದಲ್ಲಿ ಟೀಮ್ ಇಂಡಿಯಾಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿರುವುದು ಕನ್ನಡಿಗ ಕೆಎಲ್ ರಾಹುಲ್ ಅವರ ಕಳಪೆ ಫಾರ್ಮ್​. ಮೊದಲ ಮೂರು ಪಂದ್ಯಗಳಲ್ಲಿ ರಾಹುಲ್​, ಎರಡು ಪಂದ್ಯಗಳಲ್ಲಿ ಶೂನ್ಯ ಗಳಿಸಿದ್ದಾರೆ. ಆದರೆ ಕ್ಯಾಪ್ಟನ್ ಕೊಹ್ಲಿ ರಾಹುಲ್ ಅವರನ್ನು ತೀವ್ರವಾಗಿ ಸಮರ್ಥಿಸಿಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಹುಲ್ ನಾಲ್ಕನೇ ಟಿ 20 ಯಲ್ಲೂ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುತ್ತಾರೆ ಎಂದು ನಂಬಲಾಗಿದೆ. ಆದರೆ, ಈ ಪಂದ್ಯದಲ್ಲಿ ರಾಹುಲ್ ಆರಂಭಿಕನಾಗುವ ಬದಲು ನಾಲ್ಕನೇ ಸ್ಥಾನಕ್ಕೆ ಇಳಿಯಬಹುದು ಎಂದು ನಿರೀಕ್ಷಿಸಲಾಗಿದೆ. ರೋಹಿತ್ ಶರ್ಮಾ ಅವರೊಂದಿಗೆ ಇಶಾನ್ ಕಿಶನ್ ಅವರನ್ನು ಓಪನರ್ ಆಗಿ ನೋಡಬಹುದಾಗಿದೆ. ಈ ಪರಿಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ತಮ್ಮ ಮೂರನೇ ಸ್ಥಾನಕ್ಕೆ ಮರಳಲಿದ್ದಾರೆ.

ಯಜ್ವೇಂದ್ರ ಚಹಲ್ ಔಟ್? ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಬ್ಯಾಟ್ ಮೂಲಕ ತಂಡವನ್ನು ಬಲಪಡಿಸಲಿದ್ದಾರೆ. ಆದರೆ, ಬೌಲಿಂಗ್ ವಿಭಾಗದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್ ಮತ್ತು ಶಾರ್ದುಲ್ ಠಾಕೂರ್ ತಮ್ಮ ಕೆಲಸವನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ. ಆದರೆ, ಯಜ್ವೇಂದ್ರ ಚಾಹಲ್ ಅವರ ಪ್ರತಿಭೆಗೆ ತಕ್ಕಂತ ಯಶಸ್ಸು ಈ ಸರಣಿಯಲ್ಲಿ ಅವರಿಗೆ ಸಿಕ್ಕಿಲ್ಲ. ಸರಣಿಯ ಮೂರು ಪಂದ್ಯಗಳಲ್ಲಿ ಅವರ ರನ್​ರೆಟ್​ ಪ್ರಮಾಣವು ತುಂಬಾ ಹೆಚ್ಚಾಗಿದೆ. ಜೊತೆಗೆ ವಿಕೆಟ್‌ ಪಡೆಯುವುದರಲ್ಲೂ ಚಾಹಲ್​ ಯಾವುದೇ ಗಮನಾರ್ಹ ಸಾಧನೆ ಮಾಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ರಾಹುಲ್ ಚಹರ್ ಅವರನ್ನು ಚಾಹಲ್ ಬದಲಿಗೆ ಆಡುವ ಹನ್ನೊಂದರಲ್ಲಿ ಸೇರಿಸಿಕೊಳ್ಳಬಹುದು ಎಂದು ನಿರೀಕ್ಷೆ ಇದೆ. ಮುಂಬೈ ಇಂಡಿಯನ್ಸ್ ತಂಡಕ್ಕೆ ಐದನೇ ಐಪಿಎಲ್ ಪ್ರಶಸ್ತಿಯನ್ನು ಗಳಿಸುವಲ್ಲಿ ರಾಹುಲ್ ಚಹರ್ ಸಹಕಾರಿಯಾಗಿದ್ದರು.

ಭಾರತದ ಸಂಭವನೀಯ ಹನ್ನೊಂದು ಹೀಗಿರಬಹುದು ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಭುವನೇಶ್ವರ ಕುಮಾರ್, ಶಾರ್ದುಲ್ ಠಾಕೂರ್.

ಇದನ್ನೂ ಓದಿ: India vs England: ಇಂದು ಟೀಂ ಇಂಡಿಯಾಕ್ಕೆ ಅಗ್ನಿಪರೀಕ್ಷೆ! ಮೋದಿ ಮೈದಾನದಲ್ಲಿ ಟಾಸ್ ಗೆದ್ದವನೇ ಬಾಸ್.. ಯಾರಿಗಿದೆ ಅದೃಷ್ಟ?

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ