IND vs NZ: ಭಾರತ- ಕಿವೀಸ್ 2ನೇ ಟೆಸ್ಟ್ ಎಲ್ಲಿ, ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

India vs New Zealand 2nd Test Live Streaming: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಗುರುವಾರದಿಂದ ಪುಣೆಯಲ್ಲಿ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಸೋತು ಹಿನ್ನಡೆಯಲ್ಲಿರುವ ಭಾರತ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಸಮಬಲಗೊಳಿಸಲು ಬಯಸಿದೆ.

IND vs NZ: ಭಾರತ- ಕಿವೀಸ್ 2ನೇ ಟೆಸ್ಟ್ ಎಲ್ಲಿ, ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?
ಭಾರತ- ನ್ಯೂಜಿಲೆಂಡ್
Follow us
|

Updated on: Oct 23, 2024 | 5:57 PM

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಟೆಸ್ಟ್ ಪಂದ್ಯಗಳ ಸರಣಿಯ ಎರಡನೇ ಪಂದ್ಯವು ಅಕ್ಟೋಬರ್ 24 ರಿಂದ ಪುಣೆಯಲ್ಲಿ ನಡೆಯಲಿದೆ. ಭಾರತ ತಂಡ ಮೊದಲ ಪಂದ್ಯದಲ್ಲಿ ಸೋಲನುಭವಿಸಿರುವುದರಿಂದ ಸರಣಿಯಲ್ಲಿ 0-1 ರಿಂದ ಹಿನ್ನಡೆ ಸಾಧಿಸಿದೆ. ಹೀಗಿರುವಾಗ ಪುಣೆ ಟೆಸ್ಟ್‌ ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯೊಂದಿಗೆ ರೋಹಿತ್ ಪಡೆ ಕಣಕ್ಕಿಳಿಯಲಿದೆ. ಅಲ್ಲದೆ ಬೆಂಗಳೂರಿನಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಂಡು ಟೀಂ ಇಂಡಿಯಾ ಕಣಕ್ಕಿಳಿಯಬೇಕಿದೆ. ಏಕೆಂದರೆ ಪುಣೆ ಟೆಸ್ಟ್ ಗೆಲುವು ಟೀಂ ಇಂಡಿಯಾಕ್ಕೆ ಅತ್ಯವಶ್ಯಕವಾಗಿದೆ. ಒಂದು ವೇಳೆ ಟೀಂ ಇಂಡಿಯಾ ಪುಣೆ ಟೆಸ್ಟ್ ಸೋತರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಭಾರತ ಮೊದಲ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಅಲ್ಲದೆ ಭಾರತ ಈ ಸರಣಿಯನ್ನು ಸೋತರೆ ಸತತ ಮೂರನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಆಡುವ ಕನಸು ಭಗ್ನವಾಗಬಹುದು.

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲ್ಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಯಾವಾಗ ಆರಂಭವಾಗಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಅಕ್ಟೋಬರ್ 24 ರಿಂದ ಆರಂಭವಾಗಲಿದ್ದು, ಬೆಳಗ್ಗೆ 9 ಗಂಟೆಗೆ ಟಾಸ್ ನನಡೆಯಲ್ಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯವನ್ನು ಟಿವಿಯಲ್ಲಿ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಸ್ಪೋರ್ಟ್ಸ್ 18 ಚಾನೆಲ್​ನಲ್ಲಿ ಪ್ರಸಾರ ಮಾಡಲಾಗುತ್ತದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ಲಭ್ಯವಿರುತ್ತದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2 ನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್.

ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ಟಾಮ್ ಲೇಥಮ್ (ನಾಯಕ), ವಿಲ್ ಯಂಗ್, ಕೇನ್ ವಿಲಿಯಮ್ಸನ್, ಮೈಕಲ್ ಬ್ರೇಸ್‌ವೆಲ್, ಡೇರಿಲ್ ಮಿಚೆಲ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಟಾಮ್ ಬ್ಲುಂಡೆಲ್ (ವಿಕೆಟ್ ಕೀಪರ್), ಮಾರ್ಕ್ ಚಾಪ್‌ಮನ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಮ್ಯಾಟ್ ಹೆನ್ರಿ , ಜಾಕೋಬ್ ಡಫಿ, ಅಜಾಜ್ ಪಟೇಲ್, ವಿಲಿಯಂ ಓ’ರೂರ್ಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ
ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ