IND vs SA: ಟಾಸ್ ಗೆದ್ದ ಸೌತ್ ಆಫ್ರಿಕಾ: ಹೀಗಿದೆ ಪ್ಲೇಯಿಂಗ್ ಇಲೆವೆನ್
India vs South Africa ODI: ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಈವರೆಗೆ 95 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 41 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಸೌತ್ ಆಫ್ರಿಕಾ ತಂಡ 51 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಮೂರು ಮ್ಯಾಚ್ಗಳು ಕಾರಣಾಂತರದಿಂದ ರದ್ದಾಗಿದ್ದವು.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದೆ. ರಾಯ್ಪುರದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಈ ಪಂದ್ಯದಲ್ಲೂ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿರುವುದು ಕೆಎಲ್ ರಾಹುಲ್.
ಭಾರತ ಏಕದಿನ ತಂಡದ ನಾಯಕ ಶುಭ್ಮನ್ ಗಿಲ್ ಕುತ್ತಿಗೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಸರಣಿಯಿಂದ ಹೊರಗುಳಿದಿದ್ದು, ಅವರ ಬದಲಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಸರಣಿ ನಿರ್ಣಾಯಕ ಪಂದ್ಯ:
ಈ ಪಂದ್ಯವು ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲೂ ಟೀಮ್ ಇಂಡಿಯಾ ಗೆದ್ದರೆ 2-0 ಅಂತರದಿಂದ ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಗೆದ್ದು ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಾದ ಅನಿವಾರ್ಯತೆ ಸೌತ್ ಆಫ್ರಿಕಾ ತಂಡಕ್ಕಿದೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲ ಮ್ಯಾಚ್ನಲ್ಲಿ ಕಣಕ್ಕಿಳಿದ ಬಳಗವನ್ನೇ ಮುಂದುವರೆಸಲಾಗಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.
ಸೌತ್ ಆಫ್ರಿಕಾ ಪ್ಲೇಯಿಂಗ್ XI: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ , ಮ್ಯಾಥ್ಯೂ ಬ್ರೀಟ್ಝ್ಕೆ, ಟೋನಿ ಡಿ ಝೋರ್ಝಿ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ನಾಂಡ್ರೆ ಬರ್ಗರ್, ಲುಂಗಿ ಎನ್ಗಿಡಿ, ಕೇಶವ್ ಮಹಾರಾಜ್.
ಉಭಯ ತಂಡಗಳು:
ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.
ಇದನ್ನೂ ಓದಿ: ಸ್ಫೋಟಕ ಸೆಂಚುರಿ… ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ
ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ, ಒಟ್ನೀಲ್ ಬಾರ್ಟ್‌ಮ್ಯಾನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಟ್ಝ್ಕೆ, ಡೆವಾಲ್ಡ್ ಬ್ರೆವಿಸ್, ನಾಂಡ್ರೆ ಬರ್ಗರ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಝಿ, ರೂಬಿನ್ ಹರ್ಮನ್, ಕೇಶವ್ ಮಹಾರಾಜ್, ಮಾರ್ಕೊ ಯಾನ್ಸೆನ್, ಐಡೆನ್ ಮಾರ್ಕ್ರಾಮ್, ಲುಂಗಿ ಎನ್ಗಿಡಿ, ರಯಾನ್ ರಿಕೆಲ್ಟನ್, ಪ್ರೆನೆಲನ್ ಸುಬ್ರಯೆನ್.
Published On - 1:04 pm, Wed, 3 December 25
