India vs Sri Lanka, 2nd ODI: ಲಂಕಾ ವಿರುದ್ಧ ಭಾರತ ಜಯಭೇರಿ: ಸರಣಿ ಕೈವಶ

India vs Sri Lanka, 2nd ODI: 216 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ರೋಹಿತ್ ಶರ್ಮಾ 17 ರನ್​ಗಳಿಸಿ ಕರುಣರತ್ನೆಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ (21) ಕೂಡ ನಿರ್ಗಮಿಸಿದರು.

India vs Sri Lanka, 2nd ODI: ಲಂಕಾ ವಿರುದ್ಧ ಭಾರತ ಜಯಭೇರಿ: ಸರಣಿ ಕೈವಶ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 12, 2023 | 8:52 PM

India vs Sri Lanka, 2nd ODI: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ಗುವಾಹಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು 67 ರನ್​ಗಳಿಂದ ಜಯ ಸಾಧಿಸಿತ್ತು. ಇದೀಗ 2ನೇ ಪಂದ್ಯದಲ್ಲೂ ಲಂಕಾ ತಂಡವನ್ನು ಬಗ್ಗು ಬಡಿದು ಸರಣಿ ಜಯಿಸಿರುವುದು ವಿಶೇಷ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ 6ನೇ ಓವರ್​ನಲ್ಲೇ ಅವಿಷ್ಕ ಫರ್ನಾಂಡೊ ವಿಕೆಟ್ ಪಡೆದು ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟಿದ್ದರು.

ಆ ಬಳಿಕ ಜೊತೆಯಾದ ಕುಸಾಲ್ ಮೆಂಡಿಸ್ ಹಾಗೂ ನುವಾನಿಡು 73 ರನ್​​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ದಾಳಿಗಿಳಿದ ಕುಲ್ದೀಪ್ ಯಾದವ್ ಕುಸಾಲ್ ಮೆಂಡಿಸ್ (34) ರನ್ನು ಎಲ್​ಬಿ ಬಲೆಗೆ ಬೀಳಿಸಿದರು. ಇದರ ಬೆನ್ನಲ್ಲೇ ಅಕ್ಷರ್ ಪಟೇಲ್ ಧನಂಜಯ್ ಡಿಸಿಲ್ವಾರನ್ನು ಶೂನ್ಯಕ್ಕೆ ಕ್ಲೀನ್ ಬೌಲ್ಡ್ ಮಾಡಿದರು. ನಂತರ ಕಣಕ್ಕಿಳಿದ ಚರಿತ್ ಅಸಲಂಕಾ (15) ಹಾಗೂ ದಸುನ್ ಶಾನಕ (2) ಕೂಡ ಕುಲ್ದೀಪ್ ಸ್ಪಿನ್ ಮೋಡಿಗೆ ಬಲಿಯಾದರು. ಇನ್ನು ವನಿಂದು ಹಸರಂಗ (21) ಹಾಗೂ ಚಮಿಕ ಕರುಣರತ್ನೆ ಉಮ್ರಾನ್ ಮಲಿಕ್​ಗೆ ವಿಕೆಟ್ ಒಪ್ಪಿಸಿದರು.

ಇನ್ನು ದುನಿತ್ ವೆಲ್ಲಲಗೆ (32) ಗೆ ಸಿರಾಜ್ ಪೆವಿಲಿಯನ್ ಹಾದಿ ತೋರಿಸಿದರು. ಅಂತಿಮವಾಗಿ ಕಣಕ್ಕಿಳಿದ ಲಹಿರು ಕುಮಾರರನ್ನು ಶೂನ್ಯಕ್ಕೆ ಕ್ಲೀನ್ ಬೌಲ್ಡ್ ಮಾಡುವ ಮೂಲಕ ಸಿರಾಜ್ ಶ್ರೀಲಂಕಾ ತಂಡವನ್ನು 39.4 ಓವರ್​ಗಳಲ್ಲಿ 215 ರನ್​ಗಳಿಗೆ ಆಲೌಟ್ ಮಾಡಿದರು. ಟೀಮ್ ಇಂಡಿಯಾ ಪರ ಸಿರಾಜ್ 5.4 ಓವರ್​ಗಳಲ್ಲಿ 30 ರನ್ ನೀಡಿ 3 ವಿಕೆಟ್ ಪಡೆದರೆ, 10 ಓವರ್​ಗಳಲ್ಲಿ 51 ರನ್​ ನೀಡಿ ಕುಲ್ದೀಪ್ 3 ವಿಕೆಟ್ ಕಬಳಿಸಿದರು. ಇನ್ನು ಉಮ್ರಾನ್ ಮಲಿಕ್ 7 ಓವರ್​ಗಳಲ್ಲಿ 48 ರನ್ ನೀಡಿ 2 ವಿಕೆಟ್ ಪಡೆದರು.

ಇದನ್ನೂ ಓದಿ
Image
IPL 2023: ಐಪಿಎಲ್​ನಿಂದ ಹೊರಬಿದ್ದ ರಿಷಭ್ ಪಂತ್​ಗೆ ಸಿಗಲಿದೆ 21 ಕೋಟಿ ರೂ.
Image
Suryakumar Yadav: ರಾಹುಲ್ ದಾಖಲೆ ಉಡೀಸ್: ಹೊಸ ವಿಶ್ವ ದಾಖಲೆ ನಿರ್ಮಿಸಿದ ಸೂರ್ಯ
Image
Suryakumar Yadav: ತೂಫಾನ್ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
Image
Virat Kohli – Rohit Sharma: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ-ರೋಹಿತ್​ಗಿಲ್ಲ ಚಾನ್ಸ್​?

216 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ರೋಹಿತ್ ಶರ್ಮಾ 17 ರನ್​ಗಳಿಸಿ ಕರುಣರತ್ನೆಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ (21) ಕೂಡ ನಿರ್ಗಮಿಸಿದರು. ಇನ್ನು ಕಳೆದ ಪಂದ್ಯದ ಶತಕದ ಸರದಾರ ವಿರಾಟ್ ಕೊಹ್ಲಿ ರನ್​ ಖಾತೆ ತೆರೆಯಲು 8 ಬಾಲ್​ಗಳನ್ನು ತೆಗೆದುಕೊಂಡಿದ್ದರು. ಅಷ್ಟೇ ಅಲ್ಲದೆ ಒಂದು ಫೋರ್ ಬಾರಿಸಿ ಲಹಿರು ಕುಮಾರ್ ಎಸೆತದಲ್ಲಿ ಬೌಲ್ಡ್ ಆದರು.

ಈ ಹಂತದಲ್ಲಿ ಜೊತೆಯಾದ ಶ್ರೇಯಸ್ ಅಯ್ಯರ್ ಕೂಡ ಕೆಎಲ್ ರಾಹುಲ್ ತಂಡವನ್ನು ಆರಂಭಿಕ ಆಘಾತದಿಂದ ಮೇಲೆತ್ತಿದ್ದರು. ಇದಾಗ್ಯೂ 28 ರನ್​ ಬಾರಿಸಿದ ಅಯ್ಯರ್ ರಜಿತ ಎಸೆತವನ್ನು ಗುರುತಿಸುವಲ್ಲಿ ಎಡವಿ ಎಲ್​ಬಿ ಬಲೆಗೆ ಬಿದ್ದರು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಹಾರ್ದಿಕ್ ಪಾಂಡ್ಯ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದರು.

ಅದರಂತೆ ಕೆಎಲ್ ರಾಹುಲ್ ಜೊತೆಗೂಡಿ 75 ರನ್​ಗಳ ಜೊತೆಯಾಟವಾಡಿದ ಹಾರ್ದಿಕ್ ಪಾಂಡ್ಯ 36 ರನ್​ಗಳಿಸಿ ಔಟಾದರು. ಅಷ್ಟರಲ್ಲಾಗಲೇ ಟೀಮ್ ಇಂಡಿಯಾ ಮೊತ್ತ 150ರ ಗಡಿದಾಟಿತ್ತು. ಇದಾಗ್ಯೂ ಮತ್ತೊಂದೆಡೆ ಕೆಎಲ್ ರಾಹುಲ್ ಕ್ರೀಸ್ ಕಚ್ಚಿ ನಿಂತಿದ್ದರು. ಅಕ್ಷರ್ ಪಟೇಲ್ ಜೊತೆ ಉತ್ತಮ ಹೊಂದಾಣಿಕೆಯ ಆಟ ಪ್ರದರ್ಶಿಸಿದ ಕೆಎಲ್ ರಾಹುಲ್ 92 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇನ್ನು ಅಜೇಯ 64 ರನ್​ ಬಾರಿಸುವ ಮೂಲಕ ಕೆಎಲ್ ರಾಹುಲ್ 43.2 ಓವರ್​ನಲ್ಲಿ 6 ವಿಕೆಟ್ ನಷ್ಟಕ್ಕೆ ತಂಡವನ್ನು ಗೆಲುವಿನ ದಡ ಸೇರಿಸಿದರು. 4 ವಿಕೆಟ್​ಗಳ ಜಯಭೇರಿ ಬಾರಿಸುವ ಮೂಲಕ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ.

SL 215 (39.4)

IND 219/6 (43.2)

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್​ಮನ್​ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್

ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೋ, ನುವಾನಿಡು ಫೆರ್ನಾಂಡೋ, ಕುಸಲ್ ಮೆಂಡಿಸ್ , ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಕಸುನ್ ರಜಿತ

Published On - 8:48 pm, Thu, 12 January 23

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ