IND vs SL: ಇಂದು ಎರಡನೇ ಏಕದಿನ: ಭಾರತ ಪರ ಪದಾರ್ಪಣೆ ಮಾಡಲಿದ್ದಾರೆ ಈ ಆಟಗಾರ?

India vs Sri lanka: ಟೀಮ್ ಇಂಡಿಯಾದಲ್ಲಿ ಇಂದಿನ ಪಂದ್ಯಕ್ಕೆ ಎರಡು ಪ್ರಮುಖ ಬದಲಾವಣೆ ನಿರೀಕ್ಷೆ ಮಾಡಲಾಗಿದೆ. ಅದು ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ.

IND vs SL: ಇಂದು ಎರಡನೇ ಏಕದಿನ: ಭಾರತ ಪರ ಪದಾರ್ಪಣೆ ಮಾಡಲಿದ್ದಾರೆ ಈ ಆಟಗಾರ?
india vs sri lanka

ಇಂದು ಭಾರತ ಹಾಗೂ ಶ್ರೀಲಂಕಾ (India vs Sri lanka) ನಡುವೆ ಎರಡನೇ ಏಕದಿನ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ 7 ವಿಕೆಟ್​ಗಳಿಂದ ಗೆದ್ದು ವಿಶ್ವಾಸದಲ್ಲಿರುವ ಟೀಮ್ ಇಂಡಿಯಾ (Team India), ಇಂದಿನ ಪಂದ್ಯವನ್ನೂ ಜಯಿಸಿ ಸರಣಿ ವಶಪಡಿಸಿಕೊಳ್ಳುವ ಪ್ಲಾನ್​ನಲ್ಲಿದೆ. ಇತ್ತ ಸಿಂಹಳೀಯರಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಗೆದ್ದರೆ ಮಾತ್ರ ಸರಣಿ ಆಸೆ ಜೀವಂತವಾಗಿರಲಿದೆ. ಹೀಗಾಗಿ ಪ್ರೇಮದಾಸ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯವಾಗುವ ಎಲ್ಲಾ ಲಕ್ಷಣಗಳಿವೆ.

ಟೀಮ್ ಇಂಡಿಯಾದಲ್ಲಿ ಇಂದಿನ ಪಂದ್ಯಕ್ಕೆ ಎರಡು ಪ್ರಮುಖ ಬದಲಾವಣೆ ನಿರೀಕ್ಷೆ ಮಾಡಲಾಗಿದೆ. ಅದು ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ. ಬ್ಯಾಟಿಂಗ್ ವಿಭಾಗದಲ್ಲಿ ಮನೀಶ್ ಪಾಂಡೆ ಕೈ ಬಿಟ್ಟು ಇಂಜುರಿಯಿಂದ ಗುಣಮುಖರಾಗಿರುವ ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಮೊದಲ ಪಂದ್ಯದಲ್ಲಿ ಮನೀಶ್ ಪಾಂಡೆ ಅಷ್ಟೊಂದು ಪರಿಣಮಕಾರಿಯಾಗಿ ಗೋಚರಿಸಲಿಲ್ಲ. 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಾಂಡೆ 40 ಎಸೆತಗಳಲ್ಲಿ 1 ಬೌಂಡರಿ, ಸಿಕ್ಸರ್ ಸಹಿತಿ 26 ರನ್ ಗಳಿಸಿದರಷ್ಟೆ. ಹೀಗಾಗಿ ಇವರನ್ನು ಆಡುವ ಬಳಗದಿಂದ ಕೈಬಿಟ್ಟು ಮೊದಲ ಪಂದ್ಯವನ್ನು ಮಿಸ್ ಮಾಡಿದ್ದ ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಇನ್ನೂ ಬೌಲಿಂಗ್ ವಿಭಾಗದಲ್ಲೂ ಭಾರತ ಒಂದು ಬದಲಾವಣೆ ಮಾಡಬಹುದು. ಮೊದಲ ಪಂದ್ಯದಲ್ಲಿ ಮೂವರು ಸ್ಪಿನ್ನರ್​ಗಳು, ಇಬ್ಬರು ವೇಗಿಗಳು, ಓರ್ವ ಆಲ್ರೌಂಡರ್ (ವೇಗಿ) ಕಣಕ್ಕಿಳಿದಿದ್ದರು. ಹೀಗಾಗಿ ಓರ್ವ ಸ್ಪಿನ್ನರ್ ಅನ್ನು ಕೈಬಿಟ್ಟು ಮಿಂಚಲು ಕಾಯುತ್ತಿರುವ ಚೇತನ್ ಸಕರಿಯಾಗೆ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಲು ಅವಕಾಶ ಕೊಟ್ಟರು ಕೊಡಬಹುದು.

ಇತ್ತ ಶ್ರೀಲಂಕಾ ತಂಡದಲ್ಲೂ ದೊಡ್ಡ ಬದಲಾವಣೆ ಆಗುವ ನಿರೀಕ್ಷೆಯಿದೆ. ಒಟ್ಟಾರೆ ಎರಡನೇ ಏಕದಿನ ಪಂದ್ಯ ಉಭಯ ತಂಡಗಳಿಗೆ ಮುಖ್ಯವಾಗಿದ್ದು, ಗೆಲುವು ಯಾರಿಗೆಂದು ನೋಡಬೇಕಿದೆ.

ಭಾರತ-ಶ್ರೀಲಂಕಾ ಎರಡನೇ ಏಕದಿನ ಪಂದ್ಯ ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಮಧ್ಯಾಹ್ನ 2.30 ಕ್ಕೆ ನಡೆಯಲಿದೆ. ಸೋನಿ ಸಿಕ್ಸ್, ಸೋನಿ ಸಿಕ್ಸ್ ಎಚ್ಡಿ, ಸೋನಿ ಟೆನ್ 3, ಸೋನಿ ಟೆನ್ 3 ಎಚ್ಡಿ ಯಲ್ಲಿ ಪಂದ್ಯವನ್ನು ಲೈವ್ ವೀಕ್ಷಿಸಬಹುದು.

ತಂಡಗಳು:

ಭಾರತ: ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್-ಕೀಪರ್), ಕೆ ಗೌತಮ್, ಕ್ರುನಾಲ್ ಪಾಂಡ್ಯ, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್ (ಉಪನಾಯಕ), ದೀಪಕ್ ಚಹರ್, ಕುಲದೀಪ್ ಯಾದವ್, ನವದೀಪ್ ಸೈನಿ, ಚೇತನ್ ಸಕರಿಯಾ, ಯಜುವೇಂದ್ರ ಚಹಾಲ್.

ಶ್ರೀಲಂಕಾ: ದಾಸುನ್ ಶಾನಕಾ (ನಾಯಕ), ಧನಂಜಯ ಡಿ ಸಿಲ್ವಾ (ಉಪನಾಯಕ), ಅವಿಷ್ಕಾ ಫರ್ನಾಂಡೊ, ಭನುಕಾ ರಾಜಪಕ್ಸೆ, ಪಾತುಮ್ ನಿಸ್ಸಂಕ, ಚರಿತ್ ಅಸಲಂಕಾ, ವನಿಂದು ಹಸರಂಗ, ಆಶೆನ್ ಬಂಡರಾ, ಮಿನೋಡ್ ಭನುಕಾ, ಲಹಿರು ಉದಾರ, ಚಮೇಮರಾಮಾನಾ ಲಕ್ಷನ್ ಸಂದಕನ್, ಅಕಿಲಾ ಧನಂಜಯ, ಶಿರನ್ ಫರ್ನಾಂಡೊ, ಧನಂಜಯ ಲಕ್ಷನ್, ಇಶಾನ್ ಜಯರತ್ನ, ಪ್ರವೀಣ್ ಜಯವಿಕ್ರೆಮಾ, ಅಸಿಥಾ ಫರ್ನಾಂಡೊ, ಕಸುನ್ ರಾಜಿತಾ, ಲಹೀರು ಕುಮಾರ, ಇಸುರು ಉದಾನ.

IND vs SL: ಕೃನಾಲ್ ಪಾಂಡ್ಯ ವರ್ತನೆಯಲ್ಲಿ ಸಖತ್ ಬದಲಾವಣೆ! ಇದು ರಾಹುಲ್ ದ್ರಾವಿಡ್ ಎಫೆಕ್ಟ್ ಎಂದ ನೆಟ್ಟಿಗರು; ವಿಡಿಯೋ

ಸದ್ಯಕ್ಕಂತು ಕಣಕ್ಕಿಳಿಯಲ್ಲ ಟೀಮ್ ಇಂಡಿಯಾ ಸ್ಟಾರ್ ಬ್ಯಾಟ್ಸ್​ಮನ್: ಟಿ20 ವಿಶ್ವಕಪ್​ಗೂ ಡೌಟ್..!

(India vs Sri lanka Two Key Changes In Team India Playing XI For Sri Lanka 2nd ODI)