AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್​ನಲ್ಲಿ ಭಾರತಕ್ಕೆ ಮೊದಲ ಪದಕ: ಏರ್ ರೈಫಲ್​ನಲ್ಲಿ ಬೆಳ್ಳಿ

India gets 1st medal in Asian Games 2023: 2023ರ ಏಷ್ಯನ್ ಕ್ರೀಡಾಕೂಟದ ಮಹಿಳೆಯರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತ ಒಟ್ಟು 1886 ಅಂಕಗಳೊಂದಿಗೆ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿತು. ಅತ್ತ ಚೀನಾ 1896.6 ಅಂಕಗಳೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡರೆ, ಮಂಗೋಲಿಯಾ ಒಟ್ಟು 1880 ಅಂಕಗಳೊಂದಿಗೆ ಕಂಚಿನ ಪದಕವನ್ನು ತನ್ನದಾಗಿಸಿತು.

ಏಷ್ಯನ್ ಗೇಮ್ಸ್​ನಲ್ಲಿ ಭಾರತಕ್ಕೆ ಮೊದಲ ಪದಕ: ಏರ್ ರೈಫಲ್​ನಲ್ಲಿ ಬೆಳ್ಳಿ
India Asian Games
Vinay Bhat
|

Updated on:Sep 24, 2023 | 7:57 AM

Share

2023ರ ಏಷ್ಯನ್ ಕ್ರೀಡಾಕೂಟದಲ್ಲಿ (Asian Games 2023) ಮಹಿಳೆಯರ 10 ಮೀಟರ್ ಏರ್ ರೈಫಲ್ ತಂಡ ಬೆಳ್ಳಿ ಪದಕ ಗೆಲ್ಲುವುದರೊಂದಿಗೆ ಭಾರತ ತನ್ನ ಮೊದಲ ಪದಕವನ್ನು ಬಾಚಿಕೊಂಡಿದೆ. ರಮಿತಾ, ಮೆಹುಲಿ ಘೋಷ್ ಮತ್ತು ಆಶಿ ಚೌಕ್ಸೆ ಅವರು 2023 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮೊದಲ ಪದಕವನ್ನು ಗೆದ್ದುಕೊಂಡಿದ್ದಾರೆ.

ಮಹಿಳೆಯರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತ ಒಟ್ಟು 1886 ಅಂಕಗಳೊಂದಿಗೆ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿತು. ಅತ್ತ ಚೀನಾ 1896.6 ಅಂಕಗಳೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡರೆ, ಮಂಗೋಲಿಯಾ ಒಟ್ಟು 1880 ಅಂಕಗಳೊಂದಿಗೆ ಕಂಚಿನ ಪದಕವನ್ನು ತನ್ನದಾಗಿಸಿತು.

IND vs AUS: ಹೋಳ್ಕರ್ ಮೈದಾನದಲ್ಲಿ ಟೀಂ ಇಂಡಿಯಾದ ಸಾಧನೆ ಏನು ಗೊತ್ತಾ?

ಇದನ್ನೂ ಓದಿ
Image
ಸೆಮಿ ಫೈನಲ್​ನಲ್ಲಿ ಭಾರತ ಭರ್ಜರಿ ಆರಂಭ: ಬಾಂಗ್ಲಾದ 3 ವಿಕೆಟ್ ಪತನ
Image
ಇಂದು ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ: ಸರಣಿ ಜಯದ ಮೇಲೆ ರಾಹುಲ್ ಕಣ್ಣು
Image
IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ ಸಾಧ್ಯತೆ
Image
15 ವರ್ಷಗಳ ಬಳಿಕ ಬಾಂಗ್ಲಾದೇಶ್ ವಿರುದ್ಧ ಗೆದ್ದ ನ್ಯೂಝಿಲೆಂಡ್

ಹಾನ್ ಜಿಯಾಯು, ಹುವಾಂಗ್ ಯುಟಿಂಗ್ ಮತ್ತು ವಾಂಗ್ ಝಿಲಿನ್ ಅವರನ್ನೊಳಗೊಂಡ ಚೀನಾ ತಂಡ ಚಿನ್ನದ ಪದಕ ಗೆಲ್ಲುವ ಮೂಲಕ ಐದು ವರ್ಷಗಳ ಹಿಂದಿನ ಏಷ್ಯನ್ ದಾಖಲೆಯನ್ನು ಮುರಿದರು. ಹಾನ್ ಜಿಯಾಯು ಒಟ್ಟು 634.1 ರೊಂದಿಗೆ ಹೊಸ ಅರ್ಹತಾ ಏಷ್ಯನ್ ದಾಖಲೆಯನ್ನು ಸಹ ಸ್ಥಾಪಿಸಿದರು. ಭಾರತ ಪರ, ರಮಿತಾ ಮತ್ತು ಮೆಹುಲಿ ಘೋಷ್ ಕ್ರಮವಾಗಿ 631.9 ಮತ್ತು 630.8 ಮೊತ್ತದೊಂದಿಗೆ ವೈಯಕ್ತಿಕವಾಗಿ ಫೈನಲ್‌ಗೆ ಅರ್ಹತೆ ಪಡೆದರು.

ಇನ್ನು ಏರ್ ರೈಫಲ್​ನಲ್ಲಿ ಭಾರತಕ್ಕೆ ಪದಕ ಸಿಕ್ಕ ಕೂಡಲೇ ಭಾರತದ ಅರ್ಜುನ್ ಜತ್ ಲಾಲ್ ಮತ್ತು ಅರವಿಂದ್ ಸಿಂಗ್ ಜೋಡಿಯು ಪುರುಷರ ಲೈಟ್‌ವೇಟ್ ಡಬಲ್ ಸ್ಕಲ್ಸ್‌ನ ಫೈನಲ್ A ನಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿತು. 2021 ರಲ್ಲಿ ಟೋಕಿಯೊ ಒಲಿಂಪಿಕ್ಸ್‌ಗೆ ಪ್ರವೇಶಿಸಿದ ಅರ್ಜುನ್ ಲಾಲ್, ಅರವಿಂದ್ ಸಿಂಗ್ ಅವರೊಂದಿಗೆ ಶ್ಲಾಘನೀಯ ಪ್ರದರ್ಶನವನ್ನು ನೀಡಿದರು. ಇವರು 6.28.18 ಸಮಯಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:49 am, Sun, 24 September 23

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್