ಬಾಕ್ಸಿಂಗ್ ಡೇ ಟೆಸ್ಟ್ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್ಗಳು
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರು ಟೆಸ್ಟ್ ಪಂದ್ಯಗಳು ಮುಗಿದಿವೆ. ಇನ್ನುಳಿದಿರುವುದು ಕೇವಲ 2 ಮ್ಯಾಚ್ಗಳು ಮಾತ್ರ. ಅದರಂತೆ ನಾಲ್ಕನೇ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ಮೆಲ್ಬೋರ್ನ್ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬೌಲರ್ಗಳು ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅದರಲ್ಲೂ ಭಾರತೀಯ ಬೌಲರ್ಗಳು ಕಠಿಣ ಪರಿಶ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ.
ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಬೌಲಿಂಗ್ ಕೋಚ್ ಮೋರ್ನೆ ಮೊರ್ಕೆಲ್ ನೇತೃತ್ವದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್ ಸೇರಿದಂತೆ ಭಾರತೀಯ ಬೌಲರ್ಗಳು ಎಂಸಿಜಿ ಮೈದಾನದಲ್ಲಿ ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದು, ಈ ಮೂಲಕ ನಾಲ್ಕನೇ ಪಂದ್ಯಕ್ಕಾಗಿ ಕಠಿಣ ತಾಲೀಮಿನಲ್ಲಿದ್ದಾರೆ. ಈ ತಾಲೀಮಿನೊಂದಿಗೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಗೆಲ್ಲು ವಿಶ್ವಾಸದಲ್ಲಿದ್ದಾರೆ.
ಏಕೆಂದರೆ ನಾಲ್ಕನೇ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ.
ಇದೀಗ ನಾಲ್ಕನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ಸೋಲನ್ನು ತಪ್ಪಿಸಿಕೊಳ್ಳಲಿದೆ. ಅಂದರೆ ನಾಲ್ಕನೇ ಪಂದ್ಯದಲ್ಲಿ ಗೆದ್ದ ತಂಡ ಐದನೇ ಪಂದ್ಯದ ಮೂಲಕ ಸರಣಿ ಜಯಿಸಬಹುದು ಅಥವಾ ಸರಣಿಯನ್ನು ಡ್ರಾನಲ್ಲಿ ಕೊನೆಗೊಳಿಸಬಹುದು. ಹೀಗಾಗಿ ಉಭಯ ತಂಡಗಳ ಪಾಲಿಗೆ ಮೆಲ್ಬೋರ್ನ್ ಟೆಸ್ಟ್ ಮ್ಯಾಚ್ ನಿರ್ಣಾಯಕವಾಗಿ ಮಾರ್ಪಟ್ಟಿದೆ.
ಹೀಗಾಗಿ ಡಿಸೆಂಬರ್ 26 ರಿಂದ ಶುರುವಾಗಲಿರುವ ಬಾರ್ಡರ್-ಗವಾಸ್ಕರ್ ಸರಣಿಯ ನಾಲ್ಕನೇ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಈ ಪೈಪೋಟಿಯಲ್ಲಿ ಗೆಲ್ಲುವ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಲಿದೆ.