ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದು ತವರಿಗೆ ಹಿಂತಿರುಗಿರುವ ಭಾರತ ಹಾಕಿ ತಂಡಕ್ಕೆ ಭವ್ಯ ಸ್ವಾಗತ ಕೋರಲಾಗಿದೆ. ಪ್ಯಾರಿಸ್ನಿಂದ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಭಾರತೀಯ ಹಾಕಿ ಪಡೆಯನ್ನು ಹೂವಿನ ಹಾರದೊಂದಿಗೆ ಸ್ವಾಗತಿಸಲಾಯಿತು. ಇನ್ನು ಆಟಗಾರರು ವಿಮಾನ ನಿಲ್ದಾಣದ ಹೊರಗೆ ಬರುತ್ತಿದ್ದಂತೆ ಡೋಲು ಬಜಾನಾ ಶುರು ಮಾಡಲಾಗಿದ್ದು, ಈ ವೇಳೆ ಕೆಲ ಆಟಗಾರರು ಭಾಂಗ್ರಾ ನೃತ್ಯದೊಂದಿಗೆ ಸಂಭ್ರಮಿಸಿದರು. ಇದೇ ವೇಳೆ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಪ್ರೇಕ್ಷಕರು ಕೂಡ ಭಾರತೀಯ ಆಟಗಾರರನ್ನು ಹುರಿದುಂಬಿಸಿದರು. ಇದೀಗ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Our Heroes are back!
Current mood: 🥳🎊🕺🏻🥁#BronzeMedalists #BackHome #HockeyIndia pic.twitter.com/MA78WcZS7q
— Hockey India (@TheHockeyIndia) August 10, 2024
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದ್ದ ಭಾರತೀಯ ಹಾಕಿ ತಂಡ ಸ್ಪೇನ್ ತಂಡವನ್ನು 2-1 ಅಂತರದಿಂದ ಮಣಿಸಿ ಕಂಚಿನ ಪದಕ ಗೆದ್ದುಕೊಂಡಿದೆ. ವಿಶೇಷ ಎಂದರೆ ಇದು ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡದ 13ನೇ ಪದಕವಾಗಿದೆ. ಹಾಗೆಯೇ 1972ರ ನಂತರ ಇದೇ ಮೊದಲ ಬಾರಿಗೆ ಭಾರತ ಹಾಕಿ ತಂಡವು ಒಲಿಂಪಿಕ್ಸ್‌ನಲ್ಲಿ ಸತತ ಎರಡನೇ ಪದಕ ಗೆದ್ದುಕೊಂಡಿದೆ.
ಇದನ್ನೂ ಓದಿ: Aman Sehrawat: ಒಲಿಂಪಿಕ್ಸ್‌ನಲ್ಲಿ ಹೊಸ ಇತಿಹಾಸ ಬರೆದ ಅಮನ್ ಸೆಹ್ರಾವತ್
ಭಾರತೀಯ ಹಾಕಿ ತಂಡವು ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಪದಕ ಗೆದ್ದಿದ್ದು 1928 ರಲ್ಲಿ. ಅಲ್ಲಿಂದ ಶುರುವಾದ ಪದಕ ಬೇಟೆ ಇದೀಗ ಪ್ಯಾರಿಸ್ ಒಲಿಂಪಿಕ್ಸ್ ವರೆಗೂ ಬಂದು ನಿಂತಿದೆ. ಅದರಲ್ಲೂ ಕಳೆದ ಬಾರಿ ಕಂಚಿನ ಪದಕ ಗೆದ್ದಿದ್ದ ಟೀಮ್ ಇಂಡಿಯಾ ಈ ಬಾರಿ ಕೂಡ ಮೂರನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಕಂಚಿನ ಪದಕವನ್ನು ಗೆದ್ದುಕೊಂಡಿದೆ.
Published On - 2:03 pm, Sat, 10 August 24