
ಸೋಮವಾರ ಬಾಂಗ್ಲಾದೇಶದ ಢಾಕಾದಲ್ಲಿ ನಡೆದ 2025ರ ಮಹಿಳಾ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ (Women’s Kabaddi World Cup) ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆ ಮೂಲಕ ಭಾರತೀಯ ನಾರಿಯರು ಸತತ ಎರಡನೇ ಬಾರಿಗೆ ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿದ್ದಾರೆ. ರೋಚಕ ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆ ತಂಡವನ್ನು 35-28 ಅಂಕಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ.
2012ರಲ್ಲಿ ಬಿಹಾರದಲ್ಲಿ ಕೊನೆಯ ಬಾರಿ ವಿಶ್ವಕಪ್ ಪಂದ್ಯ ನಡೆದಿತ್ತು. ಆ ಬಳಿಕ 13 ವರ್ಷಗಳ ನಂತರ ಎರಡನೇ ಆವೃತ್ತಿಯ ಮಹಿಳೆಯರ ವಿಶ್ವಕಪ್ ಟೂರ್ನಿ ಆಯೋಜಿಸಲಾಗಿತ್ತು. ಮೊದಲ ಆವೃತ್ತಿಯಲ್ಲಿ ಕೂಡ ಭಾರತ ತಂಡ ಚಾಂಪಿಯನ್ ಆಗಿತ್ತು.
Congratulations to our Indian Women’s Kabaddi Team for making the nation proud by winning the Kabaddi World Cup 2025! They have showcased outstanding grit, skills and dedication. Their victory will inspire countless youngsters to pursue Kabaddi, dream bigger and aim higher. pic.twitter.com/XRM8J2I2h0
— Narendra Modi (@narendramodi) November 24, 2025
ಸೆಮಿಫೈನಲ್‌ನಲ್ಲಿ ಇರಾನ್ ತಂಡವನ್ನು 33–21 ಅಂತರದಿಂದ ಸೋಲಿಸುವ ಮೂಲಕ ಭಾರತ ತಂಡ ಫೈನಲ್ ಪ್ರವೇಶಿಸಿತ್ತು. ಇತ್ತ ಚೈನೀಸ್ ತೈಪೆ ತಂಡ ಕೂಡ ತನ್ನದೇ ಆದ ಅಜೇಯ ದಾಖಲೆಯೊಂದಿಗೆ ಫೈನಲ್‌ಗೆ ತಲುಪಿತ್ತು. ಇಂದು ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆ ತಂಡವನ್ನು ಮಣಿಸುವ ಮೂಲಕ ವಿಶ್ವಕಪ್ ಟ್ರೋಫಿಯನ್ನು ಭಾರತ ತಂಡ ಎತ್ತಿಹಿಡಿದಿದೆ.
ಮಹಿಳಾ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಗೆದ್ದ ಖುಷಿಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ‘2025ರ ಕಬಡ್ಡಿ ವಿಶ್ವಕಪ್ ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ ನಮ್ಮ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ ಅಭಿನಂದನೆಗಳು. ಅವರು ಅತ್ಯುತ್ತಮ ಕ್ರೀಡಾ ಸಮರ್ಪಣಾ ಭಾವವನ್ನು ಪ್ರದರ್ಶಿಸಿದ್ದಾರೆ. ಅವರ ಈ ಗೆಲುವು ಅಸಂಖ್ಯಾತ ಯುವಕರಿಗೆ ಸ್ಫೂರ್ತಿ’ ಎಂದಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:59 pm, Mon, 24 November 25