AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2026: ಪದಕ ವಿಜೇತರನ್ನು ಮುಕ್ತಕಂಠದಿಂದ ಶ್ಲಾಘಿಸಿದ ಮೋದಿ

India's CWG 2026 Performance: 2026ರ ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ 39 ಪದಕಗಳೊಂದಿಗೆ 4ನೇ ಸ್ಥಾನ ಗಳಿಸಿತು. ಪ್ರಧಾನಿ ನರೇಂದ್ರ ಮೋದಿ ಕ್ರೀಡಾಪಟುಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ. ಈ ಬಾರಿ ಕೆಲವು ಸ್ಪರ್ಧೆಗಳನ್ನು ಕೈಬಿಟ್ಟ ಕಾರಣ ಪದಕಗಳ ಸಂಖ್ಯೆ ಕುಂಠಿತವಾಯಿತು. ಭಾರತವು 2030ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಅಹಮದಾಬಾದ್‌ನಲ್ಲಿ ಆತಿಥ್ಯ ವಹಿಸಲಿದ್ದು, ಇದು ಎರಡನೇ ಬಾರಿ ಆತಿಥ್ಯ ವಹಿಸಿದ ಹೆಗ್ಗಳಿಕೆಯಾಗಿದೆ.

CWG 2026: ಪದಕ ವಿಜೇತರನ್ನು ಮುಕ್ತಕಂಠದಿಂದ ಶ್ಲಾಘಿಸಿದ ಮೋದಿ
Pm Modi
ಪೃಥ್ವಿಶಂಕರ
|

Updated on:Aug 03, 2026 | 4:14 PM

Share

ಗ್ಲಾಸ್ಗೋದಲ್ಲಿ ನಡೆದ 2026 ರ ಕಾಮನ್‌ವೆಲ್ತ್ ಕ್ರೀಡಾಕೂಟ ( Commonwealth Games 2026) ಮುಕ್ತಾಯವಾಗಿದೆ. ಈ ಕ್ರೀಡಾಕೂಟದಲ್ಲಿ ಭಾರತ ಒಟ್ಟು 39 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡದುಕೊಂಡಿತು. ಭಾರತ ಗೆದ್ದ ಒಟ್ಟು 39 ಪದಕಗಳಲ್ಲಿ 13 ಚಿನ್ನ 17 ಬೆಳ್ಳಿ ಮತ್ತು 9 ಕಂಚಿನ ಪದಕಗಳನ್ನು ಗೆದ್ದುಕೊಂಡಿತು. ಕಳೆದ ಆವೃತ್ತಿಗೆ ಹೋಲಿಸಿಕೊಂಡರೆ ಈ ಬಾರಿ ಭಾರತದ ಪ್ರದರ್ಶನ ಕೊಂಚ ನಿರಸವಾಗಿತ್ತು. ಇದಕ್ಕೆ ಕಾರಣ ಈ ಆವೃತ್ತಿಯಲ್ಲಿ ಭಾರತ ಪದಕ ಗೆಲ್ಲುವಂತಹ ಕೆಲವು ಸ್ಪರ್ಧೆಗಳನ್ನು ಕೈಬಿಟ್ಟಿದ್ದು, ಭಾರತದ ಪದಕಗಳ ಸಂಖ್ಯೆ ಕಡಿಮೆಯಾಗಲು ಕಾರಣವಾಗಿತ್ತು. ಅದಾಗ್ಯೂ ಈ ಕ್ರೀಡಾಕೂಟದಲ್ಲಿ ದೇಶದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೇರಿಸಿದ ಭಾರತದ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿಯವರು (PM Modi) ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಪ್ರದರ್ಶನದ ಬಗ್ಗೆ ಹೆಮ್ಮೆಯಿದೆ

ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ಪದಕ ವಿಜೇತರನ್ನು ಅಭಿನಂದಿಸಿರುವ ಮೋದಿ, ‘ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ನಮ್ಮ ತಂಡದ ಪ್ರದರ್ಶನದ ಬಗ್ಗೆ ಹೆಮ್ಮೆಯಿದೆ. ಭಾರತ 13 ಚಿನ್ನ ಸೇರಿದಂತೆ 39 ಪದಕಗಳನ್ನು ಗೆದ್ದಿರುವುದು ಸಂತೋಷ ತಂದಿದೆ. ಪದಕ ವಿಜೇತರಿಗೆ ಅಭಿನಂದನೆಗಳು. ಕ್ರೀಡಾಕೂಟದ ಉದ್ದಕ್ಕೂ, ನಮ್ಮ ಪ್ರತಿಭಾನ್ವಿತ ಕ್ರೀಡಾಪಟುಗಳು ಅಸಾಧಾರಣ ಕೌಶಲ್ಯ, ದೃಢನಿಶ್ಚಯ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿದ್ದಾರೆ. ಅವರ ಕಠಿಣ ಪರಿಶ್ರಮ ನಮ್ಮ ಯುವಕರಿಗೆ ಸ್ಫೂರ್ತಿ ನೀಡುತ್ತದೆ. ಮುಂದಿನ ಪ್ರಯತ್ನಗಳಿಗೆ ಇಡೀ ಭಾರತೀಯ ತಂಡಕ್ಕೆ ನನ್ನ ಶುಭಾಶಯಗಳು. ಅವರು ತಮ್ಮ ಅತ್ಯುತ್ತಮ ಪ್ರಯತ್ನವನ್ನು ಮುಂದುವರಿಸಿ ರಾಷ್ಟ್ರಕ್ಕೆ ಮತ್ತಷ್ಟು ಕೀರ್ತಿ ತರಲಿ’ ಎಂದು ಬರೆದುಕೊಂಡಿದ್ದಾರೆ.

ಭಾರತದ ಆತಿಥ್ಯ

11 ದಿನಗಳ ಕಾಲ ನಡೆದ ಈ ಕ್ರೀಡಾಕೂಟಕ್ಕೆ ತೆರೆ ಬಿದ್ದಿದ್ದು, ಇದೀಗ 2030 ರಲ್ಲಿ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಭಾರತ ಆತಿಥ್ಯವಹಿಸಲಿದೆ. ಹೀಗಾಗಿ ಆತಿಥೇಯ ಭಾರತಕ್ಕೆ ಸ್ಕಾಟ್ಲೆಂಡ್ ಔಪಚಾರಿಕವಾಗಿ ಕಾಮನ್‌ವೆಲ್ತ್ ಕ್ರೀಡಾಕೂಟದ ಧ್ವಜ ಮತ್ತು ವಿಧ್ಯುಕ್ತ ಲಾಠಿ ಪ್ರದಾನ ಮಾಡಿತು. 2030 ರ ಕಾಮನ್‌ವೆಲ್ತ್ ಕ್ರೀಡಾಕೂಟವು ಅಹಮದಾಬಾದ್‌ನಲ್ಲಿ ನಡೆಯಲಿದ್ದು, ಆಸ್ಟ್ರೇಲಿಯಾ ನಂತರ ಬಹು-ಕ್ರೀಡಾ ಕಾರ್ಯಕ್ರಮವನ್ನು ಒಂದಕ್ಕಿಂತ ಹೆಚ್ಚು ಬಾರಿ ಆಯೋಜಿಸಿದ ಎರಡನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಈ ಹಿಂದೆ 2010 ರಲ್ಲಿ ನವದೆಹಲಿಯಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Mon, 3 August 26

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ