ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ

Team India: ಭಾರತ ತಂಡವು ಅಕ್ಟೋಬರ್ 19 ರಿಂದ ವೈಟ್ ಬಾಲ್ ಸರಣಿ ಆಡಲಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೂರು ಏಕದಿನ ಹಾಗೂ ಐದು ಟಿ20 ಪಂದ್ಯಗಳನ್ನಾಡಲಿದೆ. ಈ ಸರಣಿಗಾಗಿ ಈಗಾಗಲೇ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ
Team India

Updated on: Oct 14, 2025 | 12:17 PM

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿ ಮುಗಿದಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಇನಿಂಗ್ಸ್ ಹಾಗೂ 140 ರನ್​ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದೆ. ಈ ಗೆಲುವುಗಳೊಂದಿಗೆ ಟೆಸ್ಟ್ ಸರಣಿ ಮುಗಿಸಿರುವ ಟೀಮ್ ಇಂಡಿಯಾ ಇದೀಗ ಏಕದಿನ ಸರಣಿಗಾಗಿ ಸಜ್ಜಾಗಬೇಕಿದೆ.

ಅಂದರೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೂರು ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ಭಾರತ vs ಆಸ್ಟ್ರೇಲಿಯಾ ಸರಣಿ ವೇಳಾಪಟ್ಟಿ:

  • ಏಕದಿನ ಸರಣಿ ವೇಳಾಪಟ್ಟಿ:
  • ಅಕ್ಟೋಬರ್ 19: ಮೊದಲ ಏಕದಿನ ಪಂದ್ಯ – ಪರ್ತ್ ಕ್ರೀಡಾಂಗಣ, ಪರ್ತ್
  • ಅಕ್ಟೋಬರ್ 23: ಎರಡನೇ ಏಕದಿನ ಪಂದ್ಯ – ಅಡಿಲೇಡ್ ಓವಲ್
  • ಅಕ್ಟೋಬರ್ 25: ಮೂರನೇ ಏಕದಿನ ಪಂದ್ಯ – ಸಿಡ್ನಿ ಕ್ರಿಕೆಟ್ ಮೈದಾನ, ಸಿಡ್ನಿ

ಇದನ್ನೂ ಓದಿ: ಸತತ ಗೆಲುವುಗಳೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

  • ಟಿ20 ಸರಣಿ ವೇಳಾಪಟ್ಟಿ:
  • ಅಕ್ಟೋಬರ್ 29: ಮೊದಲ ಟಿ20 ಪಂದ್ಯ – ಮನುಕಾ ಓವಲ್, ಕ್ಯಾನ್‌ಬೆರಾ
  • ಅಕ್ಟೋಬರ್ 31: ಎರಡನೇ ಟಿ20 ಪಂದ್ಯ– ಮೆಲ್ಬೋರ್ನ್ ಕ್ರಿಕೆಟ್ ಮೈದಾನ
  • ನವೆಂಬರ್ 2,: ಮೂರನೇ ಟಿ20 ಪಂದ್ಯ– ಬೆಲ್ಲೆರಿವ್ ಓವಲ್, ಹೋಬಾರ್ಟ್
  • ನವೆಂಬರ್ 6: ನಾಲ್ಕನೇ ಟಿ20 ಪಂದ್ಯ – ಗೋಲ್ಡ್ ಕೋಸ್ಟ್ ಕ್ರೀಡಾಂಗಣ, ಕ್ಯಾರಾರಾ
  • ನವೆಂಬರ್ 8: ಐದನೇ ಟಿ20 ಪಂದ್ಯ– ದಿ ಗಬ್ಬಾ, ಬ್ರಿಸ್ಬೇನ್

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಆಸ್ಟ್ರೇಲಿಯಾ ಟಿ20 ತಂಡ (ಮೊದಲ ಎರಡು ಪಂದ್ಯಗಳಿಗೆ): ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

 

Published On - 12:15 pm, Tue, 14 October 25