ಇಂಗ್ಲೆಂಡ್​ನಲ್ಲಿ ಜಾಲಿ ಮೂಡ್​ನಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಹೇಗೆ ಕಾಲ ಕಳೆಯುತ್ತಿದ್ದಾರೆ ಗೊತ್ತಾ?

ನ್ಯೂಜಿಲೆಂಡ್ ವಿರುದ್ಧದ ಸೋಲಿನ ನಂತರ 20 ದಿನಗಳ ರಜೆಯಲ್ಲಿರುವ ಟೀಂ ಇಂಡಿಯಾ ಆಟಗಾರರು ತಮ್ಮ ಕುಟುಂಬದವರೊಂದಿಗೆ ಮೋಜುಮಸ್ತಿಯಲ್ಲಿ ತೊಡಗಿದ್ದಾರೆ.

ಇಂಗ್ಲೆಂಡ್​ನಲ್ಲಿ ಜಾಲಿ ಮೂಡ್​ನಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಹೇಗೆ ಕಾಲ ಕಳೆಯುತ್ತಿದ್ದಾರೆ ಗೊತ್ತಾ?
ಕುಟುಂಬದೊಂದಿಗೆ ರಹಾನೆ ರೋಹಿತ್
Follow us
ಪೃಥ್ವಿಶಂಕರ
| Updated By: shruti hegde

Updated on: Jul 01, 2021 | 9:52 AM

ನ್ಯೂಜಿಲೆಂಡ್ ವಿರುದ್ಧದ ಸೋಲಿನ ನಂತರ 20 ದಿನಗಳ ರಜೆಯಲ್ಲಿರುವ ಟೀಂ ಇಂಡಿಯಾ ಆಟಗಾರರು ತಮ್ಮ ಕುಟುಂಬದವರೊಂದಿಗೆ ಮೋಜುಮಸ್ತಿಯಲ್ಲಿ ತೊಡಗಿದ್ದಾರೆ. ಯುಕೆಯಲ್ಲಿರುವ ಭಾರತೀಯ ಟೆಸ್ಟ್ ತಂಡವು ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನೂ ಕೆಲ ದಿನಗಳ ನಂತರ ಆಡಬೇಕಿದೆ. ಭಾರತೀಯ ತಂಡದ ಹಲವಾರು ಸದಸ್ಯರು ತಮ್ಮ ಬಿಡುವಿನ ವೇಳೆಯನ್ನು ಹೇಗೆ ಕಳೆಯುತ್ತಿದ್ದಾರೆ ಎಂಬುದರ ಬಗ್ಗೆ ಚಿತ್ರಗಳನ್ನು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಟಗಾರರ ಕುಟುಂಬಗಳಿಗೆ ತಂಡದ ಜೊತೆಯಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿತು. 20 ದಿನಗಳ ವಿರಾಮ ಭಾರತೀಯ ತಂಡದ ಸದಸ್ಯರಿಗೆ ತಮ್ಮ ಪ್ರೀತಿಪಾತ್ರರ ಜತೆ ಉತ್ತಮ ಸಮಯವನ್ನು ಕಳೆಯಲು ಸೂಕ್ತವಾದ ಅವಕಾಶವನ್ನು ನೀಡಿದೆ.

ಕ್ಯಾಪ್ಟನ್ ವಿರಾಟ್ ಕೊಹ್ಲಿ ತಮ್ಮ ಪತ್ನಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರೊಂದಿಗಿನ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್​ನಲ್ಲಿ ಹಂಚಿಕೊಂಡಿದ್ದಾರೆ. ಆರಾಧ್ಯ ಜತೆ ದಂಪತಿಗಳು ಇಂಗ್ಲೆಂಡ್​ನ ಕೆಫೆಯಲ್ಲಿ ಉಪಾಹಾರ ಸೇವಿಸುತ್ತಿರುವುದನ್ನು ಈ ಚಿತ್ರದಲ್ಲಿ ಕಾಣಬಹುದು.

View this post on Instagram

A post shared by Virat Kohli (@virat.kohli)

ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಮತ್ತು ಆರಂಭಿಕ ಆಟಗಾರ ಮಯಂಕ್ ಅಗರ್ವಾಲ್ ತಮ್ಮ ಕುಟುಂಬದೊಂದಿಗೆ ವಿಲ್ಟ್‌ಶೈರ್‌ನ ಪ್ರಸಿದ್ಧ ಇತಿಹಾಸಪೂರ್ವ ಸ್ಮಾರಕ ಸ್ಟೋನ್‌ಹೆಂಜ್‌ಗೆ ಭೇಟಿ ನೀಡಿದರು. ತಮ್ಮ ಮಡದಿಯರೊಂದಿಗಿನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಈ ಜೋಡಿಗಳು ಭಿನ್ನವಿಭಿನ್ನವಾಗಿ ಪೋಸ್ ಕೊಟ್ಟಿದ್ದಾರೆ.

ಅಜಿಂಕ್ಯ ರಹಾನೆ ಮತ್ತು ರೋಹಿತ್ ಶರ್ಮಾ ಕೂಡ ತಮ್ಮ ಮಡದಿ ಮಕ್ಕಳೊಂದಿಗೆ ಸಮಯ ಕಳೆಯುತ್ತಿದ್ದಾರೆ. ಟೀಮ್ ಇಂಡಿಯಾ ಟೆಸ್ಟ್ ಉಪನಾಯಕ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೋಹಿತ್ ಶರ್ಮಾ ಮತ್ತು ಅವರ ಕುಟುಂಬದೊಂದಿಗೆ ಅವರ ಪತ್ನಿ ಮತ್ತು ಮಗಳನ್ನು ಒಳಗೊಂಡ ಚಿತ್ರವನ್ನು ಹಂಚಿಕೊಂಡಿದ್ದಾರೆ.

ರವಿಚಂದ್ರನ್ ಅಶ್ವಿನ್ ಹಂಚಿಕೊಂಡಿರುವ ವಿಡಿಯೋದಲ್ಲಿ ಅವರು ಸಮುದ್ರದ ಬಳಿ ವಾಕಿಂಗ್ ಮಾಡುತ್ತಿರುವ ವೀಡಿಯೊ ಹಂಚಿಕೊಂಡಿದ್ದಾರೆ.ತಮ್ಮ ಮಡದಿ ತೆಗೆದಿರುವ ವಿಡಿಯೋದಲ್ಲಿ ಅಶ್ವಿನ್ ಸಮುದ್ರದ ದಂಡೆಯ ಮೇಲೆ ಹೆಜ್ಜೆ ಹಾಕಿದ್ದಾರೆ.

View this post on Instagram

A post shared by Ashwin (@rashwin99)

COVID-19 ಸಾಂಕ್ರಾಮಿಕ ರೋಗದಿಂದಾಗಿ ಟೀಮ್ ಇಂಡಿಯಾ ಕಳೆದ ಒಂಬತ್ತು ತಿಂಗಳ ಉತ್ತಮ ಸಮಯವನ್ನು ಬಯೋ-ಬಬಲ್‌ನಲ್ಲಿ ಕಳೆದಿದೆ. ಇದು 2020 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ -13) ಮತ್ತು ಆಸ್ಟ್ರೇಲಿಯಾದ ಪ್ರವಾಸದೊಂದಿಗೆ ಪ್ರಾರಂಭವಾಯಿತು. ಈ ವರ್ಷವೂ, ಇಂಗ್ಲೆಂಡ್ ವಿರುದ್ಧದ ದ್ವಿಪಕ್ಷೀಯ ಸರಣಿ ಮತ್ತು ಐಪಿಎಲ್ -14 ಭಾರತೀಯ ಕ್ರಿಕೆಟಿಗರನ್ನು ಬಯೋ-ಬಬಲ್‌ನಲ್ಲಿ ಇರಿಸಬೇಕಾಯಿತು.

ಮುಂದೆ ಸಾಗುತ್ತಿರುವ ಟೀಮ್ ಇಂಡಿಯಾ ಮುಂಬರುವ ಆರು ತಿಂಗಳ ಕಾಲ ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿದೆ. ಮೊದಲನೆಯದಾಗಿ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ, ನಂತರ ಅಮಾನತುಗೊಂಡ ಐಪಿಎಲ್ -14 ಸೀಸನ್ ಮತ್ತು ಟಿ 20 ವಿಶ್ವಕಪ್. ಆದ್ದರಿಂದ, ವಿರಾಟ್ ಕೊಹ್ಲಿ ಮತ್ತು ತಂಡ ಹೆಚ್ಚಿನ ಸಮಯವನ್ನು ಬಯೋ ಬಬಲ್​ನಲ್ಲಿ, ನಂತರ ಹೊರಭಾಗದಲ್ಲಿ ಕಳೆಯುವ ನಿರೀಕ್ಷೆಯಿದೆ.

ಇದನ್ನು ನೋಡುವಾಗ, ಟೀಮ್ ಇಂಡಿಯಾಕ್ಕೆ 20 ದಿನಗಳ ರಜೆ ಹೆಚ್ಚು ಅಗತ್ಯವಿರುವ ವಿರಾಮವೆಂದು ತೋರುತ್ತದೆ. ಆಗಸ್ಟ್ 4 ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮುನ್ನ ಜುಲೈ 14 ರಂದು ಭಾರತೀಯ ಟೆಸ್ಟ್ ತಂಡ ಮತ್ತೆ ಗುಂಪು ಸೇರಿ ಬಯೋ ಬಬಲ್ ಪ್ರವೇಶಿಸಲಿದೆ.

ಇದನ್ನೂ ಓದಿ: ICC Test Rankings: ನಂ.1 ಪಟ್ಟಕ್ಕೇರಿದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್‌! ರೋಹಿತ್-ರಹಾನೆಗೆ ಲಾಭ, ಕೊಹ್ಲಿ ಸ್ಥಿರ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್