AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಗೆಲುವಿನ ಲಯದಲ್ಲಿದ್ದ ಆರ್​ಸಿಬಿಗೆ ಚೆನ್ನೈ ಸೋಲುಣಿಸಿದ ಫೋಟೋಗಳು..

ಆರ್​ಸಿಬಿ ಹಾಗೂ ಚೆನ್ನೈ ನಡುವಿನ ರೋಚಕ ಸಮರದಲ್ಲಿ ಚೆನ್ನೈ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ದುಬೈ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯ ಚೆನ್ನೈ ಪಾಲಿಗೆ ಪರಿಪೂರ್ಣವಾದ ಪಂದ್ಯವಾಗಿತ್ತು. ಸತತ ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಬ್ಯಾಟಿಂಗ್ ಬೌಲಿಂಗ್ ಎರಡರಲ್ಲೂ ಕಮ್​​ಬ್ಯಾಕ್ ಮಾಡಿತು. ಚೆನ್ನೈ ವಿರುದ್ಧದ ಸೋಲಿನ ಬಗ್ಗೆ ಕ್ಯಾಪ್ಟನ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೊದಲು ಬ್ಯಾಟಿಂಗ್ ಮಾಡೋವಾಗ ಇದ್ದ ಪಿಚ್​ನ ಸ್ವರೂಪ, ಚೆನ್ನೈ ಬ್ಯಾಟಿಂಗ್ ಮಾಡೋವಾಗ ಬದಲಾಯ್ತು ಎಂದಿದ್ದಾರೆ. ಐಪಿಎಲ್​ನಲ್ಲಿ 200 ಸಿಕ್ಸರ್ […]

IPL 2020: ಗೆಲುವಿನ ಲಯದಲ್ಲಿದ್ದ ಆರ್​ಸಿಬಿಗೆ ಚೆನ್ನೈ ಸೋಲುಣಿಸಿದ ಫೋಟೋಗಳು..
ಸಿಎಸ್​ಕೆ ತಂಡ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Nov 23, 2020 | 12:42 PM

Share

ಆರ್​ಸಿಬಿ ಹಾಗೂ ಚೆನ್ನೈ ನಡುವಿನ ರೋಚಕ ಸಮರದಲ್ಲಿ ಚೆನ್ನೈ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ದುಬೈ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯ ಚೆನ್ನೈ ಪಾಲಿಗೆ ಪರಿಪೂರ್ಣವಾದ ಪಂದ್ಯವಾಗಿತ್ತು. ಸತತ ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಬ್ಯಾಟಿಂಗ್ ಬೌಲಿಂಗ್ ಎರಡರಲ್ಲೂ ಕಮ್​​ಬ್ಯಾಕ್ ಮಾಡಿತು.

ಚೆನ್ನೈ ವಿರುದ್ಧದ ಸೋಲಿನ ಬಗ್ಗೆ ಕ್ಯಾಪ್ಟನ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೊದಲು ಬ್ಯಾಟಿಂಗ್ ಮಾಡೋವಾಗ ಇದ್ದ ಪಿಚ್​ನ ಸ್ವರೂಪ, ಚೆನ್ನೈ ಬ್ಯಾಟಿಂಗ್ ಮಾಡೋವಾಗ ಬದಲಾಯ್ತು ಎಂದಿದ್ದಾರೆ.

ಐಪಿಎಲ್​ನಲ್ಲಿ 200 ಸಿಕ್ಸರ್ ಮತ್ತು 500 ಬೌಂಡರಿ ಸಿಡಿಸಿದ ಮೊದಲ ಬ್ಯಾಟ್ಸ್​ಮನ್ ಅನ್ನೋ ಹೆಗ್ಗಳಿಕೆಗೆ ಕ್ಯಾಪ್ಟನ್ ಕೊಹ್ಲಿ ಪಾತ್ರರಾಗಿದ್ದಾರೆ.

2011ರಿಂದ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಹಸಿರು ಬಣ್ಣದ ಜೆರ್ಸಿಯಲ್ಲಿ 9 ಪಂದ್ಯಗಳನ್ನ ಆಡಿದೆ. ಅದ್ರಲ್ಲಿ ಕೇವಲ 3ರಲ್ಲಿ ಮಾತ್ರ ಗೆದ್ದು ಬೀಗಿದೆ.

ಅಟ್ಯಾಕಿಂಗ್ ಸ್ಪೆಲ್ ಮಾಡಿದ ಕರ್ರನ್ 3 ವಿಕೆಟ್ ಪಡೆದು ಮಿಂಚಿದ. ಸ್ಲಾಗ್ ಓವರ್​ನಲ್ಲಿ ರನ್ ಹರಿದು ಬರುತ್ತೆ ಅನ್ನೋ ಕೊಹ್ಲಿ ನಂಬಿಕೆಯನ್ನ ಸ್ಯಾಮ್ ಕರ್ರನ್, ಹುಸಿ ಮಾಡಿದ್ರು.

ಆರ್​ಸಿಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿದ್ರೂ ಪ್ಲೇ ಆಫ್​ನಿಂದ ಹೊರಬಿದ್ದಿದೆ.

65ಎಸೆತಗಳನ್ನ ಎದುರಿಸಿದ ಋತುರಾಜ್ 4ಬೌಂಡರಿ, 3ಸಿಕ್ಸರ್​ಗಳ ನೆರವಿನಿಂದ ಅಜೇಯ 65ರನ್ ಗಳಿಸೋದ್ರೊಂದಿಗೆ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ರು.

Published On - 8:46 am, Mon, 26 October 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್