AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಹಾಲಿ ಚಾಂಪಿಯನ್ಸ್​ ಮೈದಾನದಲ್ಲಿ ಬೆವರಿಳಿಸಿದ್ದು ಹೀಗೆ..

ಐಪಿಎಲ್ 2019 ರ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಮುಂಬೈ ಕಳೆದ ಆವೃತ್ತಿಯ ಫೈನಲಿಸ್ಟ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೆಪ್ಟೆಂಬರ್ 19 ರಂದು ಎದುರಿಸಲಿದೆ. ಮುಂಬೈ ಇಂಡಿಯನ್ಸ್‌ನ ಬೌಲಿಂಗ್‌ ವಿಭಾಗದ ಪ್ರಬಲ ಅಸ್ತ್ರ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ಅನುಭವಿ ಲಸಿತ್ ಮಾಲಿಂಗರ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದರು. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ಹಲವು ಆವೃತ್ತಿಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ.ಹೀಗಾಗಿ ಸಾಕಷ್ಟು ನಿರೀಕ್ಷೆಗಳು ಪಾಂಡ್ಯ ಮೇಲಿವೆ.ಇದರಿಂದಾಗಿ […]

IPL 2020: ಹಾಲಿ ಚಾಂಪಿಯನ್ಸ್​ ಮೈದಾನದಲ್ಲಿ ಬೆವರಿಳಿಸಿದ್ದು ಹೀಗೆ..
ಸಾಧು ಶ್ರೀನಾಥ್​
|

Updated on:Sep 17, 2020 | 2:01 PM

Share

ಐಪಿಎಲ್ 2019 ರ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಮುಂಬೈ ಕಳೆದ ಆವೃತ್ತಿಯ ಫೈನಲಿಸ್ಟ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೆಪ್ಟೆಂಬರ್ 19 ರಂದು ಎದುರಿಸಲಿದೆ.

ಮುಂಬೈ ಇಂಡಿಯನ್ಸ್‌ನ ಬೌಲಿಂಗ್‌ ವಿಭಾಗದ ಪ್ರಬಲ ಅಸ್ತ್ರ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ಅನುಭವಿ ಲಸಿತ್ ಮಾಲಿಂಗರ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದರು.

ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ಹಲವು ಆವೃತ್ತಿಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ.ಹೀಗಾಗಿ ಸಾಕಷ್ಟು ನಿರೀಕ್ಷೆಗಳು ಪಾಂಡ್ಯ ಮೇಲಿವೆ.ಇದರಿಂದಾಗಿ ತಂಡವನ್ನು ಮತ್ತೊಮ್ಮೆ ಚಾಂಪಿಯನ್ ಮಾಡವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಐಪಿಎಲ್ 2020 ರ ತರಬೇತಿಯ ಜೊತೆಗೆ, ಮುಂಬೈ ಇಂಡಿಯನ್ಸ್ ತಂಡವು ಎರಡು ತಂಡಗಳಾಗಿ ವಿಭಜಿಸುವ ಮೂಲಕ ಅಭ್ಯಾಸ ಪಂದ್ಯವನ್ನು ಆಡುತ್ತಿದೆ, ಇದರಿಂದಾಗಿ ಪಂದ್ಯಾವಳಿ ಪ್ರಾರಂಭವಾದಾಗ ಎಲ್ಲಾ ಆಟಗಾರರ ಮದ್ಯ ಉತ್ತಮ ಒಡನಾಟ ಏರ್ಪಟ್ಟಿರುತ್ತದೆ.

ತರಬೇತಿ ಮತ್ತು ಅಭ್ಯಾಸದ ಜೊತೆಗೆ, ಮುಂಬೈ ಇಂಡಿಯನ್ಸ್‌ನ ಆಟಗಾರರು ಈ ನಡುವೆ ಮೋಜು ಮಸ್ತಿ ಮಾಡುವುದರಲ್ಲಿ ನಿರತರಾಗಿರುತ್ತಾರೆ.

ತಂಡದ ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಅವರು ತಂಡದ ಆಟಗಾರರೊಂದಿಗೆ ನಿರಂತರವಾಗಿ ಮೈದಾನದಲ್ಲಿ ಬೆವರು ಸುರಿಸುತ್ತಿದ್ದಾರೆ ಜೊತೆಗೆ ಪಂದ್ಯಾವಳಿಗೆ ಆಟಗಾರರನ್ನು ಸಿದ್ಧಪಡಿಸುತ್ತಿದ್ದಾರೆ.

ಮುಂಬೈ ಇಂಡಿಯನ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ತಂಡವಾಗಿದ್ದು,ಅದರ ಯಶಸ್ಸಿನಲ್ಲಿ ಆಟಗಾರರು ಮತ್ತು ಕೋಚಿಂಗ್ ಸಿಬ್ಬಂದಿಗಳ ದೊಡ್ಡ ಪಾತ್ರವಿದೆ. ಇದರಲ್ಲಿ ಜಹೀರ್ ಖಾನ್ ಅವರಂತಹ ಮಾಜಿ ಬೌಲರ್‌ಗಳ ಶ್ರಮ ಹೆಚ್ಚಾಗಿದೆ.

Published On - 2:03 pm, Sat, 12 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ