IPL 2020: ಮುಂಬೈ ಹಾಗೂ ರಾಜಸ್ಥಾನ ನಡುವಿನ ಪಂದ್ಯದ ಝಲಕ್​..

ಅಬುಧಾಬಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 57 ರನ್‌ಗಳಿಂದ ಪರಾಭವಗೊಳಿಸಿದೆ. ನಿನ್ನೆಯ ಪಂದ್ಯದಲ್ಲಿ 79 ರನ್ ಗಳಿಸೋದ್ರೊಂದಿಗೆ ಮುಂಬೈ ಇಂಡಿಯನ್ಸ್​ಗೆ ಗೆಲುವು ತಂದುಕೊಟ್ಟ ಸೂರ್ಯಕುಮಾರ್ ಯಾದವ್ ಪಂದ್ಯ ಶ್ರೇಷ್ಠ ಪಡೆದ್ರು. 47 ಎಸೆತಗಳನ್ನ ಎದುರಿಸಿದ ಸೂರ್ಯಕುಮಾರ್, 11 ಬೌಂಡರಿ, 2 ಸಿಕ್ಸರ್​ಗಳ ನೆರವಿನಿಂದ 79 ರನ್ ಗಳಿಸಿದ್ರು. ಐಪಿಎಲ್​ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ಓಪನರ್ ಯಶಸ್ವಿ ಜೈಸ್ವಾಲ್, ಎರಡನೇ ಪಂದ್ಯದಲ್ಲೂ ವೈಫಲ್ಯ […]

IPL 2020: ಮುಂಬೈ ಹಾಗೂ ರಾಜಸ್ಥಾನ ನಡುವಿನ ಪಂದ್ಯದ ಝಲಕ್​..
Follow us
ಸಾಧು ಶ್ರೀನಾಥ್​
|

Updated on: Oct 07, 2020 | 5:12 PM

ಅಬುಧಾಬಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 57 ರನ್‌ಗಳಿಂದ ಪರಾಭವಗೊಳಿಸಿದೆ.

ನಿನ್ನೆಯ ಪಂದ್ಯದಲ್ಲಿ 79 ರನ್ ಗಳಿಸೋದ್ರೊಂದಿಗೆ ಮುಂಬೈ ಇಂಡಿಯನ್ಸ್​ಗೆ ಗೆಲುವು ತಂದುಕೊಟ್ಟ ಸೂರ್ಯಕುಮಾರ್ ಯಾದವ್ ಪಂದ್ಯ ಶ್ರೇಷ್ಠ ಪಡೆದ್ರು. 47 ಎಸೆತಗಳನ್ನ ಎದುರಿಸಿದ ಸೂರ್ಯಕುಮಾರ್, 11 ಬೌಂಡರಿ, 2 ಸಿಕ್ಸರ್​ಗಳ ನೆರವಿನಿಂದ 79 ರನ್ ಗಳಿಸಿದ್ರು.

ಐಪಿಎಲ್​ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ಓಪನರ್ ಯಶಸ್ವಿ ಜೈಸ್ವಾಲ್, ಎರಡನೇ ಪಂದ್ಯದಲ್ಲೂ ವೈಫಲ್ಯ ಅನುಭವಿಸಿದ್ದಾರೆ. ಚೆನ್ನೈ ವಿರುದ್ಧ 6 ರನ್ ಗಳಿಸಿದ್ದ ಯಶಸ್ವಿ, ಮುಂಬೈ ವಿರುದ್ಧ ಶೂನ್ಯಕ್ಕೆ ಔಟಾದ್ರು.

ಮೊದಲೆರೆಡು ಪಂದ್ಯಗಳಲ್ಲಿ ಅರ್ಧ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್, ಕಳೆದ ಮೂರು ಪಂದ್ಯಗಳಲ್ಲೂ ರನ್ ಗಳಿಸೋದಕ್ಕೆ ಪರದಾಡ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ 3 ಎಸೆತಗಳನ್ನ ಎದುರಿಸಿದ ಸಂಜು, ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ರು.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದೊಂದಿಗೆ ರಾಜಸ್ಥಾನ ರಾಯಲ್ಸ್ ಪರ ಕಣಕ್ಕಿಳಿದ ಕಾರ್ತಿಕ್ ತ್ಯಾಗಿ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ಭಾರತ ಅಂಡರ್ 19 ತಂಡದ ಬೌಲರ್ ಆಗಿದ್ದ ತ್ಯಾಗಿ, ಮುಂಬೈ ವಿರುದ್ಧ 1 ವಿಕೆಟ್ ಪಡೆದ್ರು.

ಮೊದಲ ಪಂದ್ಯವಾಡಿದ ಕಾರ್ತಿಕ್ ತ್ಯಾಗಿ ಬೌಲಿಂಗ್​ನ್ನ ಬೆನ್ ಸ್ಟೋಕ್ಸ್ ಗುಣಗಾನ ಮಾಡಿದ್ದಾರೆ. ತ್ಯಾಗಿ ಅವರು ಬ್ರೆಟ್ ಲೀಯಂತೆ ರನ್ ಅಪ್ ಹಾಗೂ ಇಶಾಂತ್ ಶರ್ಮರಂತೆ ಬೌಲಿಂಗ್ ಡೆಲಿವರಿ ಹೊಂದಿದ್ದಾರೆ ಎಂದು ಹೊಗಳಿದ್ದಾರೆ.

ರಾಜಸ್ಥಾನ ರಾಯಲ್ಸ್ ವಿರುದ್ಧ 20 ರನ್ ನೀಡಿ 4 ವಿಕೆಟ್ ಪಡೆದಿದ್ದು, ಜಸ್ಪ್ರೀತ್ ಬೂಮ್ರಾರ ಐಪಿಎಲ್​ನಲ್ಲಿ ಅತ್ಯುತ್ತಮ ಸಾಧನೆಯಾಗಿದೆ. 2017 ರಲ್ಲಿ ಆರ್​ಸಿಬಿ ವಿರುದ್ಧ ಬೆಂಗಳೂರಿನಲ್ಲಿ ಬೂಮ್ರಾ 7 ರನ್​ಗೆ 3 ವಿಕೆಟ್ ಪಡೆದಿದ್ರು.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ