AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಡೆಲ್ಲಿಗೆ ಚಾಂಪಿಯನ್​ ಮುಂಬೈ ಸೋಲುಣಿಸಿದ ದೃಶ್ಯಾವಳಿ

ಕೊನೇ ಓವರ್​ವರೆಗೂ ರಣರೋಚಕತೆಯಿಂದ ಕೂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದು ಬೀಗಿದೆ. ಸತತ ನಾಲ್ಕನೇ ಗೆಲುವಿನ ನಾಗಾಲೋಟದಲ್ಲಿದ್ದ ಡೆಲ್ಲಿಗೆ, ಅಂಬಾನಿ ಹುಡುಗರು ಕಡಿವಾಣ ಹಾಕಿದ್ದಾರೆ. 42 ರನ್ ಗಳಿಸಿದ್ದ ಐಯ್ಯರ್, ಕೃನಾಲ್ ಪಾಂಡ್ಯಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸೋಕೆ ಹೋಗಿ ವಿಕೆಟ್ ಒಪ್ಪಿಸಿದರು. ಈ ಸೀಸನ್​ನಲ್ಲಿ ಡೆಲ್ಲಿ ಪರ ಮೊದಲ ಪಂದ್ಯವಾಡಿದ ಅಜಿಂಕ್ಯಾ ರಹಾನೆ, ಕೃನಾಲ್ ಪಾಂಡ್ಯಾ ಎಲ್​ಬಿ ಬಲೆಗೆ ಬಿದ್ದರು. ಡೀಸೆಂಟ್ ಬ್ಯಾಟಿಂಗ್ ಮಾಡಿದ ಶಿಖರ್ ಧವನ್, 52 ಎಸೆತಗಳಲ್ಲಿ 69 ರನ್ […]

IPL 2020: ಡೆಲ್ಲಿಗೆ ಚಾಂಪಿಯನ್​ ಮುಂಬೈ ಸೋಲುಣಿಸಿದ ದೃಶ್ಯಾವಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 12, 2020 | 5:08 PM

Share

ಕೊನೇ ಓವರ್​ವರೆಗೂ ರಣರೋಚಕತೆಯಿಂದ ಕೂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದು ಬೀಗಿದೆ. ಸತತ ನಾಲ್ಕನೇ ಗೆಲುವಿನ ನಾಗಾಲೋಟದಲ್ಲಿದ್ದ ಡೆಲ್ಲಿಗೆ, ಅಂಬಾನಿ ಹುಡುಗರು ಕಡಿವಾಣ ಹಾಕಿದ್ದಾರೆ.

42 ರನ್ ಗಳಿಸಿದ್ದ ಐಯ್ಯರ್, ಕೃನಾಲ್ ಪಾಂಡ್ಯಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸೋಕೆ ಹೋಗಿ ವಿಕೆಟ್ ಒಪ್ಪಿಸಿದರು.

ಈ ಸೀಸನ್​ನಲ್ಲಿ ಡೆಲ್ಲಿ ಪರ ಮೊದಲ ಪಂದ್ಯವಾಡಿದ ಅಜಿಂಕ್ಯಾ ರಹಾನೆ, ಕೃನಾಲ್ ಪಾಂಡ್ಯಾ ಎಲ್​ಬಿ ಬಲೆಗೆ ಬಿದ್ದರು.

ಡೀಸೆಂಟ್ ಬ್ಯಾಟಿಂಗ್ ಮಾಡಿದ ಶಿಖರ್ ಧವನ್, 52 ಎಸೆತಗಳಲ್ಲಿ 69 ರನ್ ಬಾರಿಸಿದ್ರು. ಇದ್ರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿತು.

ಮುಂಬೈಗೆ 163 ರನ್ ಗುರಿ ತಲುಪೋದು ಸಲಭವಾಗಿರಲಿಲ್ಲ. ಆರಂಭದಲ್ಲೇ 5 ರನ್ ಗಳಿಸಿದ್ದ ರೋಹಿತ್ ಶರ್ಮಾ ಔಟಾಗಿ ನಿರಾಸೆ ಮೂಡಿಸಿದರು.

ಆದ್ರೆ ಕ್ವಿಂಟನ್ ಡಿಕಾಕ್ 53, ಸೂರ್ಯಕುಮಾರ್ ಯಾದವ್ 53 ರನ್ ಗಳಿಸೋದ್ರೊಂದಿಗೆ ತಂಡದ ಗೆಲುವನ್ನ ಖಚಿತಪಡಿಸಿದರು.

ಎರಡನೇ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ಅಗ್ರಸ್ಥಾನಕ್ಕೇರಿದ್ರೆ, ಡೆಲ್ಲಿ ಎರಡನೇ ಸ್ಥಾನಕ್ಕೇ ಕುಸಿಯಿತು.

ಮುಂಬೈ ವಿರುದ್ಧವೂ ಎರಡು ವಿಕೆಟ್ ಪಡೆದ ಕಗಿಸೋ ರಬಾಡ, ಟೂರ್ನಿಯಲ್ಲಿ 17 ವಿಕೆಟ್ ಪಡೆಯುವುದರ ಜೊತೆಗೆ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ.

Published On - 5:05 pm, Mon, 12 October 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ