IPL 2020ಗೆ ಕೌಂಟ್​ಡೌನ್​ ಶುರು.. ಮ್ಯಾಚ್​ ಟೈಮ್​ಟೇಬಲ್​ ಪ್ರಕಟ!

UAEನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2020 ರ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿ ಪ್ರಕಟಿಸಿದೆ. ಸೆಪ್ಟೆಂಬರ್ 19 ರಂದು ಅಬುಧಾಬಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಈ ಆವೃತ್ತಿ ಪ್ರಾರಂಭವಾಗಲಿದೆ.ಶನಿವಾರ ಟೂರ್ನಮೆಂಟ್ ಆರಂಭವಾದ ನಂತರ, ದುಬೈ ತನ್ನ ಮೊದಲ ಪಂದ್ಯವನ್ನು ಭಾನುವಾರ ಆಯೋಜಿಸಲಿದೆ. ಈ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೆಣಸಲಿದೆ. ಸೋಮವಾರದಂದು ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ […]

IPL 2020ಗೆ ಕೌಂಟ್​ಡೌನ್​ ಶುರು.. ಮ್ಯಾಚ್​ ಟೈಮ್​ಟೇಬಲ್​ ಪ್ರಕಟ!
ಸಾಧು ಶ್ರೀನಾಥ್​

Updated on: Sep 06, 2020 | 5:18 PM

UAEನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2020 ರ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿ ಪ್ರಕಟಿಸಿದೆ.

ಸೆಪ್ಟೆಂಬರ್ 19 ರಂದು ಅಬುಧಾಬಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಈ ಆವೃತ್ತಿ ಪ್ರಾರಂಭವಾಗಲಿದೆ.ಶನಿವಾರ ಟೂರ್ನಮೆಂಟ್ ಆರಂಭವಾದ ನಂತರ, ದುಬೈ ತನ್ನ ಮೊದಲ ಪಂದ್ಯವನ್ನು ಭಾನುವಾರ ಆಯೋಜಿಸಲಿದೆ. ಈ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೆಣಸಲಿದೆ. ಸೋಮವಾರದಂದು ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಹಣಾಹಣಿ ನಡೆಯಲಿದೆ.

ಐಪಿಎಲ್ ವೇಳಾಪಟ್ಟಿಯಂತೆ ಸೆಪ್ಟೆಂಬರ್ 22 ರ ಮಂಗಳವಾರ ಪಂದ್ಯವಾಳಿ ಶಾರ್ಜಾಗೆ ಸ್ಥಳಾಂತರಗೊಳ್ಳಲಿದ್ದು, ಅಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ಗೆ ಆತಿಥ್ಯ ವಹಿಸಲಿದೆ. ಮೊದಲ ಪಂದ್ಯವು 10:30 PM (IST) ಮತ್ತು 2:00 PM ಯುಎಇ ಸಮಯದಿಂದ ಪ್ರಾರಂಭವಾಗುತ್ತವೆ. 10 ಡಬಲ್ ಹೆಡರ್ ಇರುತ್ತದೆ. ಎಲ್ಲಾ ಸಂಜೆ ಪಂದ್ಯಗಳು 7:30 PM (IST) ಮತ್ತು 6:00 PM ಯುಎಇ ಸಮಯಕ್ಕೆ ಪ್ರಾರಂಭವಾಗುತ್ತವೆ.

ಒಟ್ಟಾರೆಯಾಗಿ, ದುಬೈನಲ್ಲಿ 24, ಅಬುಧಾಬಿಯಲ್ಲಿ 20 ಮತ್ತು ಶಾರ್ಜಾದಲ್ಲಿ 12 ಪಂದ್ಯಗಳು ನಡೆಯಲಿವೆ. ಪ್ಲೇಆಫ್ ಮತ್ತು ಡ್ರೀಮ್ 11 ಐಪಿಎಲ್ 2020 ಫೈನಲ್ ಪಂದ್ಯಗಳ ಸ್ಥಳಗಳನ್ನು ನಂತರ ಪ್ರಕಟಿಸಲಾಗುವುದು.


Published On - 5:10 pm, Sun, 6 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us