AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮುಂಬೈನಲ್ಲಿ ಕೊರೊನಾ ಸ್ಪೋಟ! ಐಪಿಎಲ್​ ಪಂದ್ಯಾವಳಿಗಳ ಬಗ್ಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ

IPL 2021: ಏಪ್ರಿಲ್ 10 ರಿಂದ 25 ರ ನಡುವೆ ಮುಂಬೈನಲ್ಲಿ ಕೇವಲ ಹತ್ತು ಪಂದ್ಯಗಳನ್ನು ಆಯೋಜಿಸಲಿದ್ದು, ಬಯೋ-ಬಬಲ್ ಒಳಗೆ ಚಿಂತೆ ಮಾಡಲು ಏನೂ ಇರುವುದಿಲ್ಲ.

IPL 2021: ಮುಂಬೈನಲ್ಲಿ ಕೊರೊನಾ ಸ್ಪೋಟ! ಐಪಿಎಲ್​ ಪಂದ್ಯಾವಳಿಗಳ ಬಗ್ಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ
ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ
ಪೃಥ್ವಿಶಂಕರ
|

Updated on:Apr 05, 2021 | 11:43 AM

Share

ಐಪಿಎಲ್ 2021 ಆರಂಭವಾಗಲು ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಐಪಿಎಲ್ ಆಡಳಿತ ಮಂಡಳಿಯೂ ಸಹ ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸುತ್ತಿದೆ. ಆದರೆ ಮುಂಬೈನಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಂದ ಈಗ ಐಪಿಎಲ್​ ಪಂದ್ಯಾವಳಿಗಳ ಮೇಲೆ ಕರಿಛಾಯೇ ಮೂಡಿದೆ. ಈಗಾಗಲೇ ಸಾಕಷ್ಟು ಆಟಗಾರರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇದ್ಯಾವುದು ಸಾಲಾದೆಂಬಂತೆ ಈಗ ಮೊದಲ ಪಂದ್ಯಾವಳಿ ನಡೆಯುವ ಮುಂಬೈನ ವಾಂಖೆಡೆ ಕ್ರೀಡಾಂಗಣದ ಸಿಬ್ಬಂದಿಗಳಿಗೆ ಕೊರೊನಾ ವಕ್ಕರಿಸಿರುವುದು ಆತಂಕ ಹೆಚ್ಚಿಸಿದೆ. ಹೀಗಾಗಿ ಬಿಸಿಸಿಐ ಮುಂಬೈನಲ್ಲಿ ನಡೆಯಲಿರುವ ಪಂದ್ಯಗಳನ್ನ ಬೇರೆಡೆಗೆ ಸ್ಥಳಾಂತರಿಸಲಿದೆ ಎಂಬ ಊಹಾಪೋಹಗಳು ಎದ್ದಿದ್ದವು. ಆದರೆ ಈಗ ಅಂತಹ ಊಹಾಪೋಹಗಳಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತೆರೆ ಎಳಿದಿದ್ದಾರೆ. ಈ ಬಗ್ಗೆ ಮಾತಾನಾಡಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮುಂಬೈನಲ್ಲಿ ಐಪಿಎಲ್ 2021 ಪಂದ್ಯಗಳು ನಡೆಯಲಿವೆ ಎಂದು ಘೋಷಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಅಗತ್ಯ ಅನುಮತಿ ಮತ್ತು ಭರವಸೆ ಸಿಕ್ಕಿದೆ ಒಮ್ಮೆ ನೀವು ಬಯೋಬಬಲ್​ನಲ್ಲಿದ್ದರೆ ಏನೂ ತೊಂದರೆ ಆಗುವುದಿಲ್ಲ. ಕಳೆದ ಆವೃತ್ತಿಯಲ್ಲಿ ಯುಎಇಯಲ್ಲಿಯೂ ಸಹ ಈವೆಂಟ್​ ನಡೆಸುವಾಗ ಇಂತಹ ಕೆಲವು ಘಟನೆಗಳು ನಡೆದಿವೆ ಆದರೆ ಪಂದ್ಯಾವಳಿ ಯಾವುದೇ ತೊಂದರೆ ಇಲ್ಲದೆ ಜರುಗಿತು. ಮುಂಬೈನಲ್ಲಿ ಪಂದ್ಯಗಳನ್ನು ನಡೆಸಲು ನಮಗೆ ರಾಜ್ಯ ಸರ್ಕಾರದಿಂದ ಅಗತ್ಯ ಅನುಮತಿ ಮತ್ತು ಭರವಸೆ ಸಿಕ್ಕಿದೆ. ಏಪ್ರಿಲ್ 10 ರಿಂದ 25 ರ ನಡುವೆ ಮುಂಬೈನಲ್ಲಿ ಕೇವಲ ಹತ್ತು ಪಂದ್ಯಗಳನ್ನು ಆಯೋಜಿಸಲಿದ್ದು, ಬಯೋ-ಬಬಲ್ ಒಳಗೆ ಚಿಂತೆ ಮಾಡಲು ಏನೂ ಇರುವುದಿಲ್ಲ. ನಾವು ಉತ್ತಮ ಸುರಕ್ಷಿತ ಸೆಟಪ್‌ನಲ್ಲಿದ್ದೇವೆ ಮತ್ತು ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಸುರಕ್ಷಿತವಾಗಿರುತ್ತಾರೆ ಎಂದು ಬಿಸಿಸಿಐ ಅಧ್ಯಕ್ಷ ಹೇಳಿಕೆ ನೀಡಿದ್ದಾರೆ.

ಕಳೆದ 48 ಗಂಟೆಗಳಲ್ಲಿ, ವಿವಿಧ ಆಟಗಾರರು, ಐಪಿಎಲ್ 2021 ಗೆ ಸಂಪರ್ಕ ಹೊಂದಿದ ಕಾರ್ಮಿಕರು ಮುಂಬೈನಲ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ವಾಂಖೆಡೆದಲ್ಲಿನ ಗ್ರೌಂಡ್ಸ್‌ಮನ್ ಕೊರೊನಾಗೆ ತುತ್ತಾಗಿದ್ದಾರೆ. ಅಕ್ಷರ್ ಪಟೇಲ್ (ಡಿಸಿ), ದೇವದತ್ ಪಡಿಕ್ಕಲ್ (ಆರ್‌ಸಿಬಿ) ಮುಂಬೈನಲ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಜೊತೆಗೆ ಸಿಎಸ್ಕೆ ತಂಡದ ಸಿಬ್ಬಂದಿಯ ಒಬ್ಬ ಸದಸ್ಯ ಧನಾತ್ಮಕವಾಗಿ ಕಂಡುಬಂದಿದ್ದಾರೆ. ಆದರೆ ಗಂಗೂಲಿ ಮತ್ತು ಇತರ ಬಿಸಿಸಿಐ ಅಧಿಕಾರಿಗಳು ಮುಂಬಯಿಯಲ್ಲಿ ಯಾವುದೇ ಪ್ರಮುಖ ಸಮಸ್ಯೆಗಳಿಲ್ಲದೆ ಪಂದ್ಯಗಳನ್ನು ನಡೆಸಬಹುದು ಎಂಬ ವಿಶ್ವಾಸದಲ್ಲಿದ್ದಾರೆ.

ಹೈದರಾಬಾದ್‌ಗೆ ಸ್ಥಳಾಂತರಿಸಬಹುದೆಂದು ಮಾತುಕತೆ ಇತ್ತು ದೇಶದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಶೀಘ್ರ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ ಮುಂಬೈ 9000 ಕ್ಕೂ ಹೆಚ್ಚು ಜನರನ್ನು ವೈರಸ್ ಆವರಿಸಿದೆ ಎಂದು ವರದಿಯಾಗಿದೆ. ಪಂದ್ಯಗಳನ್ನು ಹೈದರಾಬಾದ್‌ಗೆ ಸ್ಥಳಾಂತರಿಸಬಹುದೆಂದು ಮಾತುಕತೆ ಇತ್ತು. ಆದರೆ ಭಾರತದ ಮಾಜಿ ನಾಯಕ ಅದನ್ನು ಅಲ್ಲಗಳೆದಿದ್ದಾರೆ. ಮುಂಬೈನಲ್ಲಿ ತಮ್ಮ ಐಪಿಎಲ್ ಅಭಿಯಾನವನ್ನು ಪ್ರಾರಂಭಿಸಲಿರುವ ನಾಲ್ಕು ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ದೆಹಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ – ಈಗಾಗಲೇ ಅಲ್ಲಿಗೆ ತಲುಪಿದ್ದಾರೆ. ಜೊತೆಗೆ ಪ್ರತ್ಯೇಕವಾಗಿ ಪಂಚತಾರಾ ಹೋಟೆಲ್​ಗಳಲ್ಲಿ ವಾಸ್ತವ್ಯ ಹೂಡಿದ್ದಾರೆ.

ಭಾನುವಾರ ಸಭೆ ಸೇರಿದ ಮಹಾರಾಷ್ಟ್ರ ಕ್ಯಾಬಿನೆಟ್ ಸಂಪೂರ್ಣ ಲಾಕ್ ಡೌನ್ ವಿಧಿಸುವುದರ ವಿರುದ್ಧ ನಿರ್ಧರ ತೆಗೆದುಕೊಂಡಿದೆ. ಕೊರೊನಾ ವೈರಸ್ ಪ್ರಕರಣಗಳಲ್ಲಿ ಏರಿಕೆಯ ಮಧ್ಯೆ ಮುಂದಿನ ವಾರಾಂತ್ಯದಲ್ಲಿ ಶುಕ್ರವಾರ ರಾತ್ರಿ 8 ರಿಂದ ಸೋಮವಾರ ಸಂಜೆ 7 ರವರೆಗೆ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮತ್ತು ಕಟ್ಟುನಿಟ್ಟಾದ ಲಾಕ್ ಡೌನ್ ಸೇರಿದಂತೆ ಹೊಸ ನಿರ್ಬಂಧಗಳನ್ನು ಮಹಾರಾಷ್ಟ್ರ ಸರ್ಕಾರ ಪ್ರಕಟಿಸಿದೆ.

ಇದನ್ನೂ ಓದಿ:IPL 2021: ಆರ್​ಸಿಬಿ ಚಾಂಪಿಯನ್​ ಕನಸಿಗೆ ಅವರ ನಿರ್ಧಾರಗಳೇ ಮುಳುವಾಗ್ತಿದೆ.. ಐಪಿಎಲ್​ನಲ್ಲಿ ರೋಹಿತ್​ ಮಾಡಿದ ಸಾಧನೆ ಕೊಹ್ಲಿಯಿಂದ ಆಗಲಿಲ್ಲವೇಕೆ?

Published On - 11:43 am, Mon, 5 April 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ