ಕೊರೊನಾ ಹೆಮ್ಮಾರಿಗೆ ಐಪಿಎಲ್ 2021 ಬಲಿ, ಈ ವರ್ಷದ ಟೂರ್ನಿ ಮಧ್ಯದಲ್ಲಿಯೇ ರದ್ದು
ಐಪಿಎಲ್ 2021 ಸರಣಿ ಕೊರೊನಾ ಕಾರಣದಿಂದ ಸ್ಥಗಿತಗೊಂಡಿದೆ. ಒಬ್ಬರಾದ ಮೇಲೊಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವ ಕಾರಣ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದ್ದು, ಈ ಬಾರಿಯ ಸರಣಿ ಅರ್ಧಕ್ಕೆ ಮೊಟಕುಗೊಂಡಂತಾಗಿದೆ.
ಐಪಿಎಲ್ 2021 ಸರಣಿ ಕೊರೊನಾ ಕಾರಣದಿಂದ ಸ್ಥಗಿತಗೊಂಡಿದೆ. ಒಬ್ಬರಾದ ಮೇಲೊಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವ ಕಾರಣ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದ್ದು, ಈ ಬಾರಿಯ ಸರಣಿ ಅರ್ಧಕ್ಕೆ ಮೊಟಕುಗೊಂಡಂತಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಕೊರೊನಾ ಉಲ್ಬಣಿಸುತ್ತಿರುವ ಕಾರಣದಿಂದ ಸರಣಿಯನ್ನು ನಿಲ್ಲಿಸುವ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿದೆ. ನಿನ್ನೆ (ಮಾರ್ಚ್ 3) ಆರ್ಸಿಬಿ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಆರಂಭವಾಗಬೇಕಿದ್ದ ಕೆಲ ಸಮಯದ ಮುಂಚಿತವಾಗಿ ಕೆಕೆಆರ್ ತಂಡದ ವರುಣ್ ಚಕ್ರವರ್ತಿಗೆ ಹಾಗೂ ಸಂದೀಪ್ ವಾರಿಯರ್ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿರುವುದು ವರದಿಯಾಗಿತ್ತು. ಈ ಕಾರಣದಿಂದಾಗಿ ನಿನ್ನೆಯ ಪಂದ್ಯವನ್ನೂ ಮುಂದೂಡಲಾಗಿತ್ತು.
(Ipl 2021 Corona Stumps Ipl 2021 As Bcci Forced To Suspend For This Season Due To Pandemic)