IPL 2021: ಏಪ್ರಿಲ್ 9ರಿಂದ ಮೇ 30ರ ವರೆಗೆ ಈ ಬಾರಿಯ ಐಪಿಎಲ್; ಕೌನ್ಸಿಲ್​ ಅನುಮತಿ ಸಿಕ್ಕರೆ ಇದೇ ದಿನಾಂಕ ಫಿಕ್ಸ್

IPL Cricket 2021: ಏಪ್ರಿಲ್ 9ರಿಂದ ಈ ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಡೆಯುವ ಸಾಧ್ಯತೆ ಇದೆ. ಐಪಿಎಲ್ ನಡೆಯುವ ಸ್ಥಳ ಅಥವಾ ಮೈದಾನಗಳ ವಿವರವನ್ನು ಗವರ್ನಿಂಗ್ ಕೌನ್ಸಿಲ್ ತೀರ್ಮಾನಿಸಲಿದೆ.

IPL 2021: ಏಪ್ರಿಲ್ 9ರಿಂದ ಮೇ 30ರ ವರೆಗೆ ಈ ಬಾರಿಯ ಐಪಿಎಲ್; ಕೌನ್ಸಿಲ್​ ಅನುಮತಿ ಸಿಕ್ಕರೆ ಇದೇ ದಿನಾಂಕ ಫಿಕ್ಸ್
IPL 2021
Follow us
TV9 Web
| Updated By: ganapathi bhat

Updated on:Apr 06, 2022 | 7:24 PM

ದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ನೇ ಆವೃತ್ತಿಯ ಪಂದ್ಯಾಟಗಳು ಏಪ್ರಿಲ್ 9ರಿಂದ ಮೇ 30ರ ವರೆಗೆ ನಡೆಯುವ ಸಾಧ್ಯತೆಗಳಿದೆ. ಈ ದಿನಾಂಕಗಳ ಸಮಯದಲ್ಲಿ ಐಪಿಎಲ್ ನಡೆಸಲು ಪಟ್ಟಿ ತಯಾರಾಗಿದ್ದು, ಗವರ್ನಿಂಗ್ ಕೌನ್ಸಿಲ್ (GC) ಅನುಮತಿ ಸಿಕ್ಕರೆ ಏಪ್ರಿಲ್ 9ಕ್ಕೆ ಪಂದ್ಯಾಟ ಆರಂಭವಾಗಲಿದೆ. ಬಹುಜನಪ್ರಿಯ ಕ್ರಿಕೆಟ್ ಫಾರ್ಮಾಟ್ ಐಪಿಎಲ್​ನ 14ನೇ ಆವೃತ್ತಿ ಆಡುವ ಸ್ಥಳಗಳ ಪಟ್ಟಿ ಕೂಡ ಅಂತಿಮವಾಗಬೇಕಿದೆ. ಮುಂದಿನ ವಾರದಲ್ಲಿ ನಡೆಯಲಿದೆ ಎಂದು ಅಂದಾಜಿಸಲಾಗಿರುವ ಗವರ್ನಿಂಗ್ ಕೌನ್ಸಿಲ್ (GC) ಮೀಟಿಂಗ್​ನಲ್ಲಿ ದಿನಾಂಕ ಮತ್ತು ಸ್ಥಳ ನಿಗದಿಯಾಗುವ ನಿರೀಕ್ಷೆ ಇದೆ.

ANI ಸುದ್ದಿಸಂಸ್ಥೆ ಜತೆ ಮಾತನಾಡಿರುವ ಗವರ್ನಿಂಗ್ ಕೌನ್ಸಿಲ್ ಸದಸ್ಯ, ಏಪ್ರಿಲ್ 9ರಿಂದ ಈ ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಡೆಯುವ ಸಾಧ್ಯತೆ ಇದೆ. ಐಪಿಎಲ್ ನಡೆಯುವ ಸ್ಥಳ ಅಥವಾ ಮೈದಾನಗಳ ವಿವರವನ್ನು ಗವರ್ನಿಂಗ್ ಕೌನ್ಸಿಲ್ ತೀರ್ಮಾನಿಸಲಿದೆ. ಮುಂದಿನ ವಾರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಮುಂದಿನ ವಾರ ನಡೆಯಲಿದೆ ಎಂದ ಗವರ್ನಿಂಗ್ ಕೌನ್ಸಿಲ್ ಸಭೆಯು, ಐಪಿಎಲ್ ಪಂದ್ಯಾವಳಿಗಳು ನಡೆಯುವ ಸ್ಥಳ ನಿಗದಿ ಮಾಡುವ ಉದ್ದೇಶವನ್ನು ಮಾತ್ರ ಹೊಂದಿಲ್ಲ. ಆದರೆ, ಪ್ರಪೋಸಲ್​ನಲ್ಲಿ ಇರುವಂತೆ ಏಪ್ರಿಲ್ 9ರಿಂದ ಆರಂಭವಾಗಿ ಮೇ 30ರ ವರೆಗೆ ಐಪಿಎಲ್ ಪಂದ್ಯಾಟ ನಡೆಯುವ ಸಾಧ್ಯತೆ ಇದೆ ಎಂದು GC ಸದಸ್ಯ ತಿಳಿಸಿದ್ದಾರೆ.

ಈ ಹಿಂದೆ ಐಪಿಎಲ್ 2021ನ್ನು ಒಂದೇ ನಗರದಲ್ಲಿ ಆಯೋಜಿಸಲಾಗುವುದು ಎಂಬ ಮಾತುಗಳು ಕೇಳಿಬಂದಿತ್ತು. ಆದರೆ, ಈಗ ಬಿಸಿಸಿಐ ಐದು ಅಥವಾ ಆರು ನಗರಗಳಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ಆಯೋಜಿಸಲು ಯೋಚಿಸುತ್ತಿದೆ. ಈ ಬಗ್ಗೆ ಚರ್ಚೆಗಳಾಗುತ್ತಿದೆ. ಬಿಸಿಸಿಐನ ಹಿರಿಯ ಅಧಿಕಾರಿಗಳು ಐಪಿಎಲ್ ನಡೆಯಲಿರುವ ಸ್ಥಳಗಳ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ.

ಐಪಿಎಲ್​ನ ಈ ಬಾರಿಯ ಆವೃತ್ತಿಯನ್ನು ಒಂದಕ್ಕಿಂತ ಹೆಚ್ಚು ನಗರಗಳಲ್ಲಿ ಆಡಲು ಉದ್ದೇಶಿಸಿದ್ದೇವೆ. ಮೊದಲು ಕೈಗೊಂಡಿದ್ದ ತೀರ್ಮಾನಕ್ಕಿಂತ ಭಿನ್ನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಕೊರೊನಾ ಪರಿಸ್ಥಿತಿಯು ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ, ಕ್ರಿಕೆಟಿಗರ ಮತ್ತು ಕ್ರೀಡಾಳುಗಳ ಆರೋಗ್ಯ ಸುರಕ್ಷತೆಯೇ ನಮ್ಮ ಪ್ರಾಥಮಿಕ ಕಾಳಜಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ, ಕೋಲ್ಕತ್ತಾ, ಚೆನ್ನೈ ಮತ್ತು ಹೈದರಾಬಾದ್ ನಗರಗಳಲ್ಲಿ ಐಪಿಎಲ್ 14ನೇ ಆವೃತ್ತಿ ನಡೆಯಬಹುದು ಎಂದು ಹೇಳಲಾಗುತ್ತಿದೆ. ಒಂದಕ್ಕಿಂತ ಹೆಚ್ಚು ನಗರಗಳಲ್ಲಿ ಐಪಿಎಲ್ ನಡೆಸುವ ಬಗ್ಗೆ ಫ್ರಾಂಚೈಸಿಗಳೂ ಸಹಮತ ಸೂಚಿಸಿವೆ. ಹೆಚ್ಚು ಸಂಖ್ಯೆಯ ಅಭಿಮಾನಿಗಳನ್ನು ಐಪಿಎಲ್ ಮೂಲಕ ತಲುಪುವ ವಿಚಾರದಲ್ಲಿ ಬಿಸಿಸಿಐ ಆಸಕ್ತಿ ವಹಿಸಿದೆ.

Published On - 5:47 pm, Sat, 6 March 21

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು