ಕೋಲ್ಕತಾ: ಐಪಿಎಲ್ 2021 ಸಾಲಿನ ಉಳಿಕೆ ಪಂದ್ಯಗಳನ್ನು ದುಬೈ, ಅಬುಧಾಬಿ, ಶಾರ್ಜಾದಲ್ಲಿ (ಯುಎಇ ಕೊಲ್ಲಿ ರಾಷ್ಟ್ರಗಳಲ್ಲಿ) ಆಯೋಜಿಸಲು ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿ ಬಿಸಿಸಿಐ ಉತ್ಸುಕತೆ ತೋರಿದ್ದು, ಸೆಪ್ಟೆಂಬರ್ 19ರಿಂದ ಈ ಸಾಲಿನ ಬಾಕಿ ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್ 19ರಿಂದ ಪುನರಾರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ. ಅಕ್ಟೋಬರ್ 15ಂದು ಫೈನಲ್ ಪಂದ್ಯ ನಡೆಯಲಿದೆ. ಈ ಸಂಬಂಧ ಬಿಸಿಸಿಐ (BCCI) ಮತ್ತು ಎಮಿರೇಟ್ಸ್ ಕ್ರಿಕೆಟ್ ಮಂಡಳಿ (Emirates Cricket Board (ECB) ಮಧ್ಯೆ ಈ ಸಂಭಂದ ಮಾತುಕತೆ ಅಂತಿಮಗೊಂಡಿವೆ ಎಂದು ತಿಳಿದುಬಂದಿದೆ.
ಐಪಿಎಲ್ 2021 ಟೂರ್ನಿ ಭಾರತದಲ್ಲಿ ಈ ಬಾರಿಯೂ ಭರ್ಜರಿಯಾಗಿ ನಡೆದಿತ್ತು. ಆದರೆ ದೇಶಾದ್ಯಂತ ಕೊರೊನಾ ಸೋಂಕು ತೀವ್ರವಾದ ಹಿನ್ನೆಲೆಯಲ್ಲಿ ಏಕಾಏಕಿ ಟೂರ್ನಿ ಸ್ಥಗಿತಗೊಂಡಿತ್ತು. ಇದೀಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಾಯ್ ಶಾ ಯುಎಇನಲ್ಲಿ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯೊಂದಿಗೆ ಯಶಸ್ವಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ECB ಈಗಾಗಲೇ ಮೌಖಿಕ ಸಮ್ಮತಿ ನೀಡಿದೆ
ಉಳಿದ 31 ಪಂದ್ಯಗಳನ್ನು 25 ದಿನಗಳೊಳಗಾಗಿ ಪೂರ್ಣಗೊಳಿಸಲು ಬಿಸಿಸಿಐ ಉತ್ಸುಕವಾಗಿದೆ. ECB ಈಗಾಗಲೇ ಮಾತುಕತೆ ವೇಳೆ ಮೌಖಿಕವಾಗಿ ಸಮ್ಮತಿ ಸೂಚಿಸಿದೆ ಎಂದು ತಿಳಿದುಬಂದಿದೆ. ಕಳೆದ ಬಾರಿಯೂ ಅಂದ್ರೆ ಐಪಿಎಲ್ 2020 ಟೂರ್ನಿಯನ್ನು ದುಬೈ, ಅಬುಧಾಬಿ, ಶಾರ್ಜಾದಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು.
ಐಪಿಎಲ್ 2021 ರ ಉಳಿದ ಪಂದ್ಯಗಳನ್ನು ಯುಎಇಯಲ್ಲಿ ಆಯೋಜಿಸಲು ಭಾರತೀಯ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ. ಈಗ ಟೂರ್ನಿಯ ಉಳಿದ ಪಂದ್ಯಗಳ ವೇಳಾಪಟ್ಟಿ ತಯಾರಿಸುವತ್ತ ಬಿಸಿಸಿಐ ಆಲೋಚಿಸುತ್ತಿದೆ. ಕೊರೊನಾ ಪ್ರಕರಣ ಹೆಚ್ಚಾದ ನಂತರ ಮೇ 5 ರಂದು ಪಂದ್ಯಾವಳಿಯ 29 ಪಂದ್ಯಗಳ ನಂತರ ಐಪಿಎಲ್ 2021 ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪಂದ್ಯಾವಳಿಯ ವೇಳೆ ನಾಲ್ಕು ತಂಡಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದವು. ಸೆಪ್ಟೆಂಬರ್‌ನಲ್ಲಿ ಯುಎಇಯಲ್ಲಿ ವಾತಾವರಣ ತುಂಬಾ ಬಿಸಿಯಾಗಿರುತ್ತದೆ. ಹೀಗಾಗಿ ಮಧ್ಯಾಹ್ನ 3 ಗಂಟೆಗೆ ಪಂದ್ಯ ಆಯೋಜಿಸುವುದು ತುಂಬಾ ಕಷ್ಟಕರ. ಬಿಸಿಲು ಹೆಚ್ಚಾಗಿರುವುದರಿಂದ ಆಟಗಾರರಿಗೆ ತೊಂದರೆ ಉಂಟಾಗಬಹುದು ಎಂಬ ಲೆಕ್ಕಾಚಾರವೂ ಇದೆ.
(IPL 2021 From September 19 in UAE with the final to be played on October 15 BCCI reports)
Published On - 4:43 pm, Mon, 7 June 21