IPL 2022 ರಲ್ಲಿ ಧೋನಿ ಆಡದಿದ್ರೆ ನಾನೂ ಕಣಕ್ಕಿಳಿಯಲ್ಲ ಎಂದ CSKಯ ಸ್ಟಾರ್ ಆಟಗಾರ

ಚೆನ್ನೈ ತಂಡದ ಸ್ಟಾರ್ ಆಟಗಾರ ಸುರೇಶ್ ರೈನಾ ಅವರು, ಧೋನಿ ಐಪಿಎಲ್ 2022 ರಲ್ಲಿ ಕಣಕ್ಕಿಳಿಯುವುದಿಲ್ಲ ಎಂದಾದರೆ ನಾನುಕೂಡ ಆಡುವುದಿಲ್ಲ ಎಂದು ಹೇಳಿದ್ದಾರೆ.

IPL 2022 ರಲ್ಲಿ ಧೋನಿ ಆಡದಿದ್ರೆ ನಾನೂ ಕಣಕ್ಕಿಳಿಯಲ್ಲ ಎಂದ CSKಯ ಸ್ಟಾರ್ ಆಟಗಾರ
ಚೆನ್ನೈ ಸೂಪರ್ ಕಿಂಗ್ಸ್ ತಂಡ
Follow us
Vinay Bhat
|

Updated on: Jul 10, 2021 | 12:33 PM

ಇಂಡಿಯನ್ ಪ್ರೀಮಿಯರ್ ಲೀಗ್(IPL) 13ನೇ ಆವೃತ್ತಿಯಲ್ಲಿ ಅತ್ಯಂತ ಕೆಟ್ಟ ಪ್ರದರ್ಶನ ನೀಡಿ ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸಾಕಷ್ಟು ಮುಖಭಂಗಕ್ಕೆ ಒಳಗಾಗಿತ್ತು. ಈ ಸಂದರ್ಭ ಎಂ, ಎಸ್ ಧೋನಿ ನಾಯಕತ್ವದ ಬಗ್ಗೆಯೂ ಪ್ರಶ್ನೆಗಳು ಎದ್ದಿದ್ದವು. ಅಲ್ಲದೆ ತಂಡದ ಪ್ರಮುಖ ಬ್ಯಾಟ್ಸ್​ಮನ್ ಸುರೇಶ್ ರೈನಾ ಟೂರ್ನಿಯಿಂದ ಹೊರಬಿದ್ದಿದ್ದು ಮತ್ತೊಂದು ಹೊಡೆತ ಎನ್ನಬಹುದು.

ಆದರೆ, ಐಪಿಎಲ್ 2021 ರಲ್ಲಿ ಭರ್ಜರಿ ಕಮ್​ಬ್ಯಾಕ್ ಮಾಡಿದ ಚೆನ್ನೈ ಕೋವಿಡ್ ಕಾರಣದಿಂದ ಟೂರ್ನಿ ಅರ್ಧಕ್ಕೆ ಮೊಟಕುಗೊಂಡಾಗ ಪಾಯಿಂಟ್ ಟೇಬಲ್​ನಲ್ಲಿ ಎರಡನೇ ಸ್ಥಾನದಲ್ಲಿತ್ತು. ಎಂದಿನಂತೆ ಈ ಬಾರಿಕೂಡ ಐಪಿಎಲ್ ಆರಂಭವಾದಾಗ ಇದು ಧೋನಿಯ ಕೊನೆಯ ಸೀಸನ್ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಎಂಎಸ್​ಡಿ ಇದಕ್ಕೆ ಯಾವುದೇ ಪ್ರತ್ಯುತ್ತರ ನೀಡಿರಲಿಲ್ಲ. ಹೀಗಾಗಿ ಈ ವಿಚಾರ ಗೊಂದಲವಾಗಿಯೇ ಉಳಿದಿದೆ.

ಇದರ ನಡುವೆ ಸದ್ಯ ಚೆನ್ನೈ ತಂಡದ ಸ್ಟಾರ್ ಆಟಗಾರ ಸುರೇಶ್ ರೈನಾ ಅವರು, ಧೋನಿ ಐಪಿಎಲ್ 2022 ರಲ್ಲಿ ಕಣಕ್ಕಿಳಿಯುವುದಿಲ್ಲ ಎಂದಾದರೆ ನಾನುಕೂಡ ಆಡುವುದಿಲ್ಲ ಎಂದು ಹೇಳಿದ್ದಾರೆ.

ನನ್ನಲ್ಲಿ ಕ್ರಿಕೆಟ್ ಆಡುವ ಶಕ್ತಿ ಇನ್ನೂ 4-5 ವರ್ಷಗಳಿವೆ. ಈ ವರ್ಷ ಐಪಿಎಲ್ ಆದ ಬಳಿಕ ಮುಂದಿನ ವರ್ಷ ಇನ್ನೆರಡು ತಂಡಗಳು ಸೇರ್ಪಡೆ ಆಗಲಿದೆ. ನಾನು ಐಪಿಎಲ್ ಆಡಿದರೆ ಅದು ಸಿಎಸ್​ಕೆ ತಂಡಕ್ಕಾಗಿ ಮಾತ್ರ. ಧೋನಿ ಮುಂದಿನ ಸೀಸನ್​ನಲ್ಲಿ ಆಡಲ್ಲ ಎಂದಾದರೆ ನಾನುಕೂಡ ಕಣಕ್ಕಿಳಿಯುವುದಿಲ್ಲ. 2008 ರಿಂದ ಸಿಎಸ್​ಕೆ ತಂಡದಲ್ಲಿ ನಾವಿಬ್ಬರು ಒಟ್ಟಿಗೆ ಆಡುತ್ತಿದ್ದೇವೆ. ಈ ವರ್ಷ ನಾವು ಕಪ್ ಗೆಲ್ಲುವ ವಿಶ್ವಾಸ ಹೊಂದಿದ್ದೇವೆ. ಗೆದ್ದರೆ ಮುಂದಿನ ವರ್ಷಕೂಡ ಧೋನಿಯನ್ನು ಆಡಲು ಮನವೊಲಿಸುತ್ತೇನೆ ಎಂದು ರೈನಾ ಹೇಳಿದ್ದಾರೆ.

ಸದ್ಯ ಅರ್ಧಕ್ಕೆ ನಿಂತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್ ಟೂರ್ನಿಯು ಸೆಪ್ಟೆಂಬರ್‌ 18ರಂದು ಯುನೈಟೆಡ್‌ ಅರಬ್‌ ಎಮಿರೈಟ್ಸ್‌ (UAE) ಆತಿಥ್ಯದಲ್ಲಿ ಆಯೋಜನೆ ಆಗಲಿದೆ. ಸಾಧ್ಯತೆ ದಟ್ಟವಾಗಿದೆ.

ಐಪಿಎಲ್ 2021 ಟೂರ್ನಿಯನ್ನು ಭಾರತದಲ್ಲೇ ಸಂಪೂರ್ಣವಾಗಿ ಆಯೋಜಿಸಲು ಬಿಸಿಸಿಐ ಬಯೋ ಬಬಲ್‌ ನಿರ್ಮಾಣ ಮಾಡಿತ್ತು. ಆದರೂ ನಾಲ್ಕು ಫ್ರಾಂಚೈಸಿ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ವೈರಸ್‌ ಕಾಣಿಸಿಕೊಂಡ ಕಾರಣ ಟೂರ್ನಿಯನ್ನು ಅರ್ಧಕ್ಕೆ ನಿಲ್ಲಿಸಿ ಅನಿರ್ಧಿಷ್ಟಾವಧಿಗೆ ಮುಂದೂಡಲಾಯಿತು. ಏಪ್ರಿಲ್ 9ರಂದು ಶುರುವಾಗಿದ್ದ 60 ಪಂದ್ಯಗಳ ಐಪಿಎಲ್ 2021 ಟೂರ್ನಿ ನಿಗದಿಯಂತೆ ಮೇ 30ಕ್ಕೆ ಅಹ್ಮದಾಬಾದ್‌ನಲ್ಲಿ ಅಂತ್ಯಗೊಳ್ಳಬೇಕಿತ್ತು. ಆದರೆ, 29 ಪಂದ್ಯಗಳ ನಂತರ ಮೇ 4ರಂದು ಟೂರ್ನಿಗೆ ತಾತ್ಕಾಲಿಕ ತೆರೆ ಬಿದ್ದತು.

ಸಿಕ್ಸ್ ಲೈನ್ ಬಳಿ ಸೂಪರ್ ಮ್ಯಾನ್​ನಂತೆ ಹಾರಿದ ಟೀಮ್ ಇಂಡಿಯಾ ಮಹಿಳಾ ಆಟಗಾರ್ತಿ: ರೋಚಕ ವಿಡಿಯೋ ಇಲ್ಲಿದೆ

Happy Birthday Sunil Gavaskar: 72ನೇ ವರ್ಷಕ್ಕೆ ಕಾಲಿಟ್ಟ ಟೀಮ್ ಇಂಡಿಯಾದ ಲಿಟಲ್ ಮಾಸ್ಟರ್: ಇಲ್ಲಿದೆ ಗವಾಸ್ಕರ್ ಬೆಸ್ಟ್ ರೆಕಾರ್ಡ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್