IPL 2021 MI vs CSK Live Streaming: ಪಂದ್ಯ ಆರಂಭವಾಗುವ ಸಮಯ, ಲೈವ್ ಸ್ಟ್ರೀಮಿಂಗ್, ಯಾವ ಚಾನೆಲ್ನಲ್ಲಿ ವೀಕ್ಷಣೆ, ಇಲ್ಲಿದೆ ಮಾಹಿತಿ
IPL 2021 MI vs CSK: ಸರಣಿ ಆರಂಭದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಕೈಯಲ್ಲಿ ಎರಡು ವಿಕೆಟ್ ಸೋಲಿನೊಂದಿಗೆ ಈ ಬಾರಿ ಪಯಣ ಆರಂಭಿಸಿದ್ದ ಮುಂಬೈ ಮತ್ತೆ ಪುಟಿದೇಳುವ ವಿಶ್ವಾಸದಲ್ಲಿದೆ.
2021 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅರ್ಧದಾರಿ ತಲುಪಿದ್ದು, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ (ಎಂಐ) ಪಂದ್ಯ 27 ರಲ್ಲಿ ಎಂಎಸ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಸೆಣಸಾಡುತ್ತಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. 2020 ರಲ್ಲಿ ನಿರಾಶಾದಾಯಕ ಪ್ನಂರದಶ್ತನದರ ಸಿಎಸ್‌ಕೆ ತಮ್ಮ ಅಸಲಿ ಆಟದೊಂದಿಗೆ ಉತ್ತಮವಾಗಿ ಮರಳಿದೆ. ಆರು ಪಂದ್ಯಗಳಲ್ಲಿ ಐದು ಗೆಲುವು, 1 ಸೋಲು ಕಂಡಿದ್ದು, 10 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.
ರೋಹಿತ್ ಶರ್ಮಾ ಅವರ ಎಂಐ, ಮೂರು ಗೆಲುವು ಮತ್ತು ಮೂರು ಸೋಲುಗಳೊಂದಿಗೆ ಈ ಸರಣಿಯಲ್ಲಿ ಸೋಲು, ಗೆಲುವನ್ನು ಸಮಾನಾಗಿ ಅನುಭವಿಸಿದೆ. ಹೊಂದಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ವಿರುದ್ಧ ಗೆಲುವು ದಾಖಲಿಸುವ ಮೊದಲು ಸರಣಿ ಆರಂಭದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಕೈಯಲ್ಲಿ ಎರಡು ವಿಕೆಟ್ ಸೋಲಿನೊಂದಿಗೆ ಈ ಬಾರಿ ಪಯಣ ಆರಂಭಿಸಿದ್ದ ಮುಂಬೈ ಮತ್ತೆ ಪುಟಿದೇಳುವ ವಿಶ್ವಾಸದಲ್ಲಿದೆ.
ಎಂಐ ಮತ್ತು ಸಿಎಸ್‌ಕೆ ನಡುವಿನ ಐಪಿಎಲ್‌ನ 27 ನೇ ಪಂದ್ಯ ಯಾವಾಗ ನಡೆಯಲಿದೆ? ಎಂಐ ಮತ್ತು ಸಿಎಸ್‌ಕೆ ನಡುವಿನ ಐಪಿಎಲ್‌ನ 27 ನೇ ಪಂದ್ಯವು 2021 ಮೇ 1 ರಂದು ನಡೆಯಲಿದೆ.
ಪಂದ್ಯದ ಸ್ಥಳ ಯಾವುದು? ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.
ಪಂದ್ಯವು ಯಾವ ಸಮಯದಲ್ಲಿ ಪ್ರಾರಂಭವಾಗುತ್ತದೆ? ಸಂಜೆ 7.30 ಕ್ಕೆ ಪಂದ್ಯ ಆರಂಭವಾಗಲಿದೆ. ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.
ಯಾವ ಟಿವಿ ಚಾನೆಲ್‌ಗಳು ಪಂದ್ಯವನ್ನು ಪ್ರಸಾರ ಮಾಡುತ್ತವೆ? ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿಯೂ ಲಭ್ಯವಿರುತ್ತದೆ.
ತಂಡಗಳು ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಆಡಮ್ ಮಿಲ್ನೆ, ಆದಿತ್ಯ ತಾರೆ, ಅನ್ಮೋಲ್‌ಪ್ರೀತ್ ಸಿಂಗ್, ಅನುಕುಲ್ ರಾಯ್, ಅರ್ಜುನ್ ತೆಂಡೂಲ್ಕರ್, ಕ್ರಿಸ್ ಲಿನ್, ಧವಲ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜೇಮ್ಸ್ ನೀಶಮ್, ಜಸ್ಪ್ರೀತ್ ಬುಮ್ರಾ, ಜಯಂತ್ ಯಾದವ್, ಕೀರನ್ ಪೊಲಾರ್ಡ್, ಕ್ರುನಾಲ್ ಪಲ್ಲಾರ್ಡ್ , ಮೊಹ್ಸಿನ್ ಖಾನ್, ನಾಥನ್ ಕೌಲ್ಟರ್-ನೈಲ್, ಪಿಯೂಷ್ ಚಾವ್ಲಾ, ಕ್ವಿಂಟನ್ ಡಿ ಕಾಕ್, ರಾಹುಲ್ ಚಹರ್, ಸೌರಭ್ ತಿವಾರಿ, ಸೂರ್ಯಕುಮಾರ್ ಯಾದವ್, ಟ್ರೆಂಟ್ ಬೌಲ್ಟ್, ಯುಧ್ವೀರ್ ಸಿಂಗ್.
ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ (ನಾಯಕ), ಸುರೇಶ್ ರೈನಾ, ಅಂಬಾಟಿ ರಾಯುಡು, ಕೆಎಂ ಆಸಿಫ್, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಇಮ್ರಾನ್ ತಾಹಿರ್, ಎನ್ ಜಗದೀಸನ್, ಕರ್ನ್ ಶರ್ಮಾ, ಲುಂಗಿ ಎನ್‌ಜಿಡಿ, ಮಿಚೆಲ್ ಸಾಂಟ್ನರ್, ರವೀಂದ್ರ ರುತುರಾಜ್ ಗಾಯಕವಾಡ್, ಶಾರ್ದುಲ್ ಠಾಕೂರ್, ಸ್ಯಾಮ್ ಕುರ್ರನ್, ಆರ್ ಸಾಯಿ ಕಿಶೋರ್, ಮೊಯೀನ್ ಅಲಿ, ಕೆ ಗೌತಮ್, ಚೇತೇಶ್ವರ ಪೂಜಾರ, ಹರಿಶಂಕರ್ ರೆಡ್ಡಿ, ಭಗತ್ ವರ್ಮಾ, ಸಿ ಹರಿ ನಿಶಾಂತ್.
Published On - 9:31 am, Sat, 1 May 21