IPL 2021 PBKS vs CSK: ಕೊಹ್ಲಿಗೆ ಬೇಡವಾಗಿ ಪಂಜಾಬ್​ ಸೇರಿದ ಈ ಐದು ಆಟಗಾರರೇ ಇಂದು ಧೋನಿಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದಾರೆ!

IPL 2021: ರಾಹುಲ್ ಅವರಲ್ಲದೆ, ಕ್ರಿಸ್ ಗೇಲ್, ಮಾಯಾಂಕ್ ಅಗರ್ವಾಲ್, ಸರ್ಫರಾಜ್ ಖಾನ್ ಮತ್ತು ಮಂದೀಪ್ ಸಿಂಗ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭಾಗವಾಗಿದ್ದರು.

IPL 2021 PBKS vs CSK: ಕೊಹ್ಲಿಗೆ ಬೇಡವಾಗಿ ಪಂಜಾಬ್​ ಸೇರಿದ ಈ ಐದು ಆಟಗಾರರೇ ಇಂದು ಧೋನಿಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದಾರೆ!
ಪಂಜಾಬ್ ತಂಡ
Follow us
ಪೃಥ್ವಿಶಂಕರ
|

Updated on:Apr 16, 2021 | 4:52 PM

ಇಂಡಿಯನ್ ಪ್ರೀಮಿಯರ್ ಲೀಗ್‌ನ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್‌ಕಿಂಗ್ಸ್ ಸ್ಪರ್ಧಿಸಲಿವೆ. ಕೆ.ಎಲ್. ರಾಹುಲ್ ನೇತೃತ್ವದ ಪಂಜಾಬ್ ತಂಡವು ಗೆಲುವಿನೊಂದಿಗೆ ತಮ್ಮ ಅಭಿಯಾನವನ್ನು ಪ್ರಾರಂಭಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಸೋತು ತೀವ್ರ ಮುಖಭಂಗ ಅನುಭವಿಸಿದೆ. ಮೊದಲ ಪಂದ್ಯದಲ್ಲಿ ಸೋಲಿನ ಹೊರತಾಗಿಯೂ, ಧೋನಿಗೆ ತೊಂದರೆಗಳು ಕಡಿಮೆಯಾಗಿಲ್ಲ. ಕೊಹ್ಲಿಗೆ ಬೇಡವಾದ ಈ ಐದು ಆಟಗಾರರು ಈಗ ಧೋನಿಗೆ ದೊಡ್ಡ ತಲೆನೋವಾಗಿದ್ದಾರೆ.

ಪಂಜಾಬ್ ಕಿಂಗ್ಸ್ ತಂಡದ ಐದು ಆಟಗಾರರು ಆರ್ಸಿಬಿಯ ಭಾಗವಾಗಿದ್ದರು ವಾಸ್ತವವಾಗಿ, ಪಂಜಾಬ್ ಕಿಂಗ್ಸ್ ತಂಡದ ಐದು ಆಟಗಾರರು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭಾಗವಾಗಿದ್ದರು. ಇವುಗಳಲ್ಲಿ ಪಂಜಾಬ್‌ ತಂಡದ ನಾಯಕ ಕೆ.ಎಲ್.ರಾಹುಲ್ ಅವರು ಹೆಸರು ಸೇರಿದೆ. ರಾಹುಲ್ ಅವರಲ್ಲದೆ, ಕ್ರಿಸ್ ಗೇಲ್, ಮಾಯಾಂಕ್ ಅಗರ್ವಾಲ್, ಸರ್ಫರಾಜ್ ಖಾನ್ ಮತ್ತು ಮಂದೀಪ್ ಸಿಂಗ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭಾಗವಾಗಿದ್ದರು. ಈ ಪೈಕಿ ರಾಹುಲ್, ಗೇಲ್ ಮತ್ತು ಮಾಯಾಂಕ್ ನಿಯಮಿತವಾಗಿ ತಂಡದ ಆಡುವ ಇಲೆವೆನ್‌ನ ಭಾಗವಾಗಿದ್ದರೆ, ಸರ್ಫರಾಜ್ ಮತ್ತು ಮಂದೀಪ್ ಕೂಡ ಕಾಲಕಾಲಕ್ಕೆ ತಂಡಕ್ಕಾಗಿ ಮೈದಾನಕ್ಕಿಳಿಯುತ್ತಿದ್ದಾರೆ.

ಮೊದಲ ಪಂದ್ಯವನ್ನು ಪಂಜಾಬ್ ಗೆದ್ದುಕೊಂಡಿತು, ಚೆನ್ನೈಗೆ ಗೆಲುವಿನೊಂದಿಗಿನ ಚೊಚ್ಚಲ ಪ್ರವೇಶ ಸಾಧ್ಯವಾಗಲಿಲ್ಲ. ಐಪಿಎಲ್‌ನ 14 ನೇ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಗೆಲುವಿನೊಂದಿಗೆ ಪಂಜಾಬ್ ತಂಡವು ತಮ್ಮ ಅಭಿಯಾನವನ್ನು ಪ್ರಾರಂಭಿಸಿದರೆ, ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಕಳೆದುಕೊಂಡಿತು. ಪಂಜಾಬ್ ಕಿಂಗ್ಸ್ 6 ವಿಕೆಟ್ ಕಳೆದುಕೊಂಡು 221 ರನ್ ಗಳಿಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ತಂಡವು 7 ವಿಕೆಟ್‌ಗಳಿಗೆ 217 ರನ್ ಗಳಿಸಲಷ್ಟೇ ಶಕ್ತವಾಯಿತು. ಅದೇ ಸಮಯದಲ್ಲಿ, ಚೆನ್ನೈ ತಂಡವು ದೆಹಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್ ನಷ್ಟಕ್ಕೆ 188 ರನ್‌ಗಳ ಸವಾಲಿನ ಸ್ಕೋರ್ ಗಳಿಸಿತು. ಆದರೆ ರಿಷಭ್ ಪಂತ್ ನೇತೃತ್ವದ ದೆಹಲಿ ತಂಡವು 18.4 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಗುರಿ ಸಾಧಿಸಿತು. ಪಂಜಾಬ್ ತಂಡವು ತಮ್ಮ ಗೆಲುವಿನ ಹಾದಿಯನ್ನು ಮುನ್ನಡೆಸುತ್ತದೆಯೇ ಅಥವಾ ಧೋನಿಯ ಚೆನ್ನೈ ಗೆಲುವಿನ ಹಾದಿಗೆ ಮರಳಲು ಸಾಧ್ಯವಾಗುತ್ತದೆಯೇ ಎಂದು ನೋಡಬೇಕಾಗಿದೆ.

Published On - 4:49 pm, Fri, 16 April 21

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ