IPL 2021 Points Table: ಮೊದಲ ಸ್ಥಾನ ಕಾಯ್ದುಕೊಂಡ ಆರ್ಸಿಬಿ; ಇಂದಾದರೂ ಮೇಲೇಳುತ್ತಾ ಚೆನ್ನೈ?
Orange Cap Holder And Purple Cap Holder List: ಇಂದಿನ ಪಂದ್ಯ ಚೆನ್ನೈ ಮತ್ತು ಪಂಜಾಬ್ ನಡುವೆ ನಡೆಯಲಿದ್ದು, ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿದರೆ, 2ರಲ್ಲಿ 2 ಗೆಲುವು ಕಂಡು ಆರ್ಸಿಬಿಗೆ ಪೈಪೋಟಿ ನೀಡುವ ನಿರೀಕ್ಷೆ ಇದೆ. ಒಂದುವೇಳೆ ಚೆನ್ನೈ ಗೆದ್ದರೆ, ಕೊನೆಯ ಸ್ಥಾನದಿಂದ ಮೇಲಿನ ಸ್ಥಾನಕ್ಕೆ ಬರುವ ನಿರೀಕ್ಷೆ ಇದೆ.
ಐಪಿಎಲ್ 2021 ಟೂರ್ನಿಯ 7 ಪಂದ್ಯಗಳು ನಡೆದಿವೆ. ನಿನ್ನೆ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 3 ವಿಕೆಟ್ಗಳ ರೋಚಕ ಗೆಲುವು ದಾಖಲಿಸಿಕೊಂಡಿದೆ. 8ನೇ ಪಂದ್ಯ ಇಂದು (ಏಪ್ರಿಲ್ 16) ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಈ ಮಧ್ಯೆ ಟೂರ್ನಿಯ ಪಾಯಿಂಟ್ಸ್ ಟೇಬಲ್ ಪಟ್ಟಿ ಹೇಗಿದೆ ಎಂದು ನೋಡುವುದಾದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಸ್ಥಾನ ಕಾಯ್ದುಕೊಂಡಿದೆ. ಮತ್ತೊಂದು ದಿಗ್ಗಜ ತಂಡ ಚೆನ್ನೈ ಸೂಪರ್ ಕಿಂಗ್ಸ್ ಕೊನೆಯ ಸ್ಥಾನದಲ್ಲೇ ಉಳಿದುಕೊಂಡಿದೆ. ನಿನ್ನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿದ್ದರೆ, ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಸ್ಥಾನ ವ್ಯತ್ಯಾಸವಾಗುತ್ತಿತ್ತು. ಆದರೆ, ಹಾಗಾಗಿಲ್ಲ.
2 ಪಂದ್ಯದಲ್ಲಿ 2 ಪಂದ್ಯವನ್ನೂ ಗೆದ್ದ ಆರ್ಸಿಬಿ ಮೊದಲ ಸ್ಥಾನ ಉಳಿಸಿಕೊಂಡಿದೆ. ಮುಂಬೈ ಇಂಡಿಯನ್ಸ್ 2ರಲ್ಲಿ 1 ಪಂದ್ಯ ಗೆದ್ದು ನಂತರದ ಸ್ಥಾನದಲ್ಲಿದೆ. ಬಳಿಕ, 1ರಲ್ಲಿ 1 ಪಂದ್ಯ ಗೆದ್ದಿರುವ ಪಂಜಾಬ್ ಕಿಂಗ್ಸ್ ಇದೆ. ಆಮೇಲೆ ಕ್ರಮವಾಗಿ, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್ ಇದ್ದು, ಚೆನ್ನೈ ಸೂಪರ್ ಕಿಂಗ್ಸ್ ಕೊನೆಯ ಸ್ಥಾನದಲ್ಲಿದೆ.
ಇಂದಿನ ಪಂದ್ಯ ಚೆನ್ನೈ ಮತ್ತು ಪಂಜಾಬ್ ನಡುವೆ ನಡೆಯಲಿದ್ದು, ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿದರೆ, 2ರಲ್ಲಿ 2 ಗೆಲುವು ಕಂಡು ಆರ್ಸಿಬಿಗೆ ಪೈಪೋಟಿ ನೀಡುವ ನಿರೀಕ್ಷೆ ಇದೆ. ಒಂದುವೇಳೆ ಚೆನ್ನೈ ಗೆದ್ದರೆ, ಕೊನೆಯ ಸ್ಥಾನದಿಂದ ಮೇಲಿನ ಸ್ಥಾನಕ್ಕೆ ಏರುವ ನಿರೀಕ್ಷೆ ಇದೆ. ಅಂಕಪಟ್ಟಿಯಲ್ಲಿ ಆರ್ಸಿಬಿಗೆ ಸ್ಥಾನಪಲ್ಲಟವಾಗುತ್ತಾ? ಅಥವಾ ಚೆನ್ನೈ ಉನ್ನತ ಸ್ಥಾನಕ್ಕೆ ಏರಿಕೆ ಕಾಣುತ್ತದಾ? ಎಂದು ಕಾದುನೋಡಬೇಕಿದೆ.
ಆರೆಂಜ್ ಕ್ಯಾಪ್ ಯಾರ ಬಳಿ ಇದೆ? ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಿತೀಶ್ ರಾಣಾ 137 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. ಆರೆಂಜ್ ಕ್ಯಾಪ್ ಹೊಂದಿದ್ದಾರೆ. ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಆದರೆ, ನಿನ್ನೆಯ ಪಂದ್ಯದಲ್ಲಿ ಕಡಿಮೆ ರನ್ ಗಳಿಸಿ ಆರೆಂಜ್ ಕ್ಯಾಪ್ ಪಡೆಯುವುದರಿಂದ ವಂಚಿತರಾಗಿದ್ದಾರೆ. ಮನೀಶ್ ಪಾಂಡೆ, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಶಿಖರ್ ಧವನ್ ಕ್ರಮವಾಗಿ 3, 4 ಮತ್ತು 5ನೇ ಸ್ಥಾನದಲ್ಲಿದ್ದಾರೆ.
ಪರ್ಪಲ್ ಕ್ಯಾಪ್ ಯಾರ ಬಳಿ ಇದೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹರ್ಷಲ್ ಪಟೇಲ್ 2 ಪಂದ್ಯದಲ್ಲಿ 7 ವಿಕೆಟ್ ಗಳಿಸಿ ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಾರೆ. ರಸ್ಸೆಲ್ 6 ವಿಕೆಟ್ ಮೂಲಕ 2ನೇ ಸ್ಥಾನದಲ್ಲಿದ್ದಾರೆ. ಅವೇಶ್ ಖಾನ್, ರಶೀದ್ ಖಾನ್ ಹಾಗೂ ಕ್ರಿಸ್ ವೋಕ್ಸ್ ಕ್ರಮವಾಗಿ 3, 4 ಮತ್ತು 5ನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ: IPL 2021: ಕ್ರಿಸ್ ಮಾರಿಸ್ ಕಾಲೆಳೆದ ವಿರೇಂದ್ರ ಸೆಹ್ವಾಗ್; ಟ್ವಿಟರ್ನಲ್ಲಿ ವೈರಲ್ ಆಯ್ತು ತಮಾಷೆ!
ಇದನ್ನೂ ಓದಿ: ಶಿವಮೊಗ್ಗದಲ್ಲಿ ಹೋಟೆಲ್ ಮಾಲೀಕನ ಆರ್ಸಿಬಿ ಅಭಿಮಾನ; ರಾಯಲ್ ಚಾಲೆಂಜರ್ಸ್ಗೆ ವಿಭಿನ್ನ ರೀತಿಯ ಬೆಂಬಲ
(IPL 2021 Points Table Orange and Purple Cap holders RCB Royal Challengers Bangalore CSK Chennai Super Kings)
Published On - 5:18 pm, Fri, 16 April 21