IPL 2021 Points Table: ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಟಾಪ್; ಮತ್ತೆ ಮೊದಲ ಸ್ಥಾನಕ್ಕೇರುತ್ತಾ ಆರ್​ಸಿಬಿ?

Orange and Purple Cap Holders: ಐಪಿಎಲ್ 2021 ಟೂರ್ನಿ ಆರಂಭವಾಗಿ 15 ಪಂದ್ಯಗಳು ನಡೆದಿವೆ. ಅದಕ್ಕೆ ಸಂಬಂಧಿಸಿ, ಅಂದರೆ ನಿನ್ನೆಯ ಪಂದ್ಯದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಆಡಿರುವ 4 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ 6 ಅಂಕ ಪಡೆದು ಮೊದಲ ಸ್ಥಾನಕ್ಕೇರಿದೆ.

IPL 2021 Points Table: ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಟಾಪ್; ಮತ್ತೆ ಮೊದಲ ಸ್ಥಾನಕ್ಕೇರುತ್ತಾ ಆರ್​ಸಿಬಿ?
ಇನ್ನು ಮುಂದಿನ ಸೀಸನ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ ಮೆಗಾ ಹರಾಜು ಕೂಡ ನಡೆಯಲಿದೆ. ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ ಡಿಸೆಂಬರ್ ಅಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಐಪಿಎಲ್ ಸೀಸನ್ 15 ಮೆಗಾ ಹರಾಜು ನಡೆಯುವ ಸಾಧ್ಯತೆಯಿದೆ.
Follow us
TV9 Web
| Updated By: ganapathi bhat

Updated on:Nov 30, 2021 | 12:15 PM

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಿನ್ನೆ (ಏಪ್ರಿಲ್ 21) ನಡೆದ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 18 ರನ್​ಗಳ ರೋಚಕ ಗೆಲುವು ದಾಖಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಬರೋಬ್ಬರಿ 221 ರನ್​ಗಳ ಟಾರ್ಗೆಟ್ ನೀಡಿತ್ತು. ಬಳಿಕ ಅಷ್ಟೇ ಅಬ್ಬರದ ಎರಡನೇ ಇನ್ನಿಂಗ್ಸ್​ನಲ್ಲಿ ಕೊನೆಗೆ ಚೆನ್ನೈ ಮೇಲುಗೈ ಸಾಧಿಸಿತು. ಈ ಮೂಲಕ ಅಂಕಪಟ್ಟಿಯಲ್ಲಿ ಚೆನ್ನೈ ಮೊದಲ ಸ್ಥಾನಕ್ಕೆ ಏರಿತು. ಅದುವರೆಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡನೇ ಸ್ಥಾನಕ್ಕೆ ಇಳಿಯಿತು.

ಐಪಿಎಲ್ 2021 ಟೂರ್ನಿ ಆರಂಭವಾಗಿ 15 ಪಂದ್ಯಗಳು ನಡೆದಿವೆ. ಅದಕ್ಕೆ ಸಂಬಂಧಿಸಿ, ಅಂದರೆ ನಿನ್ನೆಯ ಪಂದ್ಯದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಆಡಿರುವ 4 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ 6 ಅಂಕ ಪಡೆದು ಮೊದಲ ಸ್ಥಾನಕ್ಕೇರಿದೆ. ಕೆಲವು ದಿನಗಳ ಹಿಂದಷ್ಟೇ ಕೊನೆಯ ಸ್ಥಾನದಲ್ಲಿದ್ದ ಸಿಎಸ್​ಕೆ ಅಗ್ರಸ್ಥಾನ ಪಡೆದುಕೊಂಡಿದೆ. ಆಡಿರುವ 3 ಪಂದ್ಯದಲ್ಲಿ 3ರಲ್ಲೂ ಗೆದ್ದಿರುವ ಆರ್​ಸಿಬಿ ಎರಡನೇ ಸ್ಥಾನದಲ್ಲಿದೆ.

ಹಾಗೆಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕಿಂತ ಕಡಿಮೆ ಅಂಕ ಹೊಂದಿಲ್ಲ. ಆರ್​ಸಿಬಿ ಕೂಡ 6 ಅಂಕಗಳನ್ನು ಹೊಂದಿದೆ. ಆದರೆ ಆರ್​ಸಿಬಿ ತಂಡದ ನೆಟ್ ರನ್​ರೇಟ್ ಸಿಎಸ್​ಕೆಗಿಂತ ಕಡಿಮೆ ಇರುವುದರಿಂದ ಆರ್​ಸಿಬಿ ಎರಡನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ ಗೆಲುವು ಕಂಡರೆ ಮತ್ತೆ ರಾಯಲ್ ಚಾಲೆಂಜರ್ಸ್ ಮೊದಲ ಸ್ಥಾನಕ್ಕೆ ಏರಲಿದೆ.

ಉಳಿದಂತೆ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಲಾ 6 ಮತ್ತು 4 ಅಂಕ ಪಡೆದು ಪಾಯಿಂಟ್ಸ್​ ಟೇಬಲ್​ನಲ್ಲಿ 3 ಮತ್ತು 4ನೇ ಸ್ಥಾನದಲ್ಲಿದೆ. ಸನ್​ರೈಸರ್ಸ್ ಹೈದರಾಬಾದ್, ಕೋಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್, ಈ ನಲ್ಕೂ ತಂಡಗಳು ಕೂಡ ಒಂದೇ ಪಂದ್ಯದಲ್ಲಿ ಗೆಲುವು ಕಂಡಿದ್ದು, ನೆಟ್ ರನ್​ರೇಟ್ ಕಾರಣಕ್ಕೆ ಅಂಕಪಟ್ಟಿಯಲ್ಲಿ ಕ್ರಮವಾಗಿ 5, 6, 7 ಮತ್ತು 8ನೇ ಸ್ಥಾನದಲ್ಲಿ ಉಳಿದಿವೆ.

ಆರೆಂಜ್ ಕ್ಯಾಪ್ ಪಟ್ಟಿ ಹೀಗಿದೆ ನಿನ್ನೆ ನಡೆದ ಪಂದ್ಯದಲ್ಲಿ ಅಬ್ಬರಿಸಿದ ಇಬ್ಬರು ದಾಂಡಿಗರು, ಜಾನಿ ಬೇರ್​ಸ್ಟೋ ಹಾಗೂ ಫಪ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ಲಿಸ್ಟ್ ಸೇರಿಕೊಂಡಿದ್ದಾರೆ. ಬೇರ್​​ಸ್ಟೋ 173 ರನ್ ಗಳಿಸಿ ಆರೆಂಜ್ ಕ್ಯಾಪ್ ಪಟ್ಟಿಯ 3ನೇ ಸ್ಥಾನದಲ್ಲಿದ್ದಾರೆ. ಡುಪ್ಲೆಸಿಸ್ 164 ರನ್​ಗಳಿಸಿ 4ನೇ ಸ್ಥಾನ ಪಡೆದಿದ್ದಾರೆ. ಆರೆಂಜ್ ಕ್ಯಾಪ್ ಪಟ್ಟಿಯ ಅಗ್ರಸ್ಥಾನದಲ್ಲಿ ಸನ್​ರೈಸರ್ಸ್ ಹೈದರಾಬಾದ್​ನ ಶಿಖರ್ ಧವನ್ ಇದ್ದಾರೆ. 231 ರನ್ ಗಳಿಸಿ ಮೊದಲ ಸ್ಥಾನ ಉಳಿಸಿಕೊಂಡಿದ್ದಾರೆ. ಆರ್​ಸಿಬಿಯ ಗ್ಲೆನ್ ಮ್ಯಾಕ್ಸ್​ವೆಲ್ 176 ರನ್ ಗಳಿಸಿ 2ನೇ ಸ್ಥಾನದಲ್ಲಿದ್ದರೆ, ಕೆಕೆಆರ್​ನ ನಿತೀಶ್ ರಾಣಾ ಐದನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್ ಪಟ್ಟಿ ಹೀಗಿದೆ ಕೋಲ್ಕತ್ತಾ ವಿರುದ್ಧದ ನಿನ್ನೆಯ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿದ ಚಹರ್ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಸ್ಥಾನ ಕಂಡುಕೊಂಡಿದ್ದಾರೆ. 8 ವಿಕೆಟ್ ಪಡೆದು ದೀಪಕ್ ಚಹರ್ 2ನೇ ಸ್ಥಾನದಲ್ಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್​ನ ಅವೇಶ್ ಖಾನ್ ಮತ್ತು ಮುಂಬೈನ ರಾಹುಲ್ ಚಹರ್ 8 ವಿಕೆಟ್ ಪಡೆದು 3ನೇ ಮತ್ತು 4ನೇ ಸ್ಥಾನದಲ್ಲಿದ್ದಾರೆ. ರಸ್ಸೆಲ್ 7 ವಿಕೆಟ್ ಪಡೆದು ಕೊನೆಯ ಸ್ಥಾನದಲ್ಲಿದ್ದಾರೆ. ಆರ್​ಸಿಬಿಯ ಹರ್ಷಲ್ ಪಟೇಲ್ 9 ವಿಕೆಟ್ ಕಬಳಿಸಿ ಮೊದಲ ಸ್ಥಾನ ಉಳಿಸಿಕೊಂಡಿದ್ದಾರೆ.

ಇಂದು (ಏಪ್ರಿಲ್ 22) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಪಂದ್ಯ ನಡೆಯಲಿದ್ದು, ಅಂಕಪಟ್ಟಿಯಲ್ಲಿ ಹಾಗೂ ಆರೆಂಜ್, ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಏನೇನು ಬದಲಾವಣೆ ಆಗುತ್ತದೆ ಎಂದು ಕಾದುನೋಡಬೇಕಿದೆ.

ಇದನ್ನೂ ಓದಿ: IPL 2021: ಆರ್​ಸಿಬಿಗೆ ಹೆಚ್ಚಾಯ್ತು ನ್ಯಾಗ್ಸ್ ಕಾಟ; ಈತನನ್ನ ಫ್ಲೈಟ್​ನಿಂದ ಆಚೆ ಎಸೆಯಿರಿ ಎಂದ ಕೊಹ್ಲಿ! ಟಾಯ್ಲೆಟ್​ನಲ್ಲಿ ಲಾಕ್ ಮಾಡಿದ ಆಟಗಾರರು

IPL 2021: ಆರ್​ಸಿಬಿ ಪರ ಕೊಹ್ಲಿ ಮಾಡಿದ ವಿಶಿಷ್ಠ ಸಾಧನೆಗೆ ಭರ್ತಿ 12 ವರ್ಷ! ರಾಜಸ್ಥಾನ್ ವಿರುದ್ಧವು ನಡೆಯುತ್ತಾ ವಿರಾಟ್ ದರ್ಬಾರ್?

(IPL 2021 Points Table Orange Cap Purple Cap holders list RCB CSK Team Players)

Published On - 4:34 pm, Thu, 22 April 21

ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ