IPL 2021 Points Table: ಅಂಕಪಟ್ಟಿಯಲ್ಲಿ ಆರ್​ಸಿಬಿ ಟಾಪ್​, ಸಿಎಸ್​ಕೆ ಲಾಸ್ಟ್​!

ರಾಯಲ್ ಚಾಲೆಂಜರ್ಸ್ ಈ ಸೀಸನ್​ನಲ್ಲಿ ಸತತವಾಗಿ ಎರಡು ಪಂದ್ಯ ಗೆದ್ದಿದೆ. ಕೊಹ್ಲಿ ಟೀಂ ಅಭಿಮಾನಿಗಳು, ಆರ್​ಸಿಬಿ ಸರಣಿಯುದ್ದಕ್ಕೂ ಇದೇ ಪ್ರದರ್ಶನ ಮುಂದುವರಿಸುತ್ತದೆ ಎಂಬ ನಿರೀಕ್ಷೆಯಲ್ಲಿ ಇದ್ದಾರೆ.

IPL 2021 Points Table: ಅಂಕಪಟ್ಟಿಯಲ್ಲಿ ಆರ್​ಸಿಬಿ ಟಾಪ್​, ಸಿಎಸ್​ಕೆ ಲಾಸ್ಟ್​!
ಆರ್​ಸಿಬಿ
Follow us
TV9 Web
| Updated By: ganapathi bhat

Updated on:Apr 05, 2022 | 12:37 PM

ಐಪಿಎಲ್ ಟೂರ್ನಿಯ ಪಾಯಿಂಟ್ಸ್ ಟೇಬಲ್ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಸ್ಥಾನದಲ್ಲಿದೆ. ನಿನ್ನೆ ನಡೆದ ಲೀಗ್​ನ 6ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ರೋಚಕ ರೀತಿಯಲ್ಲಿ ಬಗ್ಗುಬಡಿದ ಬಳಿಕ ಮೊದಲ ಸ್ಥಾನ ಅಲಂಕರಿಸಿದೆ. ರಾಯಲ್ ಚಾಲೆಂಜರ್ಸ್ ಈ ಸೀಸನ್​ನಲ್ಲಿ ಸತತವಾಗಿ ಎರಡು ಪಂದ್ಯ ಗೆದ್ದಿದೆ. ಕೊಹ್ಲಿ ಟೀಂ ಅಭಿಮಾನಿಗಳು, ಆರ್​ಸಿಬಿ ಸರಣಿಯುದ್ದಕ್ಕೂ ಇದೇ ಪ್ರದರ್ಶನ ಮುಂದುವರಿಸುತ್ತದೆ ಎಂಬ ನಿರೀಕ್ಷೆಯಲ್ಲಿ ಇದ್ದಾರೆ.

ಪಾಯಿಂಟ್ಸ್ ಟೇಬಲ್​ನಲ್ಲಿ ಸದ್ಯದ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನದಲ್ಲಿದೆ. ಮುಂಬೈ ಹಾಗೂ ಪಂಜಾಬ್ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ. ಬಳಿಕ, ಕೋಲ್ಕತ್ತಾ, ರಾಜಸ್ಥಾನ ತಂಡವಿದೆ. ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನಯ ಸೂಪರ್ ಕಿಂಗ್ಸ್ ಕೊನೆಯ ಎರಡು ಸ್ಥಾನಗಳಲ್ಲಿದೆ.

ಪಾಯಿಂಟ್ಸ್ ಟೇಬಲ್ ಲೆಕ್ಕಾಚಾರ ಹೀಗಿದೆ.. ಇಂದು (ಏಪ್ರಿಲ್ 15) ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹಣಾಹಣಿ ನಡೆಯಲಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಡೆಲ್ಲಿ ಪಾಯಿಂಟ್ಸ್ ಟೇಬಲ್​ನಲ್ಲಿ ಮೊದಲ ಸ್ಥಾನಕ್ಕೆ ಏರಲಿದೆ. 2ರಲ್ಲಿ 2 ಮ್ಯಾಚ್ ಗೆದ್ದಿರುವ ಆರ್​ಸಿಬಿ ಎರಡನೇ ಸ್ತಾನಕ್ಕೆ ಇಳಿಕೆ ಕಾಣಲಿದೆ. ಡೆಲ್ಲಿ ತಂಡವು ಇಂದು ಗೆಲುವು ಕಂಡರೆ ಮೊದಲ ಸ್ಥಾನ ಅಲಂಕರಿಸಲಿದೆ. +0.175 ನೆಟ್ ರನ್​ರೇಟ್ ಹೊಂದಿರುವ ಆರ್​ಸಿಬಿ 2ನೇ ಸ್ಥಾನಕ್ಕೆ ಬರಲಿದೆ.

ನಾಳೆ-ನಾಡಿದ್ದು ಇವರು ಗೆದ್ದರೆ ಆರ್​ಸಿಬಿಗೆ ಅನುಕೂಲ.. ಇಂದಿನ ಲೆಕ್ಕಾಚಾರದ ಪ್ರಕಾರ, ಆರ್​ಸಿಬಿ 2ನೇ ಸ್ಥಾನಕ್ಕಿಂತ ಕೆಳಗೆ ಇಳಿಯುವ ಸಾಧ್ಯತೆ ಇಲ್ಲ. ನಾಳೆ (ಏಪ್ರಿಲ್ 16) ಪಂಜಾಬ್ ಹಾಗೂ ಚೆನ್ನೈ ನಡುವಿನ ಹಣಾಹಣಿಯಲ್ಲಿ ಚೆನ್ನೈ ಗೆಲುವು ಸಾಧಿಸಿದರೆ ಆರ್​ಸಿಬಿಗೆ ಪಾಯಿಂಟ್ಸ್ ಟೇಬಲ್ ಲೆಕ್ಕಾಚಾರದಲ್ಲಿ ಅನುಕೂಲವಾಗಲಿದೆ. ಹಾಗೂ ನಾಡಿದ್ದು (ಏಪ್ರಿಲ್ 17) ಮುಂಬೈ-ಹೈದರಾಬಾದ್ ಪಂದ್ಯದಲ್ಲಿ ಹೈದರಾಬಾದ್ ತಂಡ ಗೆಲುವು ಕಂಡರೆ ಆರ್​ಸಿಬಿಗೆ ಸಹಾಯವಾಗಲಿದೆ.

ಆರೆಂಜ್ ಕ್ಯಾಪ್ ಯಾರ ಬಳಿ ಇದೆ? ಐಪಿಎಲ್ ಟೂರ್ನಿಯ ಅತಿ ಹೆಚ್ಚು ರನ್ ಸ್ಕೋರರ್​ಗೆ ನೀಡುವ ಆರೆಂಜ್ ಕ್ಯಾಪ್ ನಿತೀಶ್ ರಾಣಾ ಕೈಲಿದೆ. 137 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. ಶತಕವೀರ ಸಂಜು ಸ್ಯಾಮ್ಸನ್ 119 ರನ್ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಮನೀಶ್ ಪಾಂಡೆ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಕೆ.ಎಲ್. ರಾಹುಲ್ ನಂತರದ ಸ್ಥಾನ ಪಡೆದುಕೊಂಡಿದ್ದಾರೆ.

ಪರ್ಪಲ್ ಕ್ಯಾಪ್ ಯಾರ ಬಳಿ ಇದೆ? ಆರ್​ಸಿಬಿ ಆಲ್​ರೌಂಡರ್ ಹರ್ಷಲ್ ಪಟೇಲ್ ಟೂರ್ನಿಯಲ್ಲಿ 7 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿ ಇದ್ದಾರೆ. ರಸ್ಸೆಲ್ 6 ವಿಕೆಟ್ ಮೂಲಕ ಎರಡನೇಯವರಾಗಿ ಇದ್ದಾರೆ. ಉಳಿದಂತೆ, ರಶೀದ್ ಖಾನ್, ರಾಹುಲ್ ಚಹರ್, ಕಮ್ಮಿನ್ಸ್ ನಂತರದ ಸ್ಥಾನದಲ್ಲಿ ಇದ್ದಾರೆ.

ಇದನ್ನೂ ಓದಿ: Kaviya Maran: ಹೈದರಾಬಾದ್ ಪಂದ್ಯದ ವೇಳೆ ಕ್ಯಾಮರಾ ಕಣ್ಣಿಗೆ ಬೀಳುವ ಈ ಸುಂದರಿ ಯಾರು?

ಇದನ್ನೂ ಓದಿ: ಐಪಿಎಲ್ ಶಿಷ್ಟಾಚಾರ ಮುರಿದ.. ಈ ಬಾರಿಯ ಗೆಲುವಿನ ಕುದುರೆ, ಕ್ಯಾಪ್ಟನ್​ ವಿರಾಟ್​ ಕೊಹ್ಲಿಗೆ ಕಿವಿಹಿಂಡಿದ ಐಪಿಎಲ್!

(IPL 2021 Points Table RCB Royal Challengers Bangalore Players in Orange Purple Cap List)

Published On - 4:03 pm, Thu, 15 April 21

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ