AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs RR Predicted Playing 11: ರಾಜಸ್ಥಾನ್ ರಾಯಲ್ಸ್- ರಾಯಲ್ ಚಾಲೆಂಜರ್ಸ್ ಮುಖಾಮುಖಿ; ತಂಡದಲ್ಲಿ ಬದಲಾವಣೆಗಳೇನು?

ವಿರಾಟ್ ಕೊಹ್ಲಿ ನಾಯಕತ್ವದ ಆರ್​ಸಿಬಿ, ಆಡಿರುವ 3 ಪಂದ್ಯಗಳ ಪೈಕಿ ಮೂರರಲ್ಲೂ ಗೆದ್ದು ಫೇವರಿಟ್ ತಂಡ ಅನಿಸಿಕೊಂಡಿದೆ. ರಾಜಸ್ಥಾನ್ ರಾಯಲ್ಸ್ ಆಡಿರುವ 3 ಪಂದ್ಯಗಳಲ್ಲಿ 1ರಲ್ಲಿ ಗೆಲುವು ಕಂಡಿದೆ. ಮತ್ತೆರಡರಲ್ಲಿ ಸೋಲುಂಡಿದೆ.

RCB vs RR Predicted Playing 11: ರಾಜಸ್ಥಾನ್ ರಾಯಲ್ಸ್- ರಾಯಲ್ ಚಾಲೆಂಜರ್ಸ್ ಮುಖಾಮುಖಿ; ತಂಡದಲ್ಲಿ ಬದಲಾವಣೆಗಳೇನು?
ಕೊಹ್ಲಿ ನಂತರ, ಭಾರತೀಯ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಟಿ 20 ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ರೋಹಿತ್ 351 ಪಂದ್ಯಗಳ 338 ಇನ್ನಿಂಗ್ಸ್ ಗಳಲ್ಲಿ ಒಟ್ಟು 9348 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ, ಹಿಟ್ಮ್ಯಾನ್ ಆರು ಶತಕಗಳು ಮತ್ತು 65 ಅರ್ಧ ಶತಕಗಳನ್ನು ಗಳಿಸಿದ್ದಾರೆ.
TV9 Web
| Edited By: |

Updated on:Nov 30, 2021 | 12:15 PM

Share

ಐಪಿಎಲ್ 2021 ಟೂರ್ನಿಯ 16ನೇ ಪಂದ್ಯವು ಇಂದು (ಏಪ್ರಿಲ್ 22) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದೆ. ವಿರಾಟ್ ಕೊಹ್ಲಿ ನಾಯಕತ್ವದ ಆರ್​ಸಿಬಿ, ಆಡಿರುವ 3 ಪಂದ್ಯಗಳ ಪೈಕಿ ಮೂರರಲ್ಲೂ ಗೆದ್ದು ಫೇವರಿಟ್ ತಂಡ ಅನಿಸಿಕೊಂಡಿದೆ. ರಾಜಸ್ಥಾನ್ ರಾಯಲ್ಸ್ ಆಡಿರುವ 3 ಪಂದ್ಯಗಳಲ್ಲಿ 1ರಲ್ಲಿ ಗೆಲುವು ಕಂಡಿದೆ. ಮತ್ತೆರಡರಲ್ಲಿ ಸೋಲುಂಡಿದೆ.

ಬಲಿಷ್ಠ ತಂಡವನ್ನು ಹೊಂದಿರುವ ಆರ್​ಸಿಬಿ ಈ ಬಾರಿಯ ಟೂರ್ನಿಯಲ್ಲಿ ಯಶಸ್ವಿಯಗಿ ಮುನ್ನುಗ್ಗುತ್ತಿದೆ. ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಗ್ಲೆನ್ ಮ್ಯಾಕ್ಸ್​ವೆಲ್ ಬ್ಯಾಟಿಂಗ್​ಗೆ ಬಲ ತುಂಬಿದರೆ, ಹರ್ಷಲ್ ಪಟೇಲ್, ಶಹಬಾಜ್ ಅಹ್ಮದ್, ಚಹಾಲ್ ಬೌಲಿಂಗ್​ನಲ್ಲಿ ಮಿಂಚುತ್ತಿದ್ದಾರೆ. ಒಬ್ಬಿಲ್ಲೊಬ್ಬರು ದಾಂಡಿಗರು ಆರ್​ಸಿಬಿ ಬ್ಯಾಟಿಂಗ್​ಗೆ ಶಕ್ತಿ ತುಂಬುತ್ತಿದ್ದಾರೆ. ಮ್ಯಾಕ್ಸ್​ವೆಲ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲೂ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಆರ್​ಸಿಬಿ ಬೌಲರ್ ಹರ್ಷಲ್ ಪಟೇಲ್ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನ ಹೊಂದಿದ್ದಾರೆ.

ರಾಜಸ್ಥಾನ್ ರಾಯಲ್ಸ್ ಪರ ಬ್ಯಾಟಿಂಗ್ ವಿಭಾಗ ಸಂಪೂರ್ಣವಾಗಿ ಆಟದಲ್ಲಿ ಯಶಸ್ವಿಯಾಗುತ್ತಿಲ್ಲ. ಸಂಜು ಸ್ಯಾಮ್ಸನ್ ಒಂದು ಪಂದ್ಯದಲ್ಲಿ ಅಬ್ಬರಿಸಿ ಮತ್ತೆ ತಣ್ಣಗಾಗಿದ್ದಾರೆ. ಮಿಲ್ಲರ್ ಹಾಗೂ ಮಾರಿಸ್ ಆಟದ ಬಗ್ಗೆಯೂ ನಂಬಿಕೆ ಮೂಡಿಲ್ಲ. ಸಕಾರಿಯಾ, ಉನಾದ್ಕತ್, ಮಾರಿಸ್ ಬೌಲಿಂಗ್ ದಾಳಿ ಯಶಸ್ವಿಯಾಗಬೇಕಿದೆ.

ಕಳೆದ ಮೂರು ಪಂದ್ಯದಲ್ಲಿ ಗೆಲುವು ಕಂಡಿರುವ ಆರ್​ಸಿಬಿ ಇಂದು ತಂಡದಲ್ಲಿ ಬದಲಾವಣೆ ಮಾಡಿಕೊಳ್ಳುತ್ತದೆ ಎಂದು ನಿರೀಕ್ಷಿಸುವಂತಿಲ್ಲ. ಅದೇ ಯಶಸ್ವಿ ತಂಡವನ್ನು ಮುಂದುವರಿಸುವ ಸಾಧ್ಯತೆ ಹೆಚ್ಚಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆಲ್​ರೌಂಡರ್ ಬೆನ್ ಸ್ಟೋಕ್ಸ್ ಗಾಯಗೊಂಡು ತಂಡದಿಂದ ಹೊರಗುಳಿದ ಬಳಿಕ, ಡೇವಿಡ್ ಮಿಲ್ಲರ್ ಆಡುತ್ತಿದ್ದಾರೆ. ರಾಜಸ್ಥಾನ್ ರಾಯಲ್ಸ್ ಕೂಡ ಇದೇ ತಂಡವನ್ನು ಇಂದು ಆಡಿಸುವ ಸಾಧ್ಯತೆ ದಟ್ಟವಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ ಇಲೆವೆನ್: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್​ವೆಲ್, ಎಬಿ ಡಿವಿಲಿಯರ್ಸ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಕೈಲ್ ಜಾಮಿಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ ಇಲೆವೆನ್: ಜೋಸ್ ಬಟ್ಲರ್, ಮನನ್ ವೊಹ್ರಾ, ಸಂಜು ಸ್ಯಾಮ್ಸನ್ (ನಾಯಕ), ಶಿವಮ್ ದುಬೆ, ಡೇವಿಡ್ ಮಿಲ್ಲರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಜಯದೇವ್ ಉನಾದ್ಕತ್, ಚೇತನ್ ಸಕರಿಯಾ, ಮುಸ್ತಾಫಿಜುರ್ ರಹಮಾನ್

ಇದನ್ನೂ ಓದಿ: IPL 2021: ಚೆನ್ನೈಗೆ ಗೆಲುವಿನ ಆಸೆ ಉಳಿಸಿದ್ದು ಆ ಒಂದು ಬಾಲ್; ಕ್ರಿಕೆಟ್ ದೈತ್ಯ ಆಂಡ್ರೆ ರಸ್ಸೆಲ್ ಕ್ಲೀನ್ ಬೌಲ್ಡ್, ವಿಡಿಯೋ ನೋಡಿ

IPL 2021 Points Table: ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಟಾಪ್; ಮತ್ತೆ ಮೊದಲ ಸ್ಥಾನಕ್ಕೇರುತ್ತಾ ಆರ್​ಸಿಬಿ?

(IPL 2021 RCB vs RR Team Prediction Royal Challengers Bangalore vs Rajasthan Royals Playing 11)

Published On - 5:42 pm, Thu, 22 April 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು