IPL 2021: ಐಪಿಎಲ್​ 2021 ಬಾಕಿ ಉಳಿದ ಪಂದ್ಯಗಳು ದುಬೈನಲ್ಲಿ ನಡೆಯುವುದು ಖಚಿತ

IPL 2021 in UAE: ಐಪಿಎಲ್​ 14ನೇ ಆವೃತ್ತಿ ಸೆಪ್ಟೆಂಬರ್​ನಿಂದ ದುಬೈನಲ್ಲಿ ನಡೆಯುವುದು ಖಚಿತವಾಗಿದೆ. ಬಾಕಿ ಉಳಿದ ಪಂದ್ಯಗಳನ್ನು ದುಬೈನಲ್ಲಿ ನಡೆಸುವ ಬಗ್ಗೆ ಎಎನ್​ಐ ಸುದ್ದಿ ಸಂಸ್ಥೆಗೆ ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್​ ಶುಕ್ಲಾ ಸದ್ಯಕ್ಕೆ ದಿನಾಂಕಗಳು ಖಚಿತವಾಗುವುದಷ್ಟೇ ಬಾಕಿ ಇದೆ ಎಂದು ತಿಳಿಸಿದ್ದಾರೆ.

IPL 2021: ಐಪಿಎಲ್​ 2021 ಬಾಕಿ ಉಳಿದ ಪಂದ್ಯಗಳು ದುಬೈನಲ್ಲಿ ನಡೆಯುವುದು ಖಚಿತ
ಕಳೆದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಕೊರೊನಾ ವೈರಸ್ ಕಾರಣದಿಂದಾಗಿ ಅರ್ಧದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.
Follow us
Skanda
|

Updated on:May 29, 2021 | 2:31 PM

ಕೊರೊನಾ ಎರಡನೇ ಅಲೆಯ ನಿಮಿತ್ತ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲ್ಪಟ್ಟು ನಂತರ ದುಬೈನಲ್ಲಿ ನಡೆಸಬೇಕೆಂದು ಉದ್ದೇಶಿಸಲಾಗಿದ್ದ ಐಪಿಎಲ್​ 14ನೇ ಆವೃತ್ತಿ ಸೆಪ್ಟೆಂಬರ್​ನಿಂದ ದುಬೈನಲ್ಲಿ ನಡೆಯುವುದು ಖಚಿತವಾಗಿದೆ. ಬಾಕಿ ಉಳಿದ ಪಂದ್ಯಗಳನ್ನು ದುಬೈನಲ್ಲಿ ನಡೆಸುವ ಬಗ್ಗೆ ಎಎನ್​ಐ ಸುದ್ದಿ ಸಂಸ್ಥೆಗೆ ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್​ ಶುಕ್ಲಾ ಸದ್ಯಕ್ಕೆ ದಿನಾಂಕಗಳು ಖಚಿತವಾಗುವುದಷ್ಟೇ ಬಾಕಿ ಇದೆ ಎಂದು ತಿಳಿಸಿದ್ದಾರೆ. ಇನ್ನು ಕೆಲ ಮೂಲಗಳು ನೀಡಿರುವ ಮಾಹಿತಿ ಪ್ರಕಾರ ಐಪಿಎಲ್ 2021ರ ದ್ವಿತೀಯಾರ್ಧವು 25 ದಿನಗಳ ಕಾಲ ನಡೆಯಲಿದ್ದು, ಅದಕ್ಕೆ ಬೇಕಾದ ಸಕಲ ವ್ಯವಸ್ಥೆಗಳತ್ತವೂ ಬಿಸಿಸಿಐ ಗಮನ ಹರಿಸುತ್ತಿದೆ ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ ಕೆಲ ವರದಿಗಳು 14ನೇ ಆವೃತ್ತಿಯ ಐಪಿಎಲ್ ಪಂದ್ಯಾವಳಿಯ ದ್ವಿತೀಯಾರ್ಧ ಶಾರ್ಜಾ, ಅಬುಧಾಬಿ ಹಾಗೂ ದುಬೈ ಮೈದಾನಗಳಲ್ಲಿ ನಡೆಯಲಿವೆ ಎಂದು ಖಚಿತಪಡಿಸಿದ್ದವು. ಸೆಪ್ಟೆಂಬರ್ 18 ಅಥವಾ 19ರಂದು ಪಂದ್ಯಗಳು ಪುನಾರಂಭಗೊಳ್ಳಲಿದ್ದು, ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯವಾಗುತ್ತಿದ್ದಂತೆಯೇ ಆಟಗಾರರು ಅತ್ತ ತೆರಳಲಿದ್ದಾರೆ ಎಂದು ತಿಳಿಸಿದ್ದವು.

ಐಪಿಎಲ್ 2021ರ ಉಳಿದ ಪಂದ್ಯಗಳ ಆಯೋಜನೆ ಹಾಗೂ ಟಿ20 ವಿಶ್ವಕಪ್​ ಬಗ್ಗೆ ಚರ್ಚಿಸಲೆಂದು ಬಿಸಿಸಿಐ ಇಂದು (ಮೇ 29) ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಅನೇಕ ವಿಚಾರಗಳು ಮುನ್ನೆಲೆಗೆ ಬಂದಿವೆ. ಐಪಿಎಲ್​ಗೆ ಆಸ್ಟ್ರೇಲಿಯಾ ಆಟಗಾರರು ಸಿಗುವ ಸಾಧ್ಯತೆ ಇದೆ. ಆದರೆ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಆಟಗಾರರ ಲಭ್ಯತೆ ಬಗ್ಗೆ ಯೋಚಿಸಬೇಕಿದೆ. ಅದನ್ನು ಯಾವ ರೀತಿ ನಿರ್ವಹಿಸಬೇಕು ಎಂದು ಆಲೋಚಿಸಲಾಗುತ್ತಿದ್ದು, ಸದರಿ ಆವೃತ್ತಿಯ ಉಳಿದ ಪಂದ್ಯಗಳಿಗಾಗಿ 25 ದಿನಗಳನ್ನು ಮೀಸಲಿಡಲು ಚಿಂತಿಸಲಾಗುತ್ತಿದೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ.

ಟಿ20 ವಿಶ್ವಕಪ್ ಆಯೋಜನೆ ಬಗ್ಗೆ ಬಿಸಿಸಿಐ ಸರ್ವಾನುಮತದ ನಿಲುವಿಗೆ ಬಂದಿದ್ದು, ಪಂದ್ಯಾವಳಿಗೆ ಇನ್ನು ನಾಲ್ಕು ತಿಂಗಳು ಬಾಕಿ ಇರುವ ಕಾರಣ ಜೂನ್ ಅಂತ್ಯ ಅಥವಾ ಜುಲೈ ಪ್ರಾರಂಭಿಕ ವಾರದಲ್ಲಿ ಈ ಬಗ್ಗೆ ಚಿಂತಿಸಲು ನಿರ್ಧರಿಸಿದೆ. ಒಂದು ವೇಳೆ ಆ ಸಂದರ್ಭದಲ್ಲಿ ಕೊರೊನಾ ನಿಯಂತ್ರಣದಲ್ಲಿದ್ದರೆ ಹೇಗೆ ಆಯೋಜಿಸಬೇಕು ಅಥವಾ ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಏನು ಮಾಡಬೇಕು ಎಂಬೆಲ್ಲಾ ವಿಚಾರಗಳಿಗೆ ಸಂಬಂಧಿಸಿದಂತೆ ಜೂನ್​, ಜುಲೈ ವೇಳೆಗೆ ಅಂತಿಮ ನಿರ್ಧಾರ ಕೈಗೊಳ್ಳಲು ಯೋಚಿಸಲಾಗಿದೆ.

ಇತ್ತ ಐಪಿಎಲ್​ 2021ರ 31 ಪಂದ್ಯಗಳು ಬಾಕಿ ಉಳಿದಿದೆ. ಕೊರೊನಾ ಕಾರಣದಿಂದ ಈಗ ದುಬೈಗೆ ವರ್ಗವಾಗುತ್ತಿದೆಯಾದರೂ ಇದೇ ಮೊದಲ ಬಾರಿಗೆ ಸತತ ಎರಡು ವರ್ಷ ಯುಎಇ ಪ್ರಾಂತ್ಯದಲ್ಲಿ ಐಪಿಎಲ್​ ಆಯೋಜಿಸುವಂತಾಗಿದೆ. ಭಾರತ ಮತ್ತು ಇಂಗ್ಲೆಂಡ್ ಆಟಗಾರರು ಬಯೋಬಬ್ಬಲ್ ಸುರಕ್ಷತೆಯಲ್ಲೇ ಇರಲಿದ್ದು ಅವರನ್ನು ಕ್ವಾರಂಟೈನ್​ಗೆ ಒಳಪಡಿಸದೆಯೂ ದುಬೈಗೆ ಸೇರಿಸಿಕೊಳ್ಳಬಹುದಾಗಿದೆ. ಆದರೆ, ಉಳಿದ ಆಟಗಾರರಿಗೆ ಮುಂಜಾಗ್ರತಾ ಕ್ರಮವಾಗಿ ಏನೇನು ವ್ಯವಸ್ಥೆ ಮಾಡಬೇಕೆಂದು ಚರ್ಚಿಸಲಾಗುತ್ತಿದೆ.

ಇದನ್ನೂ ಓದಿ: IPL 2021: ಅರ್ಧಕ್ಕೆ ನಿಂತಿದ್ದ ಐಪಿಎಲ್​ ಮತ್ತೆ ಆರಂಭ; ಸೆಪ್ಟೆಂಬರ್​ನಿಂದ ಸರಣಿ ಮುಂದುವರೆಸಲು ಬಿಸಿಸಿಐ ನಿರ್ಧಾರ 

IPL 2021: ಐಪಿಎಲ್ ದ್ವಿತೀಯಾರ್ಧಕ್ಕೆ ಆಸೀಸ್, ಇಂಗ್ಲೆಂಡ್ ಆಟಗಾರರು ಅಲಭ್ಯ! ಕಾರಣವೇನು ಗೊತ್ತಾ?

Published On - 2:07 pm, Sat, 29 May 21

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ