AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 World Cup: ಈ ಬಾರಿಯ ಐಪಿಎಲ್​ ನಡೆಯುವ ಸ್ಥಳಗಳಲ್ಲೇ T20 ವಿಶ್ವಕಪ್​ ಆಯೋಜಿಸಲು ಬಿಸಿಸಿಐ ಚಿಂತನೆ,​ ಈ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ?

ICC T20 World Cup: ಐಪಿಎಲ್ 2021 ರ ಎಲ್ಲಾ 60 ಪಂದ್ಯಗಳನ್ನು ಆಯೋಜಿಸಿರುವ ಆರು ಸ್ಥಳಗಳಲ್ಲಿ, ವಿಶ್ವಕಪ್ ಪಂದ್ಯಗಳನ್ನು ಸಹ ಆಯೋಜಿಸುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.

ICC T20 World Cup: ಈ ಬಾರಿಯ ಐಪಿಎಲ್​ ನಡೆಯುವ ಸ್ಥಳಗಳಲ್ಲೇ T20 ವಿಶ್ವಕಪ್​ ಆಯೋಜಿಸಲು ಬಿಸಿಸಿಐ ಚಿಂತನೆ,​ ಈ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ?
ಸಾಂಧರ್ಬಿಕ ಚಿತ್ರ
ಪೃಥ್ವಿಶಂಕರ
|

Updated on: Mar 10, 2021 | 1:34 PM

Share

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 14 ನೇ ಆವೃತ್ತಿ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಬಹಳ ಮುಖ್ಯ ಮತ್ತು ವಿಶೇಷವಾಗಿದೆ. ಕಳೆದ ವರ್ಷ ಯುಎಇಗೆ ಆತಿಥ್ಯ ವಹಿಸಿದ ನಂತರ, ವಿಶ್ವದ ಅತ್ಯಂತ ದುಬಾರಿ ಕ್ರಿಕೆಟ್ ಲೀಗ್ ಮತ್ತೊಮ್ಮೆ ಭಾರತಕ್ಕೆ ಮರಳುತ್ತಿದೆ. ಪಂದ್ಯಾವಳಿ ಏಪ್ರಿಲ್ 9 ರಿಂದ ಪ್ರಾರಂಭವಾಗಲಿದ್ದು, 52 ದಿನಗಳವರೆಗೆ ಪಂದ್ಯಾವಳಿಗಳು ನಡೆಯಲಿದೆ. ಕೊರೊನಾ ಮಹಾಮಾರಿಯ ಪ್ರಕರಣಗಳು ಕಡಿಮೆ ಆಗಿತ್ತಿದ್ದರೂ, ಅದರ ಅಪಾಯ ಇನ್ನೂ ಹಾಗೇ ಇದೆ. ಹೀಗಾಗಿ ಈ ಸಂದರ್ಭದಲ್ಲಿ, ಐಪಿಎಲ್ 2021ರ ಯಶಸ್ಸು ಬಿಸಿಸಿಐಗೆ ಬಹಳ ಮುಖ್ಯವಾಗಿದೆ. ಆದರೆ ಈ ಯಶಸ್ಸು ಕೇವಲ ಐಪಿಎಲ್‌ಗೆ ಸೀಮಿತವಾಗಿಲ್ಲ. ಬದಲಿಗೆ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ 2021 ರ ಸಿದ್ಧತೆಗಳ ಅಡಿಪಾಯವಾಗಿ ಬಿಸಿಸಿಐ ಈ ಪಂದ್ಯಾವಳಿಯನ್ನು ಪರಿಗಣಿಸಿದೆ. ಅಷ್ಟೇ ಅಲ್ಲದೆ, ಐಪಿಎಲ್ 2021 ರ ಎಲ್ಲಾ 60 ಪಂದ್ಯಗಳನ್ನು ಆಯೋಜಿಸಿರುವ ಆರು ಸ್ಥಳಗಳಲ್ಲಿ, ವಿಶ್ವಕಪ್ ಪಂದ್ಯಗಳನ್ನು ಸಹ ಆಯೋಜಿಸುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.

ಟಿ20 ವಿಶ್ವಕಪ್ ಭಾರತದಲ್ಲಿ ಈ ವರ್ಷ ಅಕ್ಟೋಬರ್-ನವೆಂಬರ್​ ತಿಂಗಳಲ್ಲಿ ನಡೆಯಲಿದೆ. 2016 ರಲ್ಲಿ ಭಾರತದಲ್ಲಿ ನಡೆದ ಕೊನೆಯ ವಿಶ್ವಕಪ್ ನಂತರ ಮೊದಲ ಬಾರಿಗೆ ಈ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಆಗಿದ್ದರೂ, ಕೊರೊನಾ ವೈರಸ್ ಕಾರಣದಿಂದಾಗಿ, ಈ ಬಾರಿ ಪರಿಸ್ಥಿತಿ ಸಂಪೂರ್ಣವಾಗಿ ಭಿನ್ನವಾಗಿದೆ. ಅಲ್ಲದೆ ಬಿಸಿಸಿಐನ ಮುಂದಿರುವ ಸವಾಲುಗಳು ಸಹ ದೊಡ್ಡದಾಗಿದೆ.

8 ನಗರಗಳಲ್ಲಿ ಸಂಘಟಿಸುವ ಯೋಚನೆ ಇತ್ತು ವರದಿಗಳ ಪ್ರಕಾರ ಟಿ20 ವಿಶ್ವಕಪ್​ಗಾಗಿ, ಬಿಸಿಸಿಐ ಈ ಹಿಂದೆ 8 ಸ್ಥಳಗಳನ್ನು ಆಯ್ಕೆ ಮಾಡಿತ್ತು. ಆದರೆ ಕೊರೊನಾದಿಂದ ಉಂಟಾದ ಸಮಸ್ಯೆಗಳು, ಬಿಸಿಸಿಐನ ಚಿಂತನೆಗಳನ್ನ ಬದಲಾಯಿಸಿದವು. ಹಾಗಾಗಿ ಬಿಸಿಸಿಐ, ಈ ಬಾರಿ ಐಪಿಎಲ್ ಆವೃತ್ತಿಯನ್ನು ಆಧರಿಸಿ, ವಿಶ್ವಕಪ್ ನಡೆಯುವ ಸ್ಥಳಕ್ಕಾಗಿ ಕಾರ್ಯತಂತ್ರವನ್ನು ಸಿದ್ಧಪಡಿಸುತ್ತಿದೆ. ಇದರಿಂದ ತಂಡಗಳು ಕನಿಷ್ಠ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗಬೇಕಾಗುತ್ತದೆ. ವರದಿಯ ಪ್ರಕಾರ ಐಸಿಸಿ, ಪಂದ್ಯಾವಳಿಗಳು ನಡೆಯುವ ಸ್ಥಳವನ್ನು ಸಾಮಾನ್ಯವಾಗಿ ಸುಮಾರು 6 ತಿಂಗಳ ಮುಂಚಿತವಾಗಿ ಘೋಷಿಸುತ್ತದೆ.

ಆದರೆ ಈ ಬಾರಿ ಈ ವಿಚಾರದಲ್ಲಿ ಕೊಂಚ ಬದಲಾವಣೆಯಾಗಬಹುದು. ಅಂದರೆ, ಪಂದ್ಯಾವಳಿ ಆರಂಭಕ್ಕೂ ಸ್ವಲ್ಪ ಮೊದಲು ಸ್ಥಳವನ್ನು ಘೋಷಿಸಬಹುದಾಗಿದೆ. ಈ ಹಿಂದೆ ದೆಹಲಿ, ಮುಂಬೈ, ಕೋಲ್ಕತಾ, ಬೆಂಗಳೂರು, ಚೆನ್ನೈ, ಅಹಮದಾಬಾದ್, ಮೊಹಾಲಿ ಮತ್ತು ಧರ್ಮಶಾಲಾದಲ್ಲಿ ಪಂದ್ಯಾವಳಿ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ ಎಂದು ಹೇಳಲಾಗಿತ್ತು. ಆದರೆ ಈಗ ಧರ್ಮಶಾಲಾ ಮತ್ತು ಮೊಹಾಲಿಯಲ್ಲಿ ಪಂದ್ಯಾವಳಿಗಳನ್ನು ನಡೆಸದಿರಲು ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.

ಮುಂಬೈ-ಕೋಲ್ಕತ್ತಾದ ಅಹಮದಾಬಾದ್‌ನಲ್ಲಿ ಫೈನಲ್ ಅಷ್ಟೇ ಅಲ್ಲ, ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ನಡೆಯುವ ಸ್ಥಳಕ್ಕಾಗಿ ನಗರಗಳ ಆಯ್ಕೆ ಕೂಡ ನಿಶ್ಚಿತವಾಗಿದೆ ಎಂದು ಹೇಳಲಾಗುತ್ತಿದೆ. ಸೆಮಿಫೈನಲ್ ಪಂದ್ಯಗಳು ಚೆನ್ನೈ ಮತ್ತು ಬೆಂಗಳೂರಿನಲ್ಲಿ ನಡೆಯಲಿದ್ದು, ಪಂದ್ಯಾವಳಿಯ ಫೈನಲ್ ಪಂದ್ಯವನ್ನು ಅಹಮದಾಬಾದ್‌ನಲ್ಲಿ ಆಯೋಜಿಸಬಹುದು. 2016 ರ ಪಂದ್ಯಾವಳಿಯಲ್ಲಿ, ಮುಂಬೈ, ಕೋಲ್ಕತಾ ಮತ್ತು ದೆಹಲಿಯಲ್ಲಿ ನಾಕೌಟ್ ಪಂದ್ಯಗಳು ನಡೆದಿದ್ದವು. ಈ ಕಾರಣದಿಂದಾಗಿ ಬಿಸಿಸಿಐ ಈ ಬಾರಿ ಇತರ ಸ್ಥಳಗಳನ್ನು ಆಯ್ಕೆ ಮಾಡಬಹುದು.

ಇದನ್ನೂ ಓದಿ: India vs England: ಇಂಗ್ಲೆಂಡ್‌ ಕ್ರಿಕೆಟ್​ನಲ್ಲಿ​ ಮೋರ್ಗನ್​ಗಿರುವಷ್ಟು ಸ್ವಾತಂತ್ರ್ಯ ರೂಟ್​ಗಿಲ್ಲ! ಹಾಗಾಗಿ ಟೆಸ್ಟ್​ ಸರಣಿ ಸೋಲಬೇಕಾಯ್ತು..!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ