IPL 2021: ಸನ್​ರೈಸರ್ಸ್​ ತಂಡದ ಟಿ. ನಟರಾಜನ್​ಗೆ ಕೊರೊನಾ ಪಾಸಿಟಿವ್; ಮತ್ತೆ ರದ್ದಾಗುತ್ತಾ ಐಪಿಎಲ್?

T Natarajan : ಸನ್​ರೈಸರ್ಸ್​ ಹೈದರಾಬಾದ್​ (SRH) ತಂಡದ ಆಟಗಾರ ಟಿ. ನಟರಾಜನ್​ಗೆ ಕೊವಿಡ್ ಪಾಸಿಟಿವ್ ದೃಢಪಟ್ಟಿದೆ.

IPL 2021: ಸನ್​ರೈಸರ್ಸ್​ ತಂಡದ ಟಿ. ನಟರಾಜನ್​ಗೆ ಕೊರೊನಾ ಪಾಸಿಟಿವ್; ಮತ್ತೆ ರದ್ದಾಗುತ್ತಾ ಐಪಿಎಲ್?
ಟಿ. ನಟರಾಜನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 22, 2021 | 3:54 PM

ಕೊವಿಡ್ ಭೀತಿಯಿಂದ ಈ ಹಿಂದೆ ಐಪಿಎಲ್ ಪಂದ್ಯ ಮುಂದೂಡಲ್ಪಟ್ಟಿತ್ತು. ಬಳಿಕ ಆದರೆ, ಇದೀಗ ಮತ್ತೊಮ್ಮೆ ಐಪಿಎಲ್​ಗೆ ಕೊರೊನಾ ಸಂಕಷ್ಟ ಎದುರಾಗಿದ್ದು, ಸನ್​ರೈಸರ್ಸ್​ ಹೈದರಾಬಾದ್​ (SRH) ತಂಡದ ಆಟಗಾರ ಟಿ. ನಟರಾಜನ್​ಗೆ ಕೊವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರಿಂದಾಗಿ ಮತ್ತೊಮ್ಮೆ ಐಪಿಲ್ ಪಂದ್ಯ ರದ್ದಾಗಲಿದೆಯಾ? ಎಂಬ ಚರ್ಚೆಗಳು ಶುರುವಾಗಿವೆ. ಆದರೆ, ಇಂದಿನ ಡಿಸಿ ವರ್ಸಸ್ ಎಸ್​ಆರ್​ಹೆಚ್​ ಪಂದ್ಯ ನಡೆಯಲಿದೆ. 

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಸನ್​ರೈಸರ್ಸ್ ಹೈದರಾಬಾದ್ ತಂಡದ ಟಿ. ನಟರಾಜನ್ ಅವರಿಗೆ ಕೊವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂದೇ ಸನ್​ರೈಸರ್ಸ್​ (ಎಸ್​ಆರ್​ಹೆಚ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (ಡಿಹೆಚ್​) ತಂಡದ ಮಧ್ಯೆ ಐಪಿಎಲ್ ಪಂದ್ಯ ನಡೆಯಲಿದೆ. ಇಂದಿನ ಪಂದ್ಯದಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ ಎಂದು ತಿಳಿಸಿದೆ.

ಭಾರತದಲ್ಲಿ ಕೊವಿಡ್​ ಸೋಂಕು ಹೆಚ್ಚಾಗಿದ್ದರಿಂದ ಐಪಿಎಲ್ ಪಂದ್ಯ ಅರ್ಧಕ್ಕೇ ಸ್ಥಗಿತಗೊಂಡಿತ್ತು. ಅದಾದ ನಾಲ್ಕು ತಿಂಗಳ ನಂತರ ಮತ್ತೆ ಐಪಿಎಲ್ ಟೂರ್ನಿ ಯುಎಇಯಲ್ಲಿ ಮತ್ತೆ ಪುನರಾರಂಭಗೊಂಡಿತ್ತು. ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವೆ ದುಬೈನಲ್ಲಿ ಐಪಿಎಲ್ ಪಂದ್ಯ ನಡೆಯಲಿದೆ. ಟಿ. ನಟರಾಜನ್ ಸಂಪರ್ಕದಲ್ಲಿದ್ದ ಇತರೆ ಆಟಗಾರರು ಕೂಡ ಕ್ವಾರಂಟೈನ್ ಆಗಬೇಕಾದ ಅನಿವಾರ್ಯತೆ ಎದುರಾಗುವ ಸಾಧ್ಯತೆಯಿದೆ.

ಸನ್​ರೈಸರ್ಸ್​ ಹೈದರಾಬಾದ್​ ತಂಡದ ಆಟಗಾರರ ಪಟ್ಟಿ:

ಕೇನ್ ವಿಲಿಯಮ್ಸನ್ (ನಾಯಕ), ಡೇವಿಡ್ ವಾರ್ನರ್, ಮನೀಶ್ ಪಾಂಡೆ, ವಿರಾಟ್ ಸಿಂಗ್, ಪ್ರಿಯಂ ಗರ್ಗ್, ಅಬ್ದುಲ್ ಸಮದ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ಸಂದೀಪ್ ಶರ್ಮಾ, ಸಿದ್ಧಾರ್ಥ್ ಕೌಲ್, ಟಿ ನಟರಾಜನ್, ಅಭಿಷೇಕ್ ಶರ್ಮಾ, ಶಹಬಾಝ್ ನದೀಮ್, ವಿಜಯ್ ಶಂಕರ್, ಮೊಹಮ್ಮದ್ ನಬಿ, ರಶೀದ್ ಖಾನ್, ಶೆರ್ಫೇನ್ ರುದಫೋರ್ಡ್, ವೃದ್ಧಿಮಾನ್ ಸಹಾ (ವಿಕೆಟ್‌ಕೀಪರ್‌), ಶ್ರೀವತ್ಸ ಗೋಸ್ವಾಮಿ, ಬಸಿಲ್ ಥಂಪಿ, ಜೇಸನ್ ಹೋಲ್ಡರ್, ಜಗದೀಶ ಸುಚಿತ್, ಕೇದಾರ್ ಜಾಧವ್, ಮುಜೀಬ್ ಉರ್ ರೆಹಮಾನ್, ಜೇಸನ್ ರಾಯ್‌.

(IPL 2021 SRH player T Natarajan tests Covid positive DC VS SRH Match will Continue)

Published On - 3:41 pm, Wed, 22 September 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ