AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿರುವ ಪಾಂಡ್ಯ ಪಡೆ..!

IPL 2022: ಲೀಗ್​ ಹಂತದಲ್ಲಿ 10 ಗೆಲುವು ದಾಖಲಿಸುವ ಮೂಲಕ ಗುಜರಾತ್ ಟೈಟನ್ಸ್ ತಂಡವು ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್ ಆಡುವ ಮೊದಲ ತಂಡವಾಗಿ ಹೊರಹೊಮ್ಮಿದೆ.

IPL 2022: ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿರುವ ಪಾಂಡ್ಯ ಪಡೆ..!
Gujarat Titans
TV9 Web
| Edited By: |

Updated on: May 15, 2022 | 7:30 PM

Share

IPL 2022: ಐಪಿಎಲ್​ನ 62ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ದ ಗುಜರಾತ್ ಟೈಟನ್ಸ್ (CSK vs GT) ಭರ್ಜರಿ ಜಯ ಸಾಧಿಸಿದೆ. ಗೆಲುವಿನೊಂದಿಗೆ ಗುಜರಾತ್ ಟೈಟನ್ಸ್ ಈ ಬಾರಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದು ಖಚಿತವಾಗಿದೆ. ಏಕೆಂದರೆ ಆಡಿರುವ 13 ಪಂದ್ಯಗಳಲ್ಲಿ ಗುಜರಾತ್ ತಂಡವು 10 ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 20 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 2 ಪಂದ್ಯಗಳಿದ್ದು, ಈ ಎರಡು ಮ್ಯಾಚ್​​ನಲ್ಲೂ ಗೆದ್ದು 20 ಪಾಯಿಂಟ್ಸ್ ಪಡೆದರೆ ಪಾಯಿಂಟ್ಸ್ ಟೇಬಲ್​ನಲ್ಲಿ ಮೊದಲ ಸ್ಥಾನ ಪಡೆಯಬಹುದು. ಒಂದು ವೇಳೆ ಲಕ್ನೋ ಅಗ್ರಸ್ಥಾನ ಅಲಂಕರಿಸಿದರೂ 2ನೇ ಸ್ಥಾನ ಗುಜರಾತ್ ಟೈಟನ್ಸ್ ಪಾಲಾಗಲಿದೆ.

ಇನ್ನು ಗುಜರಾತ್ ಟೈಟನ್ಸ್ ತಂಡವು ತನ್ನ ಕೊನೆಯ ಲೀಗ್ ಪಂದ್ಯವನ್ನು ಆರ್​ಸಿಬಿ ವಿರುದ್ದ ಆಡಬೇಕಿದೆ. ಈ ಪಂದ್ಯದಲ್ಲಿ ಗೆದ್ದರೂ, ಸೋತರೂ ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆ ಆಗುವುದಿಲ್ಲ. ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲ ಸ್ಥಾನ ಅಥವಾ 2ನೇ ಸ್ಥಾನದಲ್ಲೇ ಕಾಣಿಸಿಕೊಳ್ಳಲಿರುವ ಗುಜರಾತ್ ಟೈಟನ್ಸ್ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದು ಖಚಿತವಾಗಿದೆ.

ಇಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಲಾಭವೆಂದರೆ, ಈ ಪಂದ್ಯದಲ್ಲಿ ಗೆದ್ದರೆ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಒಂದು ವೇಳೆ ಸೋತರೆ 2ನೇ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶ ದೊರೆಯಲಿದೆ. ಅದರಂತೆ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡದೊಡನೆ 2ನೇ ಕ್ವಾಲಿಫೈಯರ್ ಪಂದ್ಯವಾಡುವ ಮೂಲಕ ಮತ್ತೊಮ್ಮೆ ಫೈನಲ್​ಗೆ ಪ್ರವೇಶಿಸುವ ಅವಕಾಶ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ತಂಡಗಳಿಗೆ ಇರಲಿದೆ.

ಇದನ್ನೂ ಓದಿ
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!

ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ ದ್ವಿತೀಯ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ ಪಂದ್ಯ ಗೆದ್ದರೆ ಪ್ಲೇಆಫ್​ಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ 2ನೇ ತಂಡವಾಗಿ ಲಕ್ನೂ ಸೂಪರ್ ಜೈಂಟ್ಸ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಏಕೆಂದರೆ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮುಂದಿನ 2 ಪಂದ್ಯಗಳನ್ನು ಅತ್ಯುತ್ತಮ ನೆಟ್​ ರನ್​ ರೇಟ್​ನೊಂದಿಗೆ ಗೆದ್ದರೆ ಮಾತ್ರ 2ನೇ ಸ್ಥಾನಕ್ಕೇರಬಹುದು.

ಇದರ ಹೊರತಾಗಿ 14 ಪಾಯಿಂಟ್ಸ್ ಕಲೆಹಾಕಿ 4ನೇ ಸ್ಥಾನದಲ್ಲಿರುವ ಆರ್​ಸಿಬಿ ತಂಡಕ್ಕೆ 2ನೇ ಸ್ಥಾನಕ್ಕೇರುವ ಅವಕಾಶವಿಲ್ಲ. ಏಕೆಂದರೆ ಆರ್​ಸಿಬಿ ತಂಡಕ್ಕೆ ಇನ್ನುಳಿದಿರುವುದು ಕೇವಲ 1 ಪಂದ್ಯ ಮಾತ್ರ. ಈ ಪಂದ್ಯದಲ್ಲಿ ಗೆದ್ದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಲಿದೆ. ಆದರೆ ಇಲ್ಲಿ ಆರ್​ಸಿಬಿ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪೈಪೋಟಿ ನೀಡಲಿದೆ. ಏಕೆಂದರೆ ಈ ಎರಡೂ ತಂಡಗಳಿಗೂ 16 ಪಾಯಿಂಟ್ಸ್ ಗಳಿಸುವ ಅವಕಾಶವಿದ್ದು, ಹೀಗಾಗಿ ಉತ್ತಮ ನೆಟ್​ ರನ್ ರೇಟ್​ನೊಂದಿಗೆ ತಂಡಗಳು ಮುಂದಿನ 2 ಪಂದ್ಯಗಳನ್ನು ಗೆದ್ದರೆ ಪಾಯಿಂಟ್ಸ್ ಟೇಬಲ್​​ನಲ್ಲಿ ನಾಲ್ಕನೇ ಸ್ಥಾನಕ್ಕೇರಬಹುದು. ಇದರಿಂದ ಆರ್​ಸಿಬಿ ತಂಡವು ಪ್ಲೇಆಫ್​ ನಿಂದ ಹೊರಬೀಳಬಹುದು.

ಏಕೆಂದರೆ ಆರ್​ಸಿಬಿ ತಂಡದ ನೆಟ್ ರನ್​ ರೇಟ್​ ಮೈನಸ್​ನಲ್ಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್​ ನೆಟ್​ ರನ್​ ರೇಟ್ ಪ್ಲಸ್​ನಲ್ಲಿದೆ. ಹೀಗಾಗಿ ಆರ್​ಸಿಬಿ ತಂಡವು ಗುಜರಾತ್ ಟೈಟನ್ಸ್ ವಿರುದ್ದದ ಪಂದ್ಯದಲ್ಲಿ ಅತ್ಯುತ್ತಮ ನೆಟ್ ರನ್ ರೇಟ್​ನೊಂದಿಗೆ ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನವನ್ನು ಕಾಯ್ದುಕೊಳ್ಳಬೇಕಿದೆ. ಈ ಮೂಲಕ ಆರ್​ಸಿಬಿ ತಂಡ ಪ್ಲೇಆಫ್​ಗೆ ಅರ್ಹತೆ ಪಡೆಯಬಹುದು.

ಒಟ್ಟಿನಲ್ಲಿ ಲೀಗ್​ ಹಂತದಲ್ಲಿ 10 ಗೆಲುವು ದಾಖಲಿಸುವ ಮೂಲಕ ಗುಜರಾತ್ ಟೈಟನ್ಸ್ ತಂಡವು ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್ ಆಡುವ ಮೊದಲ ತಂಡವಾಗಿ ಹೊರಹೊಮ್ಮಿದೆ. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ಪಡೆ ತನ್ನ ಬಲಿಷ್ಠತೆಯನ್ನು ತೆರೆದಿಟ್ಟಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ