IPL 2023: KKR ವಿರುದ್ಧದ ಪಂದ್ಯಕ್ಕೂ RCB ತಂಡದ ಮೂವರು ಅಲಭ್ಯ..!
IPL 2023 Kannada: RCB ತಂಡದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ , ಗ್ಲೆನ್ ಮ್ಯಾಕ್ಸ್‌ವೆಲ್ , ಮೈಕಲ್ ಬ್ರೇಸ್‌ವೆಲ್ , ಶಹಬಾಜ್ ಅಹ್ಮದ್ , ದಿನೇಶ್ ಕಾರ್ತಿಕ್,
Updated on:Apr 07, 2023 | 3:49 PM

RCB vs KKR: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಐಪಿಎಲ್ನ 9ನೇ ಪಂದ್ಯದಲ್ಲಿ ಆರ್ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ಪರ ಮೂವರು ಆಟಗಾರರು ಅಲಭ್ಯರಾಗಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಭಾಗವಾಗಿದ್ದ ವೇಗಿ ರೀಸ್ ಟೋಪ್ಲಿ 2ನೇ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಬೆಂಗಳೂರಿನಲ್ಲಿ ನಡೆದ ಮೊದಲ ಪಂದ್ಯದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಟೋಪ್ಲಿ ವಿಶ್ರಾಂತಿಯ ಕಾರಣ ಕೆಕೆಆರ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.

ಇನ್ನು ಆರ್ಸಿಬಿ ತಂಡದಲ್ಲಿರುವ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ. ಹಸರಂಗ ಸದ್ಯ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುತ್ತಿದ್ದು, ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.

ಹಾಗೆಯೇ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಜೋಶ್ ಹ್ಯಾಝಲ್ವುಡ್ ಸದ್ಯ ಆಸ್ಟ್ರೇಲಿಯಾದಲ್ಲಿದ್ದಾರೆ. ಅವರು ಆರ್ಸಿಬಿ ತಂಡವನ್ನು ಏಪ್ರಿಲ್ 14 ರ ಬಳಿಕ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಅವರು ಕೂಡ ಕೆಕೆಆರ್ ವಿರುದ್ಧ ಪಂದ್ಯದಲ್ಲಿ ಆಡುತ್ತಿಲ್ಲ.

ಇದಲ್ಲದೆ ಆರ್ಸಿಬಿ ತಂಡದಲ್ಲಿದ್ದ ರಜತ್ ಪಾಟಿದಾರ್ ಪಾದದ ನೋವಿನ ಸಮಸ್ಯೆಯ ಕಾರಣ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಈ ಬಾರಿಯ ಟೂರ್ನಿಯಲ್ಲಿ ಆರ್ಸಿಬಿ ಪರ ಪಾಟಿದಾರ್ ಕಣಕ್ಕಿಳಿಯುವುದಿಲ್ಲ. ಅಲ್ಲದೆ ರಜತ್ ಪಾಟಿದಾರ್ ಅವರ ಬದಲಿ ಆಟಗಾರನನ್ನು ಆರ್ಸಿಬಿ ಇನ್ನಷ್ಟೇ ಆಯ್ಕೆ ಮಾಡಬೇಕಿದೆ.

ಒಟ್ಟಿನಲ್ಲಿ ಪ್ರಸ್ತುತ ಆರ್ಸಿಬಿ ತಂಡದಲ್ಲಿರುವ ಮೂವರು ಆಟಗಾರರು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದು, ಇದಾಗ್ಯೂ ಬಲಿಷ್ಠ ಪಡೆಯನ್ನೇ ಹೊಂದಿರುವ ಆರ್ಸಿಬಿ ಈ ಪಂದ್ಯದಲ್ಲೂ ಗೆಲ್ಲುವ ವಿಶ್ವಾಸದಲ್ಲಿದೆ.

RCB ತಂಡದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ , ಗ್ಲೆನ್ ಮ್ಯಾಕ್ಸ್‌ವೆಲ್ , ಮೈಕಲ್ ಬ್ರೇಸ್‌ವೆಲ್ , ಶಹಬಾಜ್ ಅಹ್ಮದ್ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್) , ಕರ್ಣ್ ಶರ್ಮಾ , ಹರ್ಷಲ್ ಪಟೇಲ್ , ಆಕಾಶ್ ದೀಪ್, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್.
Published On - 9:23 pm, Wed, 5 April 23

TV9 Kannada
Read More




