CSK vs PBKS: 6,6,6,6.. ಸಿಎಸ್‌ಕೆ ಬೌಲರ್ಗಳ ಬೆವರಿಳಿಸಿದ ಪ್ರಿಯಾಂಶ್
Priyansh Arya's Explosive Start: ಐಪಿಎಲ್ 2026 ರ 7ನೇ ಪಂದ್ಯದಲ್ಲಿ ಚೆನ್ನೈನ ಚೆಪಾಕ್ ಮೈದಾನದಲ್ಲಿ ಸಿಎಸ್‌ಕೆ ಪಂಜಾಬ್‌ಗೆ 210 ರನ್‌ಗಳ ಗುರಿ ನೀಡಿತು. ಪ್ರಿಯಾಂಶ ಆರ್ಯ ಕೇವಲ 11 ಎಸೆತಗಳಲ್ಲಿ 39 ರನ್ (4 ಸಿಕ್ಸರ್, 3 ಬೌಂಡರಿ) ಗಳಿಸಿ ಸ್ಫೋಟಕ ಆರಂಭ ಒದಗಿಸಿದರು. ಅವರ ಬಿರುಸಿನ ಬ್ಯಾಟಿಂಗ್ ಪಂಜಾಬ್ ಚೇಸ್‌ಗೆ ಉತ್ತಮ ವೇದಿಕೆ ಹಾಕಿಕೊಟ್ಟಿತು, ಮ್ಯಾಟ್ ಹೆನ್ರಿ ಬೌಲಿಂಗ್‌ನಲ್ಲಿ ಔಟಾದರೂ ಅವರ ಆಟ ಗಮನ ಸೆಳೆಯಿತು.
ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ7ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ, ಪಂಜಾಬ್ ತಂಡಕ್ಕೆ 210 ರನ್‌ಗಳ ಗುರಿ ನೀಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 20 ಓವರ್‌ಗಳಲ್ಲಿ ಐದು ವಿಕೆಟ್‌ಗಳಿಗೆ 209 ರನ್ ಗಳಿಸಿತು. ತಂಡದ ಪರ ಆಯುಷ್ ಮ್ಹಾತ್ರೆ 73 ರನ್‌ಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಈ ಗುರಿ ಬೆನ್ನಟ್ಟಿದ ಪಂಜಾಬ್‌ಗೆ ಆರಂಭಿಕ ಪ್ರಿಯಾಂಶ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು.
ಪ್ರಿಯಾಂಶ್ ಆರ್ಯ, ಖಲೀಲ್ ಅಹ್ಮದ್ ಎಸೆದ ಇನ್ನಿಂಗ್ಸ್ನ ಮೊದಲ ಓವರ್‌ನ ಮೊದಲ ಎಸೆತದಲ್ಲಿ ಬೌಂಡರಿಸಿದರೆ, ನಂತರದ ಎಸೆತದಲ್ಲಿ ಸಿಕ್ಸರ್ ಬಾರಿಸಿದರು. ಎರಡನೇ ಓವರ್ನಲ್ಲೂ ಅಬ್ಬರಸಿದ ಪ್ರಿಯಾಂಶ್ ಆರ್ಯ, ಮ್ಯಾಟ್ ಹೆನ್ರಿ ಬೌಲಿಂಗ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದರು. 3ನೇ ಓವರ್ನಲ್ಲೂ ಸಿಕ್ಸರ್ ಬಾರಿಸಿದ ಪ್ರಿಯಾಂಶ್ ಕೇವಲ 9 ಎಸೆತಗಳಲ್ಲಿ 33 ರನ್ ಕಲೆಹಾಕಿದರು.
ಪ್ರಿಯಾಂಶ್ ಅವರ ಸ್ಫೋಟಕ ಬ್ಯಾಟಿಂಗ್ನಿಂದಾಗಿ ಪಂಜಾಬ್ ಕೇವಲ 20 ಎಸೆತಗಳಲ್ಲಿ ಅರ್ಧಶತಕದ ಗಡಿ ದಾಟಿತು. ತನ್ನ ಸ್ಫೋಟಕ ಬ್ಯಾಟಿಂಗ್ ಮುಂದುವರೆಸಿದ ಪ್ರಿಯಾಂಶ್ ಐದನೇ ಓವರ್‌ನ ಮೊದಲ ಎಸೆತದಲ್ಲಿ ಮತ್ತೊಂದು ಸಿಕ್ಸರ್ ಬಾರಿಸಿದರು. ಆದರೆ ಮುಂದಿನ ಎಸೆತದಲ್ಲಿ ಮ್ಯಾಟ್ ಹೆನ್ರಿ ಬೌಲಿಂಗ್‌ನಲ್ಲಿ ಬೌಲ್ಡ್ ಆದರು. ಆದಾಗ್ಯೂ, ಪ್ರಿಯಾಂಶ್ ಕೇವಲ 11 ಎಸೆತಗಳಲ್ಲಿ ನಾಲ್ಕು ಸಿಕ್ಸರ್‌ಗಳು ಮತ್ತು ಮೂರು ಬೌಂಡರಿಗಳನ್ನು ಒಳಗೊಂಡಂತೆ 39 ರನ್ ಗಳಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

