LSG vs CSK: ಲಕ್ನೋ ವಿರುದ್ಧ ಸೋತ ಸಿಎಸ್​ಕೆಗೆ ಪ್ಲೇಆಫ್‌ ಹಾದಿ ಮತ್ತಷ್ಟು ಕಠಿಣ

IPL 2026 Match 59: ಐಪಿಎಲ್ 2026 ರ 59ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿತು. ಇದು ಎಲ್‌ಎಸ್‌ಜಿ ತಂಡದ 4ನೇ ಗೆಲುವಾಗಿದೆ. ಈ ಸೋಲಿನಿಂದ ಸಿಎಸ್‌ಕೆ ತಂಡಕ್ಕೆ ಪ್ಲೇಆಫ್ ಹಾದಿ ಅತ್ಯಂತ ಕಠಿಣವಾಗಿದೆ. ಕಾರ್ತಿಕ್ ಶರ್ಮಾ ಅರ್ಧಶತಕದ ನೆರವಿನಿಂದ ಸಿಎಸ್‌ಕೆ 187 ರನ್ ಗಳಿಸಿತ್ತು, ಆದರೆ ಲಕ್ನೋ 16.4 ಓವರ್‌ಗಳಲ್ಲಿ ಗುರಿ ಬೆನ್ನಟ್ಟಿ ಜಯಗಳಿಸಿತು.

LSG vs CSK: ಲಕ್ನೋ ವಿರುದ್ಧ ಸೋತ ಸಿಎಸ್​ಕೆಗೆ ಪ್ಲೇಆಫ್‌ ಹಾದಿ ಮತ್ತಷ್ಟು ಕಠಿಣ
Lsg Vs Csk

Updated on: May 15, 2026 | 11:43 PM

ಐಪಿಎಲ್ 2026 (IPL 2026) ರ 59 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ (LSG vs CSK) ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಈ ಆವೃತ್ತಿಯ 4ನೇ ಗೆಲುವು ದಾಖಲಿಸಿತು. ಇತ್ತ ಲಕ್ನೋ ವಿರುದ್ಧ ಸೋತ ಸಿಎಸ್​ಕೆಗೆ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದ್ದು, ಉಳಿದೆರಡು ಪಂದ್ಯಗಳನ್ನು ಗೆದ್ದರೂ ಅದು ಪ್ಲೇಆಫ್ ತಲುಪುವುದು ಕಷ್ಟಕರವಾಗಿದೆ. ಈ ಪಂದ್ಯದಲ್ಲಿ ಮೊಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ಕಾರ್ತಿಕ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 187 ರನ್ ಗಳಿಸಿ ಲಕ್ನೋಗೆ ಗೆಲ್ಲಲು 188 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಲಕ್ನೋ16.4 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಜಯದ ನಗೆ ಬೀರಿತು.

ಸಿಎಸ್​ಕೆಗೆ ಸಾಧಾರಣ ಆರಂಭ

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್‌ಕೆ ತಂಡಕ್ಕೆ ಸಾಧಾರಣ ಆರಂಭ ಸಿಕ್ಕಿತು. ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ 20 ರನ್ ಗಳಿಸಿ ಔಟಾದರೆ, ನಾಯಕ ರುತುರಾಜ್ ಗಾಯಕ್ವಾಡ್ ಕೂಡ 13 ರನ್​ಗಳಿಗೆ ಸುಸ್ತಾದರು. ಕಳೆದ ಪಂದ್ಯದಲ್ಲಿ 13 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಉರ್ವಿಲ್ ಪಟೇಲ್ ಕೇವಲ 6 ರನ್​ಗಳಿಗೆ ಸುಸ್ತಾದರು.

ಕಾರ್ತಿಕ್ ಅರ್ಧಶತಕ

ತಂಡದ ಪರ ಏಕಾಂಗಿ ಹೋರಾಟ ನೀಡಿದ ಕಾರ್ತಿಕ್ ಶರ್ಮಾ 35 ಎಸೆತಗಳಲ್ಲಿ ಸಿಕ್ಸರ್ ಬಾರಿಸುವ ಮೂಲಕ ಅರ್ಧಶತಕ ಬಾರಿಸಿ, 71 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಡೆವಾಲ್ಡ್ ಬ್ರೆವಿಸ್ 25 ರನ್ ಗಳಿಸಿ ಔಟಾದರೆ, ಶಿವಂ ದುಬೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ 32 ರನ್ ಮತ್ತು ಪ್ರಶಾಂತವೀರ್ 13 ರನ್ ಬಾರಿಸಿ ಅಜೇಯರಾಗಿ ಉಳಿದರು. ಲಕ್ನೋ ಪರ ಆಕಾಶ್ ಸಿಂಗ್ ಗರಿಷ್ಠ 3 ವಿಕೆಟ್ ಪಡೆದರೆ, ಶಮಿ ಮತ್ತು ಶಹಬಾಜ್ ಅಹ್ಮದ್ ತಲಾ ಒಂದು ಯಶಸ್ಸು ಕಂಡರು.

LSG vs CSK IPL 2026 Highlights: ಸಿಎಸ್​ಕೆ ವಿರುದ್ಧ 7 ವಿಕೆಟ್​ಗಳಿಂದ ಗೆದ್ದ ಲಕ್ನೋ

ಮಾರ್ಷ್​ ಸ್ಫೋಟಕ ಬ್ಯಾಟಿಂಗ್

188 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಲಕ್ನೋಗೆ ಆರಂಭಿಕ ಜೋಡಿ ಮಿಚೆಲ್ ಮಾರ್ಷ್ ಮತ್ತು ಜೋಶ್ ಇಂಗ್ಲಿಸ್ ಆಕ್ರಮಣಕಾರಿ ಆರಂಭವನ್ನು ನೀಡಿದರು. ತಂಡವು ಆರಂಭಿಕ ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ ವೇಗವಾಗಿ ಸ್ಕೋರ್ ಗಳಿಸಿತು. ಇಬ್ಬರು ಆಟಗಾರರು ಮೊದಲ ವಿಕೆಟ್‌ಗೆ 135 ರನ್‌ಗಳನ್ನು ಸೇರಿಸುವ ಮೂಲಕ ಪಂದ್ಯವನ್ನು ಏಕಪಕ್ಷೀಯವಾಗಿ ಪರಿವರ್ತಿಸಿದರು.

ಮಿಚೆಲ್ ಮಾರ್ಷ್ 38 ಎಸೆತಗಳಲ್ಲಿ 9 ಬೌಂಡರಿ ಮತ್ತು 7 ಸಿಕ್ಸರ್‌ಗಳು ಸೇರಿದಂತೆ 236.84 ಸ್ಟ್ರೈಕ್ ರೇಟ್‌ನಲ್ಲಿ 90 ರನ್ ಗಳಿಸಿದರೆ, ಇಂಗ್ಲಿಸ್ 36 ರನ್‌ಗಳ ಕೊಡುಗೆ ನೀಡಿದರು. ನಂತರ ನಿಕೋಲಸ್ ಪೂರನ್ 17 ಎಸೆತಗಳಲ್ಲಿ ಅಜೇಯ 32 ರನ್ ಗಳಿಸಿ, ಲಕ್ನೋ 16.4 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ ಗುರಿಯನ್ನು ತಲುಪಲು ಸಹಾಯ ಮಾಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:37 pm, Fri, 15 May 26

Follow Us