IPL 2026: ಐಪಿಎಲ್‌ನಲ್ಲಿ ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಸಾಯಿ ಸುದರ್ಶನ್
Sai Sudharsan Equals Kohli's IPL Record: ಸಾಯಿ ಸುದರ್ಶನ್ ಐಪಿಎಲ್ 2026 ರಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ, 8 ಅರ್ಧಶತಕಗಳನ್ನು ಬಾರಿಸಿ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಎಂಟನೇ ಅರ್ಧಶತಕ ಬಾರಿಸಿದ ಸುದರ್ಶನ್ ಒಂದು ಆವೃತ್ತಿಯಲ್ಲಿ ಅಧಿಕ ಅರ್ಧಶತಕ ಬಾರಿಸಿದವರ ಪಟ್ಟಿಯಲ್ಲಿ ಕೊಹ್ಲಿಯನ್ನು ಸರಿಗಟ್ಟಿದರು. ಈ ಸೀಸನ್‌ನಲ್ಲಿ 9 ಬಾರಿ 50 ಅಥವಾ ಅದಕ್ಕಿಂತ ಹೆಚ್ಚು ರನ್ಗಳ ಇನ್ನಿಂಗ್ಸ್ ಆಡಿರುವ ಸುದರ್ಶನ್, ಕೊಹ್ಲಿ ಮತ್ತು ವಾರ್ನರ್ ನಂತರ ಈ ಸಾಧನೆ ಮಾಡಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.
Updated on:May 30, 2026 | 5:53 PM

2026 ರ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡ ಫೈನಲ್ಗೇರಿದೆ ಎಂದರೆ ಅದಕ್ಕೆ ಪ್ರಮುಖ ಕಾರಣ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್. ತಂಡದ ಪರ ಪ್ರತಿ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಿರುವ ಸುದರ್ಶನ್ ಅರ್ಧಶತಕಗಳ ಮೇಲೆ ಅರ್ಧಶತಕಗಳನ್ನು ದಾಖಲಿಸಿದ್ದಾರೆ. ಇದರೊಂದಿಗೆ ಅವರು ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸಹ ಸರಿಗಟ್ಟಿದ್ದಾರೆ (PC- PTI).

ವಾಸ್ತವವಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅರ್ಧಶತಕ ಬಾರಿಸಿದ ಸಾಯಿ ಸುದರ್ಶನ್ಗೆ ಈ ಐಪಿಎಲ್‌ನಲ್ಲಿ ಇದು ಎಂಟನೇ ಅರ್ಧಶತಕವಾಗಿತ್ತು. ಈ ಮೂಲಕ ಸುದರ್ಶನ್ ಒಂದು ಆವೃತ್ತಿಯಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಸರಿಗಟ್ಟಿದ್ದಾರೆ. ವಿರಾಟ್ ಕೊಹ್ಲಿ ಕೂಡ ಐಪಿಎಲ್ 2025 ರಲ್ಲಿ ರಾಯಲ್ ಎಂಟು ಅರ್ಧಶತಕಗಳನ್ನು ಬಾರಿಸಿದ್ದರು (PC- PTI).

ಸುದರ್ಶನ್ ಈ ಸೀಸನ್‌ನಲ್ಲಿ ಇದುವರೆಗೆ 16 ಪಂದ್ಯಗಳಲ್ಲಿ ಎಂಟು ಅರ್ಧಶತಕಗಳು ಮತ್ತು ಒಂದು ಶತಕವನ್ನು ಬಾರಿಸಿದ್ದಾರೆ. 19 ವರ್ಷಗಳ ಐಪಿಎಲ್ ಇತಿಹಾಸದಲ್ಲಿ, ಕೊಹ್ಲಿ ಮತ್ತು ಸುದರ್ಶನ್ ಹೊರತುಪಡಿಸಿ, ಬೇರೆ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಒಂದೇ ಸೀಸನ್‌ನಲ್ಲಿ ಎಂಟು ಅರ್ಧಶತಕಗಳನ್ನು ಬಾರಿಸಿದ ಸಾಧನೆಯನ್ನು ಮಾಡಿಲ್ಲ(PC- PTI).

ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಐಪಿಎಲ್ ಸೀಸನ್ ಒಂದರಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ದಾಖಲೆ ಹೊಂದಿದ್ದಾರೆ. ವಾರ್ನರ್ 2016 ರ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡುವಾಗ ಒಂಬತ್ತು ಅರ್ಧಶತಕಗಳನ್ನು ಬಾರಿಸಿದ್ದರು. ಹಾಗೆಯೇ ವಾರ್ನರ್ 2019 ರ ಐಪಿಎಲ್‌ನಲ್ಲಿ ಎಂಟು ಅರ್ಧಶತಕಗಳು ಮತ್ತು ಒಂದು ಶತಕವನ್ನು ಬಾರಿಸಿದ್ದರು. ವಾರ್ನರ್, ವಿರಾಟ್ ಕೊಹ್ಲಿ ಮತ್ತು ಸಾಯಿ ಸುದರ್ಶನ್ ಹೊರತುಪಡಿಸಿ, ಕೇನ್ ವಿಲಿಯಮ್ಸನ್ (2018) ಮತ್ತು ಫಾಫ್ ಡು ಪ್ಲೆಸಿಸ್ (2023) ಮಾತ್ರ ಒಂದೇ ಐಪಿಎಲ್ ಸೀಸನ್‌ನಲ್ಲಿ ಎಂಟು ಅರ್ಧಶತಕಗಳನ್ನು ಸಿಡಿಸಿದ್ದಾರೆ (PC- PTI).

ಇದನ್ನು ಹೊರತುಪಡಿಸಿ ಒಂದು ಆವೃತ್ತಿಯಲ್ಲಿ 50 ಅಥವಾ ಅದಕ್ಕಿಂತ ಹೆಚ್ಚು ರನ್ಗಳ ಇನ್ನಿಂಗ್ಸ್ ಅನ್ನು ಅಧಿಕ ಬಾರಿ ಆಡಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. 2016 ರ ಐಪಿಎಲ್‌ನಲ್ಲಿ ಕೊಹ್ಲಿ 11 ಬಾರಿ 50+ ರನ್ಗಳ ಇನ್ನಿಂಗ್ಸ್ ಆಡಿದ್ದರು. ಆ ಸೀಸನ್‌ನಲ್ಲಿ ಆಡಿದ 16 ಪಂದ್ಯಗಳಲ್ಲಿ ಕೊಹ್ಲಿ 4 ಶತಕಗಳು ಮತ್ತು 7 ಅರ್ಧಶತಕಗಳನ್ನು ಬಾರಿಸಿದ್ದರು (PC- PTI).

ಇದೀಗ ಸಾಯಿ ಐಪಿಎಲ್ 2026 ರಲ್ಲಿ 9 ಬಾರಿ 50 ಅಥವಾ ಅದಕ್ಕಿಂತ ಹೆಚ್ಚು ರನ್ಗಳ ಇನ್ನಿಂಗ್ಸ್ ಆಡಿದ್ದಾರೆ. ವಿರಾಟ್ ಕೊಹ್ಲಿ (2016) ಮತ್ತು ಡೇವಿಡ್ ವಾರ್ನರ್ (2016 ಮತ್ತು 2019) ನಂತರ ಐಪಿಎಲ್ನ ಒಂದು ಅವೃತ್ತಿಯಲ್ಲಿ 9 ಬಾರಿ 50+ ರನ್ಗಳ ಇನ್ನಿಂಗ್ಸ್ ಆಡಿದ ಮೂರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ (PC- PTI).
Published On - 5:51 pm, Sat, 30 May 26

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More




