AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs DC: ಐಪಿಎಲ್​ನಲ್ಲಿ ನಾಲ್ಕನೇ ಶತಕ ಬಾರಿಸಿದ ಸಂಜು ಸ್ಯಾಮ್ಸನ್

Sanju Samson IPL century: ಸಂಜು ಸ್ಯಾಮ್ಸನ್ ಚೆಪಾಕ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಐಪಿಎಲ್ 18ನೇ ಪಂದ್ಯದಲ್ಲಿ ಅಬ್ಬರದ ಶತಕ ಬಾರಿಸುವ ಮೂಲಕ ಲಯಕ್ಕೆ ಮರಳಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಪರ ಇದು ಅವರ ಚೊಚ್ಚಲ ಶತಕವಾಗಿದ್ದು, ಐಪಿಎಲ್ ವೃತ್ತಿಜೀವನದ ನಾಲ್ಕನೇ ಶತಕವಾಗಿದೆ. ಆರಂಭಿಕ ಮೂರು ಪಂದ್ಯಗಳಲ್ಲಿ ವಿಫಲರಾಗಿದ್ದ ಸಂಜು, ಈ ಸ್ಫೋಟಕ ಇನ್ನಿಂಗ್ಸ್ ಮೂಲಕ ಸಿಎಸ್​ಕೆ ತಂಡಕ್ಕೆ ಭರವಸೆ ಮೂಡಿಸಿದ್ದಾರೆ.

CSK vs DC: ಐಪಿಎಲ್​ನಲ್ಲಿ ನಾಲ್ಕನೇ ಶತಕ ಬಾರಿಸಿದ ಸಂಜು ಸ್ಯಾಮ್ಸನ್
Sanju Samson
ಪೃಥ್ವಿಶಂಕರ
|

Updated on:Apr 11, 2026 | 9:44 PM

Share

ಚೆಪಾಕ್​ನ ಎಂಎ ಚಿದಂಬರಂ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ (IPL 2026) 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೊಸ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ (Sanju Samson) ಕೊನೆಗೂ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಐಪಿಎಲ್‌ನಲ್ಲಿ ಮೊದಲ ಬಾರಿಗೆ ಸಿಎಸ್​ಕೆ ತಂಡದ ಪರ ಆಡುತ್ತಿರುವ ಸಂಜುಗೆ ಮೊದಲ ಮೂರು ಪಂದ್ಯಗಳು ಉತ್ತಮವಾಗಿ ನಡೆದಿರಲಿಲ್ಲ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಇನ್ನಿಂಗ್ಸ್ ಕಟ್ಟಿದ ಸಂಜು ಮೊದಲಿಗೆ ಸಿಎಸ್​ಕೆ ಪರ ಮೊದಲ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಆ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು. ಇದು ಸಂಜು ಅವರ ಐಪಿಎಲ್ ವೃತ್ತಿಜೀವನದಲ್ಲಿ ನಾಲ್ಕನೇ ಶತಕವಾಗಿದ್ದರೆ, ಸಿಎಸ್​ಕೆ ಪರ ಮೊದಲ ಶತಕವಾಗಿದೆ.

ಈ ಆವೃತ್ತಿಯ ಮೊದಲ ಶತಕ

ಸಂಜು ಸ್ಯಾಮ್ಸನ್ ಕೇವಲ 52 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಈ ಆವೃತ್ತಿಯಲ್ಲಿ ಶತಕ ಗಳಿಸಿದ ಮೊದಲ ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದಾರೆ. ಸಂಜು ಅವರ ಈ ಶತಕದ ಇನ್ನಿಂಗ್ಸ್​ನಲ್ಲಿ 14 ಬೌಂಡರಿ ಮತ್ತು 3 ಸಿಕ್ಸರ್​ಗಳು ಸೇರಿದ್ದವು. ಈ ಶತಕದೊಂದಿಗೆ, ಸಂಜು ಸ್ಯಾಮ್ಸನ್ ಟಿ20 ಕ್ರಿಕೆಟ್‌ನಲ್ಲಿ 400 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಟಿ20 ಸ್ವರೂಪದಲ್ಲಿ 400 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ನಾಲ್ಕನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

5 ವರ್ಷಗಳ ಕಾಯುವಿಕೆ ಅಂತ್ಯ

ಐದು ವರ್ಷಗಳಲ್ಲಿ ಸಂಜು ಸ್ಯಾಮ್ಸನ್ ಅವರ ಮೊದಲ ಐಪಿಎಲ್ ಶತಕ ಇದಾಗಿದೆ. ಅಂದರೆ ಸಂಜು ಸ್ಯಾಮ್ಸನ್ ಈ ಐಪಿಎಲ್​ನಲ್ಲಿ ಕೊನೆಯ ಬಾರಿಗೆ 2021 ರಲ್ಲಿ ಪಂಜಾಬ್ ವಿರುದ್ಧ ಶತಕ ಬಾರಿಸಿದ್ದರು. ಅದಕ್ಕೂ ಮುನ್ನ ಸಂಜು, 2019 ರಲ್ಲಿ ಹೈದರಾಬಾದ್ ವಿರುದ್ಧ ಮತ್ತು 2017 ರಲ್ಲಿ ಪುಣೆ ವಿರುದ್ಧ ಶತಕದ ಇನ್ನಿಂಗ್ಸ್ ಆಡಿದ್ದರು. ಹಾಗೆಯೇ ಸಂಜು ಸ್ಯಾಮ್ಸನ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಪರ ಶತಕ ಬಾರಿಸಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇದಕ್ಕೂ ಮೊದಲು, ಮುರಳಿ ವಿಜಯ್ 2012 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 58 ಎಸೆತಗಳಲ್ಲಿ 113 ರನ್ ಗಳಿಸಿದ್ದರು.

CSK vs DC IPL 2026 Live Score: ಸಂಜು ಶತಕ; ಡೆಲ್ಲಿಗೆ 213 ರನ್ ಗುರಿ

ಶತಕದ ಜೊತೆಯಾಟ

ಸಂಜು ಸ್ಯಾಮ್ಸನ್ ತಮ್ಮ ಶತಕದ ಇನ್ನಿಂಗ್ಸ್ ಜೊತೆಗೆ ಆಯುಷ್ ಮ್ಹಾತ್ರೆ ಜೊತೆ ಎರಡನೇ ವಿಕೆಟ್‌ಗೆ 100 ಕ್ಕೂ ಹೆಚ್ಚು ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.  ಅಂತಿಮವಾಗಿ ಸಂಜು ಈ ಪಂದ್ಯದಲ್ಲಿ ಅಜೇಯ 115 ರನ್ ಗಳಿಸಿದರೆ, ಆಯುಷ್ ಮ್ಹಾತ್ರೆ ಕೂಡ 59 ರನ್​ಗಳ ಕಾಣಿಕೆ ನೀಡಿದರು. ಕೊನೆಯಲ್ಲಿ ಶಿವಂ ದುಬೆ 10 ಎಸೆತಗಳಲ್ಲಿ ಅಜೇಯ 20 ರನ್ ಮತ್ತು ನಾಯಕ ಗಾಯಕ್ವಾಡ್ 15 ರನ್​ಗಳ ಇನ್ನಿಂಗ್ಸ್ ಆಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 pm, Sat, 11 April 26

Follow Us