ಐಪಿಎಲ್ ಆರಂಭಕ್ಕೂ ಮುನ್ನ ಶಾಕ್: ಈ ಬಾರಿ ಆರ್‌ಸಿಬಿ ತಂಡದಲ್ಲಿರಲ್ಲ ಯಶ್ ದಯಾಳ್
ಮಾರ್ಚ್ 28ರಿಂದ ಐಪಿಎಲ್ ಹಬ್ಬ ಶುರುವಾಗಲಿದೆ. ಆದರೆ ಅದಕ್ಕೂ ಮೊದಲು ಆರ್‌ಸಿಬಿ ಅಭಿಮಾನಿಗಳಿಗೆ ಶಾಕ್ ಎದುರಾಗಿದೆ. ಅದೇನೆಂದರೆ ಅತ್ಯಾಚಾರ ಆರೋಪ ಎದುರಿಸುತ್ತಿರುವ ವೇಗಿ ಯಶ್ ದಯಾಳ್ ಐಪಿಎಲ್ 2026ರ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವುದಿಲ್ಲ ಎಂದು ಆರ್‌ಸಿಬಿ ನಿರ್ದೇಶಕ ಮೋ ಬೋಬಾಟ್ ದೃಢಪಡಿಸಿದ್ದಾರೆ.

ಯಶ್ ದಯಾಳ್Image Credit source: newsfirstprime.com
ಯಶ್ ದಯಾಳ್ ಈ ಬಾರಿ ಆರ್‌ಸಿಬಿ ತಂಡದಲ್ಲಿ ಇರುವುದಿಲ್ಲ ಎಂದು ಆರ್‌ಸಿಬಿ ನಿರ್ದೇಶಕ ಮೋ ಬೋಬಾಟ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ಏನು ಸಹಕಾರ ನೀಡಬೇಕು ಅದನ್ನು ಆರ್‌ಸಿಬಿ ಮಾಡುತ್ತಿದೆ. ಜೋಶ್ ಹ್ಯಾಜಲ್‌ವುಡ್ ಮುಂದಿನ ದಿನಗಳಲ್ಲಿ ತಂಡಕ್ಕೆ ಸೇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
Follow Us
