IPL Auction 2021; List of Highest Paid Players: ಐಪಿಎಲ್​ 2021ರಲ್ಲಿ ಭರ್ಜರಿ ಮೊತ್ತಕ್ಕೆ ಮಾರಾಟವಾದ ಆಟಗಾರರು

IPL Auction 2021: ಇದುವರೆಗೆ ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಮೊತ್ತಕ್ಕೆ ಹರಾಜಾದ ವಿದೇಶಿ ಆಟಗಾರ ಎಂಬ ಖ್ಯಾತಿಗೆ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಕ್ರಿಸ್ ಮೋರಿಸ್ ಪಾತ್ರವಾಗಿದ್ದಾರೆ. ಬರೋಬ್ಬರಿ ₹16.25 ಕೋಟಿಗೆ ಹರಾಜಾಗಿರುವ ಮೋರಿಸ್​, ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿದ್ದಾರೆ.

IPL Auction 2021; List of Highest Paid Players: ಐಪಿಎಲ್​ 2021ರಲ್ಲಿ ಭರ್ಜರಿ ಮೊತ್ತಕ್ಕೆ ಮಾರಾಟವಾದ ಆಟಗಾರರು
ಚಿತ್ರ ಕೃಪೆ: Indian Premier League ಟ್ವಿಟರ್​ ಖಾತೆ
Follow us
Skanda
|

Updated on:Feb 18, 2021 | 7:09 PM

ಹಣದ ಹೊಳೆಯನ್ನೇ ಹರಿಸುವ ಆಟ ಎಂದು ಪ್ರಸಿದ್ಧವಾಗಿರುವ ಐಪಿಎಲ್​ನಲ್ಲಿ ಈ ಬಾರಿ ಆಟಗಾರರಿಗಾಗಿ ಭಾರೀ ಪೈಪೋಟಿ ಏರ್ಪಟ್ಟಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಹರಾಜು ಪ್ರಕ್ರಿಯೆಯ ಭಾಗವಾಗಿರುವ 8 ತಂಡಗಳೂ ಅತ್ಯುತ್ತಮ ಆಟಗಾರರಿಗಾಗಿ ಸೆಣೆಸಾಟ ನಡೆಸುತ್ತಿದ್ದು, ಉತ್ತಮರಲ್ಲಿ ಉತ್ತಮರು ನಮ್ಮ ಪಾಲಾಗಬೇಕೆಂಬ ಕಾರಣಕ್ಕೆ ಬಹಳ ಲೆಕ್ಕಾಚಾರದೊಂದಿಗೆ ಆಟಗಾರರ ಮೇಲೆ ಕಣ್ಣಿಟ್ಟಿವೆ.

ಕ್ರಿಸ್ ಮೋರಿಸ್: ಇದುವರೆಗೆ ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಮೊತ್ತಕ್ಕೆ ಹರಾಜಾದ ವಿದೇಶಿ ಆಟಗಾರ ಎಂಬ ಖ್ಯಾತಿಗೆ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಕ್ರಿಸ್ ಮೋರಿಸ್ ಪಾತ್ರವಾಗಿದ್ದಾರೆ. ಬರೋಬ್ಬರಿ ₹16.25 ಕೋಟಿಗೆ ಹರಾಜಾಗಿರುವ ಮೋರಿಸ್​, ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿದ್ದಾರೆ. ಕ್ರಿಸ್​ ಮೋರಿಸ್​ ಅವರ ಮೂಲಬೆಲೆ ₹75 ಲಕ್ಷವಾಗಿದ್ದು ಕಳೆದ ಬಾರಿ ಬೆಂಗಳೂರು ತಂಡ ಅವರನ್ನು ಖರೀದಿಸಿ ನಂತರ ರಿಲೀಸ್ ಮಾಡಿತ್ತು.

ಗ್ಲೆನ್​ ಮ್ಯಾಕ್ಸ್​ವೆಲ್: ಗ್ಲೆನ್​ ಮ್ಯಾಕ್ಸ್​ವೆಲ್​ಗೆ ಈ ಬಾರಿಯ ಐಪಿಎಲ್​ 2021 ಹರಾಜು ಪ್ರಕ್ರಿಯೆಯಲ್ಲಿ ಭಾರೀ ಬೇಡಿಕೆ ವ್ಯಕ್ತವಾಗಿದ್ದು, ₹14.25ಕೋಟಿಗೆ ರಾಯಲ್​ ಚಾಲೆಂಜರ್ಸ್​ ತಂಡದ ಪಾಲಾಗಿದ್ದಾರೆ. ಕಳೆದ ಬಾರಿ ಪಂಜಾಬ್​ ತಂಡದಲ್ಲಿ ನೀರಸ ಪ್ರದರ್ಶನ ತೋರಿದ್ದ ಮ್ಯಾಕ್ಸ್​ವೆಲ್​ ನಂತರ ಆಸ್ಟ್ರೇಲಿಯಾದಲ್ಲಿ ಆಡುವಾಗ ಅಬ್ಬರಿಸಿದ್ದರು. ಅವರ ಈ ಪ್ರದರ್ಶನವೇ ಇಂದಿನ ಬೇಡಿಕೆಗೆ ಕಾರಣ ಎನ್ನಲಾಗುತ್ತಿದೆ. ಜೊತೆಗೆ, ಸ್ವತಃ ಮ್ಯಾಕ್ಸ್​ವೆಲ್​​ ಆರ್​ಸಿಬಿ ತಂಡದ ಪರ ಆಡುವ ಆಸೆ ವ್ಯಕ್ತಪಡಿಸಿದ್ದರಿಂದ ಅವರನ್ನು ಬೆಂಗಳೂರು ತಂಡ ಖರೀದಿಸಬಹುದು ಎಂಬ ಮಾತುಗಳು ಹರಿದಾಡುತ್ತಿದ್ದವು. ಆಸ್ಟ್ರೇಲಿಯಾದ ಗ್ಲೆನ್​ ಮ್ಯಾಕ್ಸ್​ವೆಲ್​ ಮೂಲಬೆಲೆ ₹2ಕೋಟಿಯಾಗಿದ್ದು, ಕಳೆದ ಬಾರಿ ₹10.75 ಕೋಟಿಗೆ ಪಂಜಾಬ್​ ತಂಡದ ಪಾಲಾಗಿದ್ದರು. ಆದರೆ, ಈ ವರ್ಷ ಪಂಜಾಬ್​ ತಂಡವು ಮ್ಯಾಕ್ಸ್​ವೆಲ್​ ಅವರ ಕೈಬಿಟ್ಟಿದ್ದು, ಇಂದಿನ ಹರಾಜು ಪ್ರಕ್ರಿಯೆಯಲ್ಲಿ ಊಹಿಸದ ರೀತಿಯಲ್ಲಿ ಬೇಡಿಕೆ ವ್ಯಕ್ತವಾಗಿ ಕೊನೆಗೆ ಆರ್​ಸಿಬಿ ಪಾಲಾಗಿದ್ದಾರೆ.

ಜೇ ರಿಚರ್ಡ್ಸನ್ : ಆಸ್ಟ್ರೇಲಿಯಾದ ವೇಗದ ಬೌಲರ್ ಜೇ ರಿಚರ್ಡ್ಸನ್​ ಅವರನ್ನು ತೆಕ್ಕೆಗೆ ತೆಗೆದುಕೊಂಡಿರುವ ಪಂಜಾಬ್​ ಕಿಂಗ್ಸ್​ ಬೌಲಿಂಗ್​ ವಲಯದ ಬಲ ಹೆಚ್ಚಿಸಲು ಗಮನ ಹರಿಸಿದಂತೆ ಕಾಣುತ್ತಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎದುರು ಬಿಡ್ಡಿಂಗ್‌ ವಾರ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ತಂಡ ₹14 ಕೋಟಿ ನೀಡಿ ಆಸಿಸ್​ ವೇಗಿ ಜೇ ರಿಚರ್ಡ್ಸನ್​ ಅವರನ್ನು ಖರೀದಿ ಮಾಡಿದೆ.

ಕೆ.ಗೌತಮ್​: ಕನ್ನಡಿಗ ಕೆ ಗೌತಮ್​ ​₹9.25 ಕೋಟಿಗೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಪಾಲಾಗಿದ್ದಾರೆ. ಗೌತಮ್ ಅವರನ್ನು​ ಕೊಳ್ಳಲು ಆರಂಭದಲ್ಲಿ ಕೊಲ್ಕತ್ತಾ ನೈಟ್​ ರೈಡರ್ಸ್​ ಹಾಗೂ ಸನ್​ ರೈಸರ್ಸ್​ ಹೈದರಾಬಾದ್ ತಂಡಗಳು​ ಪೈಪೋಟಿಗಿಳಿದಿದ್ದವು. ನಂತರ ಬಂದ ಚೆನ್ನೈ, ಉಳಿದ ತಂಡಗಳನ್ನೆಲ್ಲಾ ಮೀರಿಸಿ ₹9. 25 ಕೋಟಿಗೆ ಗೌತಮ್​ ಅವರನ್ನು ಕೊಂಡುಕೊಂಡಿತು.

ರಿಲೇ ಮೆರೆಡಿತ್: ಆಸ್ಟ್ರೇಲಿಯಾದ ಆಟಗಾರ ರಿಲೇ ಮೆರೆಡಿತ್​ ಬರೋಬ್ಬರಿ ₹8 ಕೋಟಿಗೆ ಪಂಜಾಬ್ ಕಿಂಗ್ಸ್​​ ತಂಡ ಸೇರಿದ್ದಾರೆ. ಮೆರೆಡಿತ್ ಅವರನ್ನು ಪಡೆಯಲು ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳ​ ನಡುವೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಮೆರೆಡಿತ್ ಅವರನ್ನು​ ಪಡೆಯುವಲ್ಲಿ ಪಂಜಾಬ್ ಕಿಂಗ್ಸ್​ ಯಶಸ್ವಿಯಾಗಿದೆ.

ಕೈಲ್‌ ಜೇಮಿಸ್ಸನ್: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಗ್ಲೆನ್​ ಮ್ಯಾಕ್ಸ್​ವೆಲ್​ಗೆ ₹14.25ಕೋಟಿ ನೀಡಿ ಹುಬ್ಬೇರುವಂತೆ ಮಾಡಿತ್ತು. ಆದರೆ, ಈಗ ಅವರನ್ನೂ ಮೀರಿಸಿ ನ್ಯೂಜಿಲೆಂಡ್‌ನ 7 ಅಡಿ ಎತ್ತರದ ವೇಗದ ಬೌಲರ್‌ ಕೈಲ್‌ ಜೇಮಿಸ್ಸನ್ ಅವರಿಗೆ ₹15 ಕೋಟಿ ನೀಡಿ ಖರೀದಿ ಮಾಡಿದೆ. ಪಂಜಾಬ್ ಕಿಂಗ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ತಂಡದ ನಡುವೆ ಬಿಡ್ಡಿಂಗ್‌ ವಾರ್‌ ನಡೆಸಿದ ಆರ್‌ಸಿಬಿ ಭಾರಿ ಪೈಪೋಟಿ ಕೊಟ್ಟು ‌ಕೈಲ್‌ ಜೇಮಿಸ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

Published On - 3:45 pm, Thu, 18 February 21

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!