AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Auction RCB Players List: ಐಪಿಎಲ್ 2021 ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರು ಯಾರ್ಯಾರು ಗೊತ್ತಾ?

IPL 2021 Auction RCB Players List: ಕಳೆದ ಬಾರಿ ನಿರೀಕ್ಷೆಗೆ ತಕ್ಕ ಆಟವಾಡದೇ ಇದ್ದ ಆಟಗಾರರನ್ನು ಈ ಬಾರಿ ತಂಡದಿಂದ ಹೊರಗೆ ಕಳಿಸಲಾಗಿದೆ. ನಾಳೆ ನಡೆಯುವ ಹರಾಜಿನಲ್ಲಿ ಆಲ್‌ರೌಂಡರ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

IPL 2021 Auction RCB Players List: ಐಪಿಎಲ್ 2021 ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರು ಯಾರ್ಯಾರು ಗೊತ್ತಾ?
2020ರ ಆರ್​ಸಿಬಿ ತಂಡ
ಪೃಥ್ವಿಶಂಕರ
|

Updated on: Feb 17, 2021 | 7:09 PM

Share

ಚೆನ್ನೈ: ಇಂಡಿಯನ್ ಪ್ರೀಮಿಯರ್‌ ಲೀಗ್‌ (Indian Premier League – IPL) ಟೂರ್ನಿಯಲ್ಲಿ ಪ್ರತಿಬಾರಿಯೂ ಆರ್​ಸಿಬಿ (Royal Challengers Bangalore – RCB) ಈವರೆಗೆ ಎಲ್ಲಾ ಆವೃತ್ತಿಗಳಲ್ಲೂ ಕಪ್​ ಗೆಲ್ಲುವ ಆಸೆಯೊಂದಿಗೆ ಕಣಕ್ಕಿಳಿಯುತ್ತದೆ. ಆದರೆ ಅಭಿಮಾನಿಗಳಿಗೆ ಭಾರೀ ನಿರಾಸೆ ಉಂಟುಮಾಡಿ ಸರಣಿಯಿಂದ ಹೊರನಡೆಯುತ್ತದೆ. ಮೂರು ಬಾರಿ ಫೈನಲ್ ತಲುಪಿದರೂ ಕೂಡ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇರುವುದು ತಂಡದ ದುರಾದೃಷ್ಟವೇ ಸರಿ. ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಕಪ್​ ಗೆಲ್ಲುವ ವಿಶ್ವಾಸವಿದೆ.

2020ರ ಐಪಿಎಲ್‌ ಆವೃತ್ತಿಯಲ್ಲಿ ನಾಕ್‌ಔಟ್‌ ಹಂತಕ್ಕೆ ಕಾಲಿಟ್ಟಿದ್ದ ವಿರಾಟ್‌ ಕೊಹ್ಲಿ ಬಳಗ ಬ್ಯಾಟಿಂಗ್‌ ವೈಫಲ್ಯಕ್ಕೆ ಭಾರಿ ಬೆಲೆ ತೆತ್ತು ಸನ್‌ರೈಸರ್ಸ್‌ ಹೈದರಾಬಾದ್‌ ಎದುರು ಮುಗ್ಗರಿಸಿತ್ತು. ಈ ಮೂಲಕ ಟೂರ್ನಿಯಲ್ಲಿ 4ನೇ ಸ್ಥಾನಿಯಾಗಿ ತನ್ನ ಅಭಿಯಾನ ಅಂತ್ಯಗೊಳಿಸಿತು.

ಇದೀಗ ಐಪಿಎಲ್‌ 2021ರ ಟೂರ್ನಿಯಲ್ಲಿ ಆರ್‌ಸಿಬಿ ತನ್ನ ಪ್ರದರ್ಶನ ಮಟ್ಟವನ್ನು ಮತ್ತಷ್ಟು ಸುಧಾರಿಸಿಕೊಳ್ಳುವ ಕಡೆಗೆ ಗಮನ ಹರಿಸಿದೆ. ಕಳೆದ ಬಾರಿ ನಿರೀಕ್ಷೆಗೆ ತಕ್ಕಂತೆ ಆಟವಾಡದ ಆಟಗಾರರಿಗೆ ಈ ಬಾರಿ ತಂಡದಿಂದ ಗೇಟ್​ ಪಾಸ್​ ನೀಡಲಾಗಿದೆ. ನಾಳೆ ನಡೆಯುವ ಹರಾಜಿನಲ್ಲಿ ಬ್ಯಾಟಿಂಗ್‌ ಜೊತೆಗೆ ಮಧ್ಯಮ ಕ್ರಮಾಂಕ ಬಲ ಪಡಿಸಿಕೊಳ್ಳಲು ಆಲ್‌ರೌಂಡರ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು.. ಉಳಿಸಿಕೊಂಡಿರುವ ಆಟಗಾರರು: ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಮಹಮದ್ ಸಿರಾಜ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಜೋಶ್​ ಫಿಲಿಪೆ, ಪವನ್ ದೇಶಪಾಂಡೆ, ಶಹಬಾಜ್ ಅಹ್ಮದ್, ಆಡಮ್ ಜಂಪಾ, ಕೇನ್ ರಿಚರ್ಡ್ಸನ್

ತಂಡದಿಂದ ಕೈಬಿಟ್ಟ ಆಟಗಾರರು: ಕ್ರಿಸ್ ಮೋರಿಸ್, ಶಿವಂ ದುಬೆ, ಆರನ್ ಫಿಂಚ್, ಉಮೇಶ್ ಯಾದವ್, ಡೇಲ್ ಸ್ಟೇನ್, ಮೊಯೀನ್ ಅಲಿ, ಪಾರ್ಥಿವ್ ಪಟೇಲ್, ಪವನ್ ನೇಗಿ, ಇಸುರು ಉದಾನಾ, ಗುರ್ಕೀರತ್ ಮನ್.

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ