IPL 2023: ಮುಂಬೈ ಇಂಡಿಯನ್ಸ್ ಪಾಲಾದ ಆರ್​ಸಿಬಿ ತಂಡದ ವೇಗದ ಬೌಲರ್​!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್​ ಜೇಸನ್ ಬೆಹ್ರೆನ್​ಡಾರ್ಫ್ ಮತ್ತೆ ಮುಂಬೈ ಇಂಡಿಯನ್ಸ್ ತಂಡ ಪಾಲಾಗಿದ್ದಾರೆ.

IPL 2023: ಮುಂಬೈ ಇಂಡಿಯನ್ಸ್ ಪಾಲಾದ ಆರ್​ಸಿಬಿ ತಂಡದ ವೇಗದ ಬೌಲರ್​!
Jason Behrendorff
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 12, 2022 | 11:25 PM

ಮುಂಬೈ(ನ.12): ಇಂಡಿಯನ್​ ಪ್ರಿಮಿಯರ್ ಲೀಗ್ (IPL) ಸೀಸನ್ 16ಕ್ಕೆ ಆಟಗಾರರ ಟ್ರೇಡಿಂಗ್ ಪ್ರಕ್ರಿಯೆ ಶುರುವಾಗಿದ್ದು, ಇದರ ಮೊದಲ ಭಾಗವಾಗಿ ಇದೀಗ ಮುಂಬೈ ಇಂಡಿಯನ್ಸ್, ಟ್ರೇಡಿಂಗ್ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bangalore) ತಂಡದ ವೇಗಿಯನ್ನು ಖರೀದಿಸಿದೆ. ಆರ್​ಸಿಬಿ ತಂಡದ ಆಸ್ಟ್ರೇಲಿಯಾದ ಎಡಗೈ ವೇಗಿ ಜೇಸನ್ ಬೆಹ್ರೆನ್​ಡಾರ್ಫ್ ಮುಂಬೈ ಪಾಲಾಗಿದ್ದಾರೆ.

IPL 2023: ಐಪಿಎಲ್ ಮಿನಿ ಹರಾಜಿನ ದಿನಾಂಕ ಬಹಿರಂಗ; ಭಾರತದಲ್ಲಿಯೇ ಆಟಗಾರರ ಹರಾಜು ಪ್ರಕ್ರಿಯೆ..!

32 ವರ್ಷದ ವೇಗಿ ಜೇಸನ್ ಬೆಹ್ರೆನ್​ಡಾರ್ಫ್ 2018 ಹಾಗೂ 2019ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರು. ಆದ್ರೆ, ಕಳೆದ ಐಪಿಎಲ್​ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಂಡಿದ್ದರು. ಇದೀಗ 2023ರ ಐಪಿಎಲ್ ಟೂರ್ನಿಗೆ ಮತ್ತೆ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ.

2022ರ ಐಪಿಎಲ್ ಹರಾಜಿನಲ್ಲಿ ಆರ್​ಸಿಬಿ ಪ್ರಾಂಚೈಸಿ ವೇಗಿ ಜೇಸನ್‌ ಅವರನ್ನು 75 ಲಕ್ಷ ರೂಪಾಯಿ ಮೂಲ ಬೆಲೆಗೆ ಖರೀದಿ ಮಾಡಿತ್ತು. ಆದ್ರೆ, 2022ರ ಐಪಿಎಲ್ ಟೂರ್ನಿಯಲ್ಲಿ ಜೇಸನ್‌ಗೆ ಹೆಚ್ಚಿನ ಅವಕಾಶ ಸಿಕ್ಕಿರಲಿಲ್ಲ. ಇನ್ನು 2021ರಲ್ಲಿ ಜೇಸನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಿದ್ದರು. ಈಗ ಮುಂದಿನ ಅಂದ್ರೆ 2023ರಲ್ಲಿ ನಡೆಯಲಿರುವ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಲಿದ್ದಾರೆ.

ಇನ್ನು ಆರ್​ಸಿಬಿ ಬೆಹ್ರೆನ್​ಡಾರ್ಫ್ ಟ್ವಿಟ್ಟರ್​ನಲ್ಲಿ ಬೆಸ್ಟ್ ಆಫ್ ಲಕ್ ಹೇಳಿ ಬಿಳ್ಕೊಟ್ಟಿದ್ರೆ, ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಟ್ವಿಟ್ಟರ್​ನಲ್ಲಿ ವೆಲ್​ಕಮ್ ಬ್ಯಾಕ್ ಎಂದು ಸ್ವಾಗತಿಸಿದೆ.

ಡಿ.23ಕ್ಕೆ ಐಪಿಎಲ್‌ ಮಿನಿ ಹರಾಜು

2023ರ ಐಪಿಎಲ್‌ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ಡಿ.23ರಂದು ಕೊಚ್ಚಿಯಲ್ಲಿ ನಡೆಯಲಿದೆ ಎಂದು ಬುಧವಾರ ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸಿದೆ. ಹರಾಜು ಪ್ರಕ್ರಿಯೆಯು ಬೆಂಗಳೂರು ಇಲ್ಲವೇ ಟರ್ಕಿಯ ಇಸ್ತಾಂಬುಲ್‌ನಲ್ಲಿ ನಡೆಯಬಹುದು ಎನ್ನಲಾಗಿತ್ತು. ಆದರೆ ಬಿಸಿಸಿಐ ಕೊಚ್ಚಿಯಲ್ಲಿ ನಡೆಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ತಂಡಗಳು ತಾವು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ನ.15ರೊಳಗೆ ಪ್ರಕಟಿಸಬೇಕಿದೆ. ಕಳೆದ ಹರಾಜಿನ ಬಳಿಕ ಉಳಿದ ಹಣ, ಆಟಗಾರರನ್ನು ಕೈಬಿಟ್ಟ ಬಳಿಕ ಉಳಿಯುವ ಹಣದ ಜೊತೆಗೆ ಹೆಚ್ಚುವರಿ 5 ಕೋಟಿ ರೂ. ಬಳಸಲು ಅವಕಾಶ ನೀಡಲಾಗಿದೆ.

Published On - 11:25 pm, Sat, 12 November 22

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!