AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ವ ವಲಯಕ್ಕೆ ದುಲೀಪ್ ಟ್ರೋಫಿ ಕಿರೀಟ; ಅಜೇಯ ಓಟ ಮುಂದುವರೆಸಿದ ಇಶಾನ್ ಕಿಶನ್

ದುಲೀಪ್ ಟ್ರೋಫಿ 2026 ಫೈನಲ್‌ನಲ್ಲಿ ಪೂರ್ವ ವಲಯ ಮೊದಲ ಇನ್ನಿಂಗ್ಸ್ ಮುನ್ನಡೆಯೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಾಯಕ ಇಶಾನ್ ಕಿಶನ್ ಅವರ ಅಜೇಯ ನಾಯಕತ್ವದ ದಾಖಲೆ ಮುಂದುವರಿದಿದೆ. 2013ರ ನಂತರ ಪೂರ್ವ ವಲಯ ಮತ್ತೆ ಟ್ರೋಫಿ ಗೆದ್ದಿದೆ. ಇಶಾನ್ ಕಿಶನ್ ನಾಯಕತ್ವದಲ್ಲಿ ತಂಡ 16 ಪ್ರಥಮ ದರ್ಜೆ ಪಂದ್ಯಗಳಲ್ಲಿ ಸೋಲದೆ, 8 ಗೆಲುವು ಮತ್ತು 8 ಡ್ರಾಗಳೊಂದಿಗೆ ಅದ್ಭುತ ಓಟ ಮುಂದುವರಿಸಿದೆ.

ಪೃಥ್ವಿಶಂಕರ
|

Updated on:Sep 10, 2026 | 2:59 PM

Share
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ವಲಯ ಹಾಗೂ ಪೂರ್ವ ವಲಯ ತಂಡಗಳ ನಡುವಿನ 2026 ರ ದುಲೀಪ್ ಟ್ರೋಫಿ ಫೈನಲ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಹೀಗಾಗಿ ಮೊದಲ ಇನ್ನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ಪೂರ್ವ ವಲಯ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಗೆಲುವಿನೊಂದಿಗೆ ಪೂರ್ವ ವಲಯ ತಂಡದ ನಾಯಕ ಇಶಾನ್ ಕಿಶನ್ ಅವರ ಅಜೇಯ ಓಟವೂ ಮುಂದುವರೆದಿದೆ(PC-PTI).

1 / 5
ಸೆಪ್ಟೆಂಬರ್ 6 ರಂದು ಆರಂಭವಾದ ಈ ಫೈನಲ್ ಪಂದ್ಯದ ಮೊದಲ ದಿನದಿಂದಲೂ ದಕ್ಷಿಣ ವಲಯ ತಂಡದ ವಿರುದ್ಧ ಪೂರ್ವ ವಲಯ ತಂಡ ಸಂಪೂರ್ಣ ಮೇಲುಗೈ ಸಾಧಿಸಿತು. ಬ್ಯಾಟಿಂಗ್‌ ಹಾಗೂ ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ ಇಶಾನ್ ಕಿಶನ್ ನಾಯಕತ್ವದ ಪೂರ್ವ ವಲಯ ತಂಡ 2013 ರ ನಂತರ ಮತ್ತೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ(PC-PTI).

2 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪೂರ್ವ ವಲಯ ತಂಡ ನಾಯಕ ಇಶಾನ್ ಕಿಶನ್ ಅವರ ಸ್ಮರಣೀಯ ದ್ವಿಶತಕದ ನೆರವಿನಿಂದ 270 ರನ್ ಕಲೆಹಾಕಿತು. ಇತ್ತ ದಕ್ಷಿಣ ವಲಯ ತಂಡ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 336 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಹೀಗಾಗಿ ಪೂರ್ವ ವಲಯ ತಂಡಕ್ಕೆ ಮೊದಲ ಇನ್ನಿಂಗ್ಸ್​ನಲ್ಲಿ 372 ರನ್​ಗಳ ಬೃಹತ್ ಮುನ್ನಡೆ ಪಡೆದುಕೊಂಡಿತು(PC-PTI).

3 / 5
ಈ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಪೂರ್ವ ವಲಯ ತಂಡ 5ನೇ ದಿನದಂದು 7 ವಿಕೆಟ್‌ಗಳನ್ನು ಕಳೆದುಕೊಂಡು 388 ರನ್ ಕಲೆಹಾಕಿತು. ಅಂತಿಮವಾಗಿ ಪಂದ್ಯವನ್ನು  ಡ್ರಾದಲ್ಲಿ ಕೊನೆಗೊಳಿಸಲು ನಿರ್ಧರಿಸಲಾಯಿತು. ಈ ಗೆಲುವಿನೊಂದಿಗೆ ಇಶಾನ್ ಕಿಶನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದ ಸರಣಿಯನ್ನು ಮುಂದವರೆಸಿದ್ದಾರೆ(PC-PTI).

4 / 5
ಇಶಾನ್ ಕಿಶನ್ ಕಳೆದ 8 ವರ್ಷಗಳಿಂದ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ತಂಡದ ನಾಯಕತ್ವದ ಜವಾಬ್ದಾರಿ ಹೊತ್ತಿದ್ದಾರೆ. ಅವರ ನಾಯಕತ್ವದಲ್ಲಿ ತಂಡ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಇಶಾನ್ ಕಿಶನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಇದುವರೆಗೆ 16 ಪಂದ್ಯಗಳಲ್ಲಿ ತಂಡದ ನಾಯಕತ್ವವಹಿಸಿದ್ದಾರೆ. ಇದರಲ್ಲಿ ತಂಡವು 8 ಪಂದ್ಯಗಳನ್ನು ಗೆದ್ದಿದ್ದರೆ, 8 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ(PC-PTI).

5 / 5

Published On - 2:56 pm, Thu, 10 September 26

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!

ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ

KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ

ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ

ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್

‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ

ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್

ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ