ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ವಿಶಿಷ್ಟ ದಾಖಲೆ ಮಾಡಿದ​ ಜೇಮ್ಸ್ ಆಂಡರ್ಸನ್

James Anderson: ತಮ್ಮ 18 ವರ್ಷಗಳ ವೃತ್ತಿಜೀವನದಲ್ಲಿ, ಜೇಮ್ಸ್ ಆಂಡರ್ಸನ್ ಇದುವರೆಗೆ 162 * ಟೆಸ್ಟ್ ಪಂದ್ಯಗಳಲ್ಲಿ 616 ವಿಕೆಟ್​ಗಳನ್ನು ಪಡೆದಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ವಿಶಿಷ್ಟ ದಾಖಲೆ ಮಾಡಿದ​ ಜೇಮ್ಸ್ ಆಂಡರ್ಸನ್
ಜೇಮ್ಸ್ ಆಂಡರ್ಸನ್
Follow us
ಪೃಥ್ವಿಶಂಕರ
| Updated By: preethi shettigar

Updated on: Jun 11, 2021 | 9:28 AM

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೈದಾನಕ್ಕಿಳಿದ ಕೂಡಲೇ ಜೇಮ್ಸ್ ಆಂಡರ್ಸನ್ ದೊಡ್ಡ ದಾಖಲೆ ಮಾಡಿದ್ದಾರೆ. ಆ ಮೂಲಕ ಅವರು ಇಂಗ್ಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ ಆಟಗಾರರಾದರು. ಈ ಸಂದರ್ಭದಲ್ಲಿ, ಅವರು ತಮ್ಮ ಮಾಜಿ ತಂಡದ ಸಹ ಆಟಗಾರ ಮತ್ತು ನಾಯಕ ಅಲಾಸ್ಟೇರ್ ಕುಕ್ ಅವರ ದಾಖಲೆಯನ್ನು ಮುರಿದರು. ಕುಕ್ ಇಂಗ್ಲೆಂಡ್ ಪರ 161 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಆಂಡರ್ಸನ್ ತನ್ನ 162 ನೇ ಟೆಸ್ಟ್ ಪಂದ್ಯವನ್ನು ಆಡಿದರು. ಆಂಡರ್ಸನ್ ಅವರ ಸಾಧನೆಯು ಇಂಗ್ಲೆಂಡ್ ಅನ್ನು ಮೊದಲ ತಂಡವನ್ನಾಗಿ ಮಾಡಿತು, ಇದಕ್ಕಾಗಿ ಆಂಡರ್ಸನ್ ಹೆಚ್ಚು ಟೆಸ್ಟ್ ಆಡಿದ ಆಟಗಾರ ಅನುಭವಿ ವೇಗದ ಬೌಲರ್ ಎನಿಸಿಕೊಂಡರು.

ಅಲಾಸ್ಟೇರ್ ಕುಕ್ ಅವರ ದಾಖಲೆಯನ್ನು ಮುರಿದ ನಂತರ, ಆಂಡರ್ಸನ್, ನಾನು ಕಳೆದ ರಾತ್ರಿ ಕುಕ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅವರು ನನ್ನನ್ನು ಅಭಿನಂದಿಸಿದರು. ನಾವು ಅನೇಕ ವರ್ಷಗಳಿಂದ ತಂಡದ ಆಟಗಾರರಾಗಿದ್ದೇವೆ. ಅಂತಹ ಪರಿಸ್ಥಿತಿಯಲ್ಲಿ, ನಮ್ಮ ನಡುವಿನ ಅನುಭವವನ್ನು ನಾವು ಹಂಚಿಕೊಳ್ಳದಿದ್ದರೆ ಅದು ತಪ್ಪಾಗುತ್ತಿತ್ತು ಎಂದಿದ್ದಾರೆ.

ಹೆಚ್ಚು ಟೆಸ್ಟ್ ಆಡಿದ ಆಟಗಾರರ ಪಟ್ಟಿ ಕುಕ್ ಅವರ ದಾಖಲೆಯನ್ನು ಮುರಿದ ನಂತರ, ಆಂಡರ್ಸನ್ ಇಂಗ್ಲೆಂಡ್ ಪರ ಹೆಚ್ಚು ಟೆಸ್ಟ್ ಆಡಿದ ಆಟಗಾರನಾದರು. ಅದು ಮಾತ್ರವಲ್ಲದೆ, ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ ವಿಶ್ವದ ಕೆಲವೇ ಆಟಗಾರರಲ್ಲಿ ಒಬ್ಬರಾದರು. ಹೆಚ್ಚು (200) ಟೆಸ್ಟ್ ಆಡಿದ ವಿಶ್ವ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಲ್ಲಿದೆ. ಅದೇ ಸಮಯದಲ್ಲಿ, ಆಂಡರ್ಸನ್ 162 ಟೆಸ್ಟ್ ಆಡುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಸ್ಟೀವ್ ವಾ ಮತ್ತು ಪಾಂಟಿಂಗ್ 168 ಟೆಸ್ಟ್​ಗಳೊಂದಿಗೆ ಜಂಟಿ ಎರಡನೇ ಸ್ಥಾನದಲ್ಲಿದ್ದಾರೆ. ಜಾಕ್ವೆಸ್ ಕಾಲಿಸ್ 166 ಟೆಸ್ಟ್​ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ ಮತ್ತು 164 ಟೆಸ್ಟ್​ಗಳೊಂದಿಗೆ ರಾಹುಲ್ ದ್ರಾವಿಡ್ ಮತ್ತು ಚಂದರ್ಪಾಲ್ ಜಂಟಿ ಮೂರನೇ ಸ್ಥಾನದಲ್ಲಿದ್ದಾರೆ.

ಅದ್ಭುತ 18 ವರ್ಷಗಳ ವೃತ್ತಿಜೀವನ – ಆಂಡರ್ಸನ್ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದ ಈ ಹಂತವನ್ನು ಮುಟ್ಟಿದ ಆಂಡರ್ಸನ್, “ನನ್ನ 18 ವರ್ಷಗಳ ಕ್ರಿಕೆಟ್ ಪ್ರಯಾಣ ಅದ್ಭುತವಾಗಿದೆ. ನನ್ನ ಚೊಚ್ಚಲ ಪಂದ್ಯವನ್ನು ನಾನು ಇನ್ನೂ ಚೆನ್ನಾಗಿ ನೆನಪಿಸಿಕೊಳ್ಳುತ್ತೇನೆ. ನನ್ನ ವೃತ್ತಿಜೀವನದಲ್ಲಿ ಈ ಹಂತವನ್ನು ತಲುಪುತ್ತೇನೆ ಎಂದು ನನಗೆ ಖಾತ್ರಿಯಿರಲಿಲ್ಲ ಎಂದಿದ್ದಾರೆ. ತಮ್ಮ 18 ವರ್ಷಗಳ ವೃತ್ತಿಜೀವನದಲ್ಲಿ, ಜೇಮ್ಸ್ ಆಂಡರ್ಸನ್ ಇದುವರೆಗೆ 162 * ಟೆಸ್ಟ್ ಪಂದ್ಯಗಳಲ್ಲಿ 616 ವಿಕೆಟ್​ಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ:

ಕ್ರಿಕೆಟ್ ಆಟದಲ್ಲಿ ಮುನಿಸು, ಬುದ್ಧಿವಾದ ಹೇಳಿದ್ದಕ್ಕೆ ದ್ವೇಷ; ಕೊಲೆಗೆ ಯತ್ನಿಸಿ ಮನೆ ಮೇಲೆ ಗುಂಡಿನ ದಾಳಿ ನಡೆಸಿದ ವ್ಯಕ್ತಿ

ಟಿ20 ಕ್ರಿಕೆಟ್‌ನಲ್ಲಿ ವೇಗದ ಶತಕ, ಆರ್​ಸಿಬಿ ವಿರುದ್ಧ 38 ಎಸೆತಗಳಲ್ಲಿ ಶತಕ ಸಿಡಿಸಿದ್ದ ಡೇವಿಡ್ ಮಿಲ್ಲರ್​ಗೆ ಇಂದು ಹುಟ್ಟು ಹಬ್ಬ

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್