Junior Men’s Asia Cup Hockey: ಪಾಕ್​ ಮಣಿಸಿ ಕಪ್​ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಇಂದು ನಡೆದ ಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಜೂನಿಯರ್ ಏಷ್ಯಾಕಪ್ ಟೂರ್ನಿಯಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

Junior Men’s Asia Cup Hockey: ಪಾಕ್​ ಮಣಿಸಿ ಕಪ್​ ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಭಾರತ ಹಾಕಿ ತಂಡ

Updated on: Jun 02, 2023 | 10:47 PM

ಇಂದು ನಡೆದ ಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಜೂನಿಯರ್ ಏಷ್ಯಾಕಪ್ ಟೂರ್ನಿ (Junior Men’s Asia Cup Hockey) ಯಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಅಂಗದ್ ಬೀರ್ ಸಿಂಗ್ ಮತ್ತು ಅರೈಜೀತ್ ಸಿಂಗ್ ಹುಂಡಾಲ್ ಅವರ ಗೋಲುಗಳ ನೆರವಿನಿಂದ ಭಾರತ 2-1 ಗೋಲುಗಳಿಂದ ಎದುರಾಳಿ ಪಾಕಿಸ್ತಾನವನ್ನು ಮಣಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಗೆದ್ದ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆ ಕೋರಿದ್ದಾರೆ.

ಟ್ವೀಟ್​ ಮೂಲಕ ಶುಭ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಪುರುಷರ ಜೂನಿಯರ್ ಏಷ್ಯಾ ಕಪ್​ನಲ್ಲಿ ಅದ್ಭುತ ಗೆಲುವು ಸಾಧಿಸಿದ ನಮ್ಮ ಜೂನಿಯರ್ ಪುರುಷರ ಹಾಕಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಗೆಲುವು ಬೆಳೆಯುತ್ತಿರುವ ಯುವಕರಲ್ಲಿ ಪ್ರತಿಭೆ ಮತ್ತು ದೃಢನಿಶ್ಚಯವನ್ನು ಪ್ರತಿಬಿಂಬಿಸುತ್ತದೆ. ಅವರು ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: WTC Final 2023: ಡಬ್ಲ್ಯುಟಿಸಿ ಫೈನಲ್ ಗೆದ್ದರೆ ಕ್ರಿಕೆಟ್ ದುನಿಯಾದಲ್ಲಿ ಹೊಸ ಇತಿಹಾಸ ಬರೆಯಲಿದೆ ಟೀಂ ಇಂಡಿಯಾ..!

ನಾಲ್ಕನೇ ಭಾರಿ ಪ್ರಶಸ್ತಿ ಗೆದ್ದ ಭಾರತ

ಪಂದ್ಯಾವಳಿಯ ಪ್ರತಿ ಹಂತವನ್ನು ಗೆದ್ದ ಭಾರತೀಯ ಜೂನಿಯರ್ ತಂಡವು ರಿಪಬ್ಲಿಕ್ ಆಫ್ ಕೊರಿಯಾವನ್ನು 9-1 ಗೋಲುಗಳಿಂದ ಸೋಲಿಸಿ ಪಾಕಿಸ್ತಾನವನ್ನು ಸೋಲಿಸಿ ಫೈನಲ್​ಗೆ ಪ್ರವೇಶಿಸಿತು. 2004, 2008 ಮತ್ತು 2015 ರಲ್ಲಿ ಗೆಲುವು ಸಾಧಿಸಿದ ನಂತರ, ಭಾರತೀಯ ಜೂನಿಯರ್ ತಂಡವು ಜೂನಿಯರ್ ಏಷ್ಯಾ ಕಪ್​ನ ಅತ್ಯಂತ ಯಶಸ್ವಿ ತಂಡವಾಗಿದೆ.

ಇದನ್ನೂ ಓದಿ: ಎಸಿಸಿ ಉದಯೋನ್ಮುಖ ಮಹಿಳಾ ಏಷ್ಯಾಕಪ್​ಗೆ ಭಾರತ ‘ಎ’ ತಂಡ ಪ್ರಕಟ; ಶ್ವೇತಾ ಸೆಹ್ರಾವತ್​ಗೆ ನಾಯಕತ್ವ

ತಲಾ 2ಲಕ್ಷ ರೂ. ಬಹುಮಾನ

ಏಷ್ಯಾ ಕಪ್​ ಗೆದ್ದ ಭಾರತ ತಂಡದ ಸದಸ್ಯರಿಗೆ ಹಾಕಿ ಇಂಡಿಯಾ ತಲಾ 2 ಲಕ್ಷ ರೂ. ಹಾಗೂ ಕೋಚಿಂಗ್​ ಸಿಬ್ಬಂದಿಗೆ ತಲಾ 1 ಲಕ್ಷ ರೂ, ನಗದು ಬಹುಮಾನವನ್ನು ಪ್ರಕಟಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us