ನ.17 ರಿಂದ ಕಲಬುರಗಿಯಲ್ಲಿ ಅಂತರಾಷ್ಟ್ರೀಯ ಐಟಿಎಫ್ ಟೆನ್ನಿಸ್ ಟೂರ್ನಿ‌

ITF Tennis Tournament in Kalburgi: ಕಲಬುರಗಿಯಲ್ಲಿ ನವೆಂಬರ್ 17 ರಿಂದ 24 ರವರೆಗೆ ಅಂತರರಾಷ್ಟ್ರೀಯ ಟೆನಿಸ್ ಟೂರ್ನಿ ನಡೆಯಲಿದೆ. 8 ದೇಶಗಳ 15 ವಿದೇಶಿ ಆಟಗಾರರು ಸೇರಿದಂತೆ 75 ಆಟಗಾರರು ಭಾಗವಹಿಸಲಿದ್ದಾರೆ. 25,000 ಡಾಲರ್ ಬಹುಮಾನವಿದೆ. ಜಿಲ್ಲಾಧಿಕಾರಿಗಳು ಈ ಟೂರ್ನಿಗೆ ಅಗತ್ಯ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಉದ್ಘಾಟನಾ ಸಮಾರಂಭ ನವೆಂಬರ್ 19 ರಂದು ನಡೆಯಲಿದೆ.

ನ.17 ರಿಂದ ಕಲಬುರಗಿಯಲ್ಲಿ ಅಂತರಾಷ್ಟ್ರೀಯ ಐಟಿಎಫ್ ಟೆನ್ನಿಸ್ ಟೂರ್ನಿ‌
ಅಂತಾರಾಷ್ಟ್ರೀಯ ಟೆನಿಸ್ ಟೂರ್ನಿ
Follow us
ಪೃಥ್ವಿಶಂಕರ
|

Updated on:Nov 16, 2024 | 10:31 PM

ಬಿಸಿಲ ನಾಡು ಕಲಬುರಗಿಯಲ್ಲಿ ನಾಳೆಯಿಂದ ಅಂದರೆ, ನವೆಂಬರ್ 17 ರಿಂದ ಒಂದು ವಾರಗಳ ಕಾಲ ಟೆನ್ನಿಸ್ ಹಬ್ಬ ಶುರುವಾಗಲಿದೆ. ನಾಳೆಯಿಂದ ಆರಂಭವಾಗಿರುವ ಈ ಅಂತಾರಾಷ್ಟ್ರೀಯ ಟೆನಿಸ್ ಟೂರ್ನಿ (ಐಟಿಎಫ್) ನವೆಂಬರ್ 24 ರವರೆಗೆ ನಡೆಯಲ್ಲಿದ್ದು, ಈ ಪಂದ್ಯಾವಳಿಗೆ ಕಲಬುರಗಿ ಎರಡನೇ ಬಾರಿ ಆತಿಥ್ಯವಹಿಸುತ್ತಿದೆ. ಇನ್ನು ಈ ಟೂರ್ನಿಯಲ್ಲಿ 8 ರಾಷ್ಟ್ರಗಳ 15 ವಿದೇಶಿ ಆಟಗಾರರು ಪಾಲ್ಗೊಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ರಾಜ್ಯ ಲಾನ್‌ಟೆನ್ನಿಸ್ ಸಂಸ್ಥೆ ಆಶ್ರಯದಲ್ಲಿ ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಸಿಂಗಲ್ಸ್ ಮತ್ತು ಡಬಲ್ಸ್ ಟೂರ್ನಿ ಆಯೋಜಿಸಲಾಗಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಬರದಿಂದ ಸಾಗಿವೆ. ವಿವಿಧ ಇಲಾಖೆಯ ಅಧಿಕಾರಿಗಳನ್ನು ಮೇಲುಸ್ತುವಾರಿ ವಹಿಸಲಿದ್ದಾರೆ. ನಾಲ್ವರು ಕನ್ನಡಿಗರು ಸೇರಿ 75 ದೇಶಿಯ, ವಿದೇಶಿ ಪ್ರತಿಭಾನ್ವಿತ ಆಟಗಾರರು ಭಾಗವಹಿಸಲಿದ್ದಾರೆ. ಇದರಲ್ಲಿ ನಾಲ್ವರು ಕ್ರೀಡಾಪಟುಗಳು ವೈಲ್ಡ್ ಕಾರ್ಡ್ ಮೂಲಕ ಪ್ರವೇಶ ಪಡೆಯುವುದು ಸೇರಿ ಒಟ್ಟು 20 ಆಟಗಾರರ ಮುಖ್ಯ ಆಯ್ಕೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು,  8 ಆಟಗಾರರು ಎರಡು ಸುತ್ತಿನ ಅರ್ಹತಾ ಪಂದ್ಯಗಳ ನಂತರ ಪ್ರವೇಶ ಪಡೆಯಲಿದ್ದಾರೆ ಎಂದು ವಿವರಿಸಿದರು.

ನವೆಂಬರ್ 18 ರಂದು ಮಧ್ಯಾಹ್ನ 3 ಗಂಟೆಗೆ ಆಟಗಾರರ ಡ್ರಾ ನಡೆಯಲಿದ್ದು, ನವೆಂಬರ್ 19 ರಂದು ಬೆಳಗ್ಗೆ 8: 30 ಕ್ಕೆ ಉದ್ಘಾಟನಾ ಪಂದ್ಯಾವಳಿ ಜರುಗಲಿದೆ. ಹಾಗೆಯೇ ನವೆಂಬರ್ 23 ರಂದು ಡಬಲ್ಸ್ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ನವೆಂಬರ್ 24 ರಂದು ಮಧ್ಯಾಹ್ನ 12: 30 ಕ್ಕೆ ಸಿಂಗಲ್ಸ್ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ. ಈ ಈವೆಂಟ್​ಗಳ ವಿಜೇತರಿಗೆ 25000 ಡಾಲರ್ಸ್​ ಅಂದರೆ ಭಾರತೀಯ ರೂಪಾಯಿಯಲ್ಲಿ ಅಂದಾಜು 23 ಲಕ್ಷ ರೂ. ಬಹುಮಾನ ವಿತರಿಸಲಾಗುವುದು. ವಿಜೇತ ಕ್ರೀಡಾಪಟು 25 ರ‍್ಯಾಂಕಿಂಗ್ ಅಂಕಗಳನ್ನು ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದು, ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಇನ್ನು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಆಯೋಜನಾ ಸಮಿತಿ ಸದಸ್ಯರಾದ ಕೃಷಿ ಜಂಟಿ ನಿರ್ದೇಶಕ ಸಮದ್ ಪಟೇಲ್, ಅಬ್ದುಲ್ ಅಜಿಂ, ಕರ್ನಾಟಕದ ವೃತ್ತಿ ಪರ ಟೆನಿಸ್ ಆಟಗಾರ ಪೀಟರ್ ವಿಜಯಕುಮಾರ, ಕ್ರೀಡಾ ಇಲಾಖೆಯ ಸಹಾಯಕ ಆಯುಕ್ತರು ಮತ್ತಿತರರರಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:27 pm, Sat, 16 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ