AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kane Williamson: ನ್ಯೂಜಿಲ್ಯಾಂಡ್ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿದ ಕೇನ್ ವಿಲಿಯಮ್ಸನ್

ಫಾರ್ಮ್ ಕಳೆದುಕೊಂಡಿದ್ದ ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ನಾಯಕತ್ವದ ಬಗ್ಗೆ ಅಪಸ್ವರ ಕೇಳಿಬಂದಿದ್ದವು. ಇದರ ಬೆನ್ನಲ್ಲೆ ಕೇನ್ ಅವರು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ.

Kane Williamson: ನ್ಯೂಜಿಲ್ಯಾಂಡ್ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿದ ಕೇನ್ ವಿಲಿಯಮ್ಸನ್
ಕೇನ್ ವಿಲಿಯಮ್ಸನ್
TV9 Web
| Edited By: Rakesh Nayak Manchi|

Updated on:Dec 15, 2022 | 10:43 AM

Share

ಇತ್ತೀಚಿನ ಪಂದ್ಯಗಳಲ್ಲಿ ಫಾರ್ಮ್‌ ಕಳೆದುಕೊಂಡಿದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ (Kane Williamson) ಅವರು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದು, ಮುಂಬರುವ ಪಾಕಿಸ್ತಾನ ಪ್ರವಾಸಕ್ಕಾಗಿ ಟಿಮ್ ಸೌಥಿ (Tim Southee) ಅವರು ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ. “ನಾಯಕತ್ವವು ಮೈದಾನದ ಒಳಗೆ ಮತ್ತು ಹೊರಗೆ ಹೆಚ್ಚಿದ ಕೆಲಸದ ಹೊರೆಯೊಂದಿಗೆ ಬರುತ್ತದೆ ಮತ್ತು ನನ್ನ ವೃತ್ತಿಜೀವನದ ಈ ಹಂತದಲ್ಲಿ ಈ ನಿರ್ಧಾರಕ್ಕೆ ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಇನ್ನು ಕೇನ್ ವಿಲಿಯಮ್ಸನ್ ಬದಲಿಗೆ ಯಾರು ತಂಡವನ್ನು ಮುನ್ನಡೆಸಬಹುದು ಎಂಬ ಪ್ರಶ್ನೆಗೆ ಸ್ವತಃ ಕೇನ್ ಅವರೇ ಉತ್ತರಿಸಿದ್ದಾರೆ. “ಟಿಮ್ ಸೌಥಿ ಅವರನ್ನು ನಾಯಕನಾಗಿ ಮತ್ತು ಟಾಮ್ ಲ್ಯಾಥಮ್ ಅವರನ್ನು ಉಪನಾಯಕನಾಗಿ ಬೆಂಬಲಿಸಲು ನಾನು ಉತ್ಸುಕನಾಗಿದ್ದೇನೆ. ನನ್ನ ವೃತ್ತಿಜೀವನದ ಬಹುಪಾಲು ಅವರಿಬ್ಬರೊಂದಿಗೆ ಆಡಿದ್ದೇನೆ, ಅವರು ಉತ್ತಮ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸವಿದೆ” ಎಂದು ಕೇನ್ ವಿಲಿಯಮ್ಸನ್ ಹೇಳಿದ್ದಾರೆ.

ಇದನ್ನೂ ಓದಿ: ICC Rankings: ಐಸಿಸಿ ರ‍್ಯಾಂಕಿಂಗ್‌ನಲ್ಲಿ ಬರೋಬ್ಬರಿ 117 ಸ್ಥಾನ ಜಿಗಿದ ಇಶಾನ್ ಕಿಶನ್! ಕೊಹ್ಲಿಗೂ ಲಾಭ

ಬ್ಯಾಟರ್ ವಿಲಿಯಮ್ಸನ್ ಅವರು ಈಗ ಇಂಗ್ಲೆಂಡ್ ಟೆಸ್ಟ್ ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ಅವರಿಂದ ಅಧಿಕಾರ ವಹಿಸಿಕೊಂಡ ನಂತರ 2016 ರಿಂದ ಬ್ಲ್ಯಾಕ್‌ಕ್ಯಾಪ್‌ಗಳನ್ನು ಮುನ್ನಡೆಸಿದ್ದಾರೆ. ಟೆಸ್ಟ್ ನಾಯಕತ್ವದಿಂದ ಕೆಳಗಿಳಿದಿರುವುದನ್ನು ಹೊರತುಪಡಿಸಿದರೆ ಅವರು ಮೂರೂ ಸ್ವರೂಪಗಳ ಕ್ರಿಕೆಟ್ ತಂಡಗಳಲ್ಲಿ ನ್ಯೂಜಿಲೆಂಡ್ ಅನ್ನು ಪ್ರತಿನಿಧಿಸಲಿದ್ದಾರೆ.

“ಬ್ಲ್ಯಾಕ್‌ಕ್ಯಾಪ್ಸ್‌ಗಾಗಿ ಆಡುವುದು ಮತ್ತು ಎಲ್ಲಾ ಮೂರು ಸ್ವರೂಪಗಳಲ್ಲಿ ಕೊಡುಗೆ ನೀಡುವುದು ನನ್ನ ಮೊದಲ ಆದ್ಯತೆಯಾಗಿದೆ. ಅಲ್ಲದೆ ಮುಂಬರುವ ಕ್ರಿಕೆಟ್‌ಗಾಗಿ ಎದುರು ನೋಡುತ್ತಿದ್ದೇನೆ” ಎಂದು ವಿಲಿಯಮ್ಸನ್ ಹೇಳಿದ್ದಾರೆ.

32 ವರ್ಷದ ವಿಲಿಯಮ್ಸನ್ ನ್ಯೂಜಿಲೆಂಡ್ ತಂಡವನ್ನು ಎಲ್ಲಾ ಮಾದರಿಗಳಲ್ಲಿ ಒಟ್ಟು 333 ಪಂದ್ಯಗಳನ್ನು ಆಡಿದ್ದಾರೆ. ಈ ಪೈಕಿ 193 ಪಂದ್ಯಗಳಲ್ಲಿ ಕಿವೀಸ್ ಪಡೆಯ ನಾಯಕತ್ವ ವಹಿಸಿಕೊಂಡಿದ್ದಾರೆ. ಕೇನ್ ನಾಯಕತ್ವದಲ್ಲಿ ಕಿವೀಸ್ ಪಡೆ 99 ಪಂದ್ಯಗಳನ್ನು ಗೆದ್ದಿದೆ. ಟೆಸ್ಟ್ ತಂಡವನ್ನು ಮುನ್ನಡೆಸಲಿರುವ ಸೌಥಿ 346 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 22 ಬಾರಿ T20 ತಂಡವನ್ನು ಮುನ್ನಡೆಸಿದ್ದಾರೆ, ಅವರು ಈ ತಿಂಗಳ ಪಾಕಿಸ್ತಾನಕ್ಕೆ ಟೆಸ್ಟ್ ಪ್ರವಾಸದಲ್ಲಿ ತಂಡವನ್ನು ಮುನ್ನಡೆಸಿದಾಗ ನ್ಯೂಜಿಲೆಂಡ್‌ನ 31 ನೇ ಟೆಸ್ಟ್ ನಾಯಕ ಎಂದು ಎನಿಸಿಕೊಳ್ಳಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 am, Thu, 15 December 22

Follow Us
TV9 Web
TV9 Web

TV9 Kannada

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ