ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ: ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ದೆಹಲಿ: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದ ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಇಂದು ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆದರು. ಕಪಿಲ್ ದೇವ್ಗೆ ನಿನ್ನೆ ಌಂಜಿಯೋಪ್ಲಾಸ್ಟಿ ಹೃದ್ರೋಗ ಶಸ್ತ್ರಚಿಕಿತ್ಸೆ ಮಾಡಲಾಯಿತು. ಸರ್ಜರಿ ಬಳಿಕ ಚೇತರಿಸಿಕೊಂಡಿರುವ ಮಾಜಿ ಕ್ರಿಕೆಟಿಗ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಕಪಿಲ್ ದೇವ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಗ್ಗೆ ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡರು. Good News Kapil Paji is absolutely […]
ದೆಹಲಿ: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದ ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಇಂದು ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆದರು.
ಕಪಿಲ್ ದೇವ್ಗೆ ನಿನ್ನೆ ಌಂಜಿಯೋಪ್ಲಾಸ್ಟಿ ಹೃದ್ರೋಗ ಶಸ್ತ್ರಚಿಕಿತ್ಸೆ ಮಾಡಲಾಯಿತು. ಸರ್ಜರಿ ಬಳಿಕ ಚೇತರಿಸಿಕೊಂಡಿರುವ ಮಾಜಿ ಕ್ರಿಕೆಟಿಗ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಕಪಿಲ್ ದೇವ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಗ್ಗೆ ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡರು.
Good News Kapil Paji is absolutely fine & has been discharged from the hospital. Jai mata di.
— Chetan Sharma (@chetans1987) October 25, 2020