Karnataka Budget 2023: ಸಿದ್ದರಾಮಯ್ಯ ಬಜೆಟ್​ನಲ್ಲಿ ಕ್ರೀಡಾ ವಲಯಕ್ಕೆ ಸಿಕ್ಕಿದ್ದೇನು? ಇಲ್ಲಿದೆ ವಿವರ

Sports Sector Budget: ಈ ಬಾರಿಯ ಬಜೆಟ್ ಗಾತ್ರ 3.27 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಕ್ರೀಡಾ ವಲಯ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಅನುದಾನ ಮತ್ತು ಹೊಸ ಯೋಜನೆಗಳಿಗೆ ಕೋಟಿ ಕೋಟಿ ಹಣವನ್ನು ಮೀಸಲಿಡಲಾಗಿದೆ.

Karnataka Budget 2023: ಸಿದ್ದರಾಮಯ್ಯ ಬಜೆಟ್​ನಲ್ಲಿ ಕ್ರೀಡಾ ವಲಯಕ್ಕೆ ಸಿಕ್ಕಿದ್ದೇನು? ಇಲ್ಲಿದೆ ವಿವರ
ಕರ್ನಾಟಕ ಬಜೆಟ್
Follow us
ಪೃಥ್ವಿಶಂಕರ
|

Updated on: Jul 07, 2023 | 3:39 PM

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮುಖ್ಯಮಂತ್ರಿಯಾಗಿ ಇಂದು ತಮ್ಮ 7ನೇ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ 3.27 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಕ್ರೀಡಾ ವಲಯ (Karnataka Budget 2023) ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಅನುದಾನ ಮತ್ತು ಹೊಸ ಯೋಜನೆಗಳಿಗೆ ಕೋಟಿ ಕೋಟಿ ಹಣವನ್ನು ಮೀಸಲಿಡಲಾಗಿದೆ. ಈ ಬಾರಿಯ ಬಜೆಟ್​​ನಲ್ಲಿ ಸರ್ಕಾರ ಕ್ರೀಡಾ ಕ್ಷೇತ್ರದಲ್ಲೂ ಹಲವು ಯೋಜನೆಗಳನ್ನು ಪ್ರಕಟಿಸಿದೆ. ಹಾಗಾದರೆ ಸಿದ್ದರಾಮಯ್ಯನವರ ಬಜೆಟ್​ನಲ್ಲಿ ಕ್ರೀಡಾವಲಯಕ್ಕೆ (Sports Sector) ಸಿಕ್ಕಿದ್ದೇನು ಎಂಬುದನ್ನು ನೋಡುವುದಾದರೆ..

  1. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯವುಳ್ಳ ರಾಜ್ಯದ ಕ್ರೀಡಾಪಟುಗಳನ್ನು ತಯಾರಿಸಲು ಬೆಂಗಳೂರಿನಲ್ಲಿ ಬಾಸ್ಕೆಟ್‌ಬಾಲ್ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ಮೈಸೂರಿನಲ್ಲಿ ಸೈಕ್ಲಿಂಗ್ ವೇಲೋಡೋಮ್ ಅನ್ನು ತಲಾ 10 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
  2. ಕ್ರೀಡಾ ಚಟುವಟಿಕೆಗಳಲ್ಲಿ ವಿಶೇಷಚೇತನರ ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಅಗತ್ಯವಾದ ಮೂಲಭೂತ ಸೌಕರ್ಯಗಳು ಮತ್ತು ನುರಿತ ತರಬೇತುದಾರರ ಸೇವೆಯನ್ನು ಒದಗಿಸಲು 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
  3. ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲು ಐದು ಕೋಟಿ ಅನುದಾನವನ್ನು ಒದಗಿಸಲಾಗುವುದು ಮತ್ತು ಕ್ರೀಡಾಪಟುಗಳಿಗೆ ತಂಗಲು ಅನುಕೂಲವಾಗುವಂತೆ ಸುಸಜ್ಜಿತವಾದ ಕ್ರೀಡಾ ವಸತಿ ನಿಲಯವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು. ಇದಕ್ಕಾಗಿ 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
  4. ಒಲಂಪಿಕ್ ಹಾಗೂ ಪ್ಯಾರಾಲಿಂಪಿಕ್ ವಿಜೇತರಿಗೆ ಗ್ರೂಪ್ ಎ ಹುದ್ದೆ ಮತ್ತು ಏಷಿಯನ್ ಹಾಗೂ ಕಾಮನ್ ವೆಲ್ತ್ ಕ್ರೀಡಾ ವಿಜೇತರಿಗೆ ಗ್ರೂಪ್-ಬಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಪ್ರಸಕ್ತ ಸಾಲಿನಿಂದ ಕ್ರಮಕೈಗೊಳ್ಳಲಾಗುವುದು.
  5. ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಶೇ. 3 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು.
  6. ಕರ್ನಾಟಕ ಈಜು ಅಸೋಸಿಯೇಷನ್ ಸಹಭಾಗಿತ್ವದಲ್ಲಿ ರಾಜ್ಯದ ಪ್ರತಿಭಾವಂತ ಈಜು ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಯಶಸ್ವಿಯಾಗಿ ಭಾಗವಹಿಸಲು ತರಬೇತಿಯನ್ನು ನೀಡುವ ಸಲುವಾಗಿ ಮುಂದಿನ ಐದು ವರ್ಷಗಳವರೆಗೆ ಪ್ರತಿ ವರ್ಷ ಎರಡು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್