ಅಭಿನವ್- ಮಯಾಂಕ್ ಆರ್ಭಟ; ಕರ್ನಾಟಕಕ್ಕೆ 10 ವಿಕೆಟ್ ಜಯ

Vijay Hazare Trophy: ಕರ್ನಾಟಕವು ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಅರುಣಾಚಲ ಪ್ರದೇಶದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಅರುಣಾಚಲ ಪ್ರದೇಶ 166 ರನ್‌ಗಳಿಗೆ ಆಲೌಟ್ ಆಯಿತು. ಮಯಾಂಕ್ ಅಗರ್ವಾಲ್ ಮತ್ತು ಅಭಿನವ್ ಮನೋಹರ್ ಅವರ ಅಜೇಯ ಇನ್ನಿಂಗ್ಸ್‌ಗಳಿಂದ ಕರ್ನಾಟಕ ಸುಲಭ ಜಯ ಸಾಧಿಸಿತು.

ಅಭಿನವ್- ಮಯಾಂಕ್ ಆರ್ಭಟ; ಕರ್ನಾಟಕಕ್ಕೆ 10 ವಿಕೆಟ್ ಜಯ
ಮಯಾಂಕ್- ಅಭಿನವ್ (ಪ್ರಾತಿನಿಧಿಕ ಚಿತ್ರ)
Follow us
ಪೃಥ್ವಿಶಂಕರ
|

Updated on:Dec 28, 2024 | 6:37 PM

ಭಾರತದಲ್ಲಿ ನಡೆಯುತ್ತಿರುವ ದೇಶೀ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಟೂರ್ನಿಯಲ್ಲಿ ಇದುವರೆಗೆ ಆಡಿರುವ ಸತತ 4 ಪಂದ್ಯಗಳಲ್ಲೂ ಮಯಾಂಕ್ ಅಗರ್ವಾಲ್ ಪಡೆ ಗೆಲುವು ಸಾಧಿಸಿದೆ. ಇಂದು ನಡೆದ ತನ್ನ ನಾಲ್ಕನೇ ಪಂದ್ಯದಲ್ಲಿ ಅರುಣಾಚಲ ಪ್ರದೇಶವನ್ನು ಎದುರಿಸಿದ್ದ ಕರ್ನಾಟಕ ತಂಡ 10 ವಿಕೆಟ್​ಗಳ ಜಯ ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅರುಣಾಚಲ ಪ್ರದೇಶ ತಂಡ 166 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಜಯದ ನಗೆ ಬೀರಿತು.

ಅರುಣಾಚಲ ಪ್ರದೇಶದ ಪೆವಿಲಿಯನ್ ಪರೇಡ್

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಅರುಣಾಚಲ ಪ್ರದೇಶ ತಂಡಕ್ಕೆ ಮೊದಲ ವಿಕೆಟ್​ಗೆ 22 ರನ್​ಗಳ ಜೊತೆಯಾಟ ಸಿಕ್ಕಿತು. ಆದರೆ ಆ ಬಳಿಕ ತಂಡದ ಪೆವಿಲಿಯನ್‌ ಪರೇಡ್ ಶುರುವಾಯಿತು. ಕರ್ನಾಟಕದ ದಾಳಿಯ ಮುಂದೆ ಸಂಪೂರ್ಣವಾಗಿ ಶರಣಾದ ಅರುಣಾಚಲ ಪ್ರದೇಶದ ಆಟಗಾರರು ಬಂದಷ್ಟೇ ವೇಗವಾಗಿ ಪೆವಿಲಿಯನ್‌ ಸೇರಿಕೊಂಡರು.

ತಂಡದ ಪರ ಅಭಿನವ್ ಸಿಂಗ್ 71 ರನ್​ಗಳ ಹೋರಾಟದ ಇನ್ನಿಂಗ್ಸ್ ಆಡಿದರೆ, ಹಾರ್ದಿಕ್ ಹಿಮಾಂಶು ವರ್ಮಾ 38 ರನ್​ಗಳ ಕಾಣಿಕೆ ನೀಡಿದರು. ಆರಂಭಿಕನಾಗಿ ಕಣಕ್ಕಿಳಿದಿದ್ದ ರಾಜೇಂದ್ರ ಸಿಂಗ್ ಕೂಡ 30 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಮೂವರನ್ನು ಬಿಟ್ಟರೆ ಉಳಿದವರಿಂದ ಒಂದಂಕಿ ಮೊತ್ತ ದಾಟಲು ಸಾಧ್ಯವಾಗಲಿಲ್ಲ. ಇದರಲ್ಲಿ ತಂಡದ ಮೂವರು ಬ್ಯಾಟರ್​ಗಳಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಇಡೀ ತಂಡ 43.2 ಓವರ್​ಗಳಷ್ಟೇ ಬ್ಯಾಟಿಂಗ್‌ ಮಾಡಿ 166ರನ್​ಗಳಿಗೆ ಆಲೌಟ್ ಆಯಿತು. ಇತ್ತ ಕರ್ನಾಟಕ ಪರ ಬೌಲಿಂಗ್‌ನಲ್ಲಿ ಮಿಂಚಿದ ಹಾರ್ದಿಕ್ ರಾಜ್ ಹಾಗೂ ಕೌಶಿಕ್ ತಲಾ 4 ವಿಕೆಟ್ ಪಡೆದರೆ, ಶ್ರೇಯಸ್ ಗೋಪಾಲ್ ಹಾಗೂ ನಾಯಕ ಮಯಾಂಕ್ ಅಗರ್ವಾಲ್ ತಲಾ 1 ವಿಕೆಟ್ ಪಡೆದರು.

ಕರ್ನಾಟಕಕ್ಕೆ 10 ವಿಕೆಟ್ ಜಯ

ಅರುಣಾಚಲ ಪ್ರದೇಶ ನೀಡಿದ 166 ರನ್​ಗಳ ಗುರಿ ಬೆನ್ನಟ್ಟಿದ ಕರ್ನಾಟಕಕ್ಕೆ ಸ್ಫೋಟಕ ಆರಂಭ ಸಿಕ್ಕಿತು. ಇಂದಿನ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಅಭಿನವ್ ಮನೋಹರ್ ಹಾಗೂ ಮಯಾಂಕ್ ಅಗರ್ವಾಲ್ ಆರಂಭದಿಂದಲೇ ಹೊಡಿಬಡಿ ಆಟವನ್ನು ಆಡುವ ಮೂಲಕ ಅರುಣಾಚಲ ಪ್ರದೇಶ ತಂಡವನ್ನು ಆರಂಭದಲ್ಲೇ ಪಂದ್ಯದಿಂದ ಹೊರಹಾಕಿದರು. ಈ ಇಬ್ಬರು ಆಟಗಾರರು ಮುರಿಯದ ವಿಕೆಟ್​ಗೆ 171ರನ್​ಗಳ ಜೊತೆಯಾಟವನ್ನಾಡುವ ಮೂಲಕ ತಂಡಕ್ಕೆ 10 ವಿಕೆಟ್​ಗಳ ಜಯ ತಂದುಕೊಟ್ಟರು.

ಈ ವೇಳೆ ಸತತ ಎರಡನೇ ಶತಕ ಸಿಡಿಸಿದ ನಾಯಕ ಮಯಾಂಕ್ ಅಗರ್ವಾಲ್ 45 ಎಸೆತಗಳಲ್ಲಿ 7 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್​ಗಳ ನೆರವಿನಿಂದ ಅಜೇಯ ಶತಕ ಸಿಡಿಸಿದರೆ, ಮಯಾಂಕ್​ಗೆ ಸಾಥ್ ನೀಡಿದ ಅಭಿನವ್ ಮನೋಹರ್ ಕೂಡ 41 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 66 ರನ್​ಗಳ ಇನ್ನಿಂಗ್ಸ್ ಆಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Sat, 28 December 24

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ